ಈ ಪುಟವನ್ನು ಪ್ರಕಟಿಸಲಾಗಿದೆ
ವಿನೋದ ಕಥೆಗಳು
೧೮೯
ಎರಡು ಉಂಡಿ ತಿನ್ನು" ಎಂದನು ಗಂಡ. ಮೈಮೇಲಿನ ಬಟ್ಟೆಬರೆಗಳೆಲ್ಲ ಸುಟ್ಟಿದ್ದರಿಂದ ಇಬ್ಬರೂ ಬರಿ ಬತ್ತಲೆಯೇ ಜಿಗಿದು ಕಡೆಗೆ ಬಂದರು. “ದೆವ್ವ ಬಂದವೆಂ"ದು ಚೌಕಿದಾರ ಓಡಿಹೋದನು.
ಊರ ಗೌಡನು ತನ್ನ ಅರಿವೆ ಒಗೆದು ತರಲಿಕ್ಕೆ ಅಗಸನಿಗೆ ಹೇಳಿದನು. ಆದರೆ ಅಗಸನು ಹಳ್ಳಕ್ಕೆ ಹೋಗಲು ಸಿದ್ಧನಾಗಲಿಲ್ಲ. ಹಳ್ಳದ ದಂಡೆಯಲ್ಲಿಯೇ ಸುಡುಗಾಡು ಇತ್ತು. ದೆವ್ವ ಬೆನ್ನುಹತ್ತುವವೆಂದು ಚೌಕಿದಾರನು ಊರಲ್ಲೆಲ್ಲ ಹೇಳಿದ್ದನು. ಗೌಡನು ಅಗಸನಿಗೆ ಒತ್ತಾಯದಿಂದ ಅರಿವೆಗಳನ್ನು ಕೊಟ್ಟು ತಾನೂ ಕುದುರೆ ಹತ್ತಿ ಬೆನ್ನ ಹಿಂದೆ ಹೋದನು. ಬಟ್ಟೆ ಒಗೆದು ದಡದಲ್ಲಿ ಒಣಹಾಕಲಾಯಿತು. ಆ ಬಟ್ಟೆಗಳನ್ನು ತೆಗೆದುಕೊಳ್ಳಲು ಇಬ್ಬರೂ ಆ ಗಂಡಹೆಂಡತಿ ಓಡುತ್ತ ಬಂದರು.
“ಅಯ್ಯಯ್ಯೋ ದೆವ್ವ ಹಿಡಿಯುತ್ತವೆ” ಎನ್ನುತ್ತ ಅಗಸ ಮತ್ತು ಗೌಡ ಇಬ್ಬರೂ ಓಡಿದರು. ಅಂದು ಆ ಗಂಡ ಹೆಂಡತಿ ಅಗಸನ ಬಟ್ಟೆ ಹಾಕಿಕೊಂಡು ಬಂದಂದಿನಿಂದ ಹಾರುವರು, ಲಮಾಣಿಗರಾದರಂತೆ.
•