ಈ ಪುಟವನ್ನು ಪ್ರಕಟಿಸಲಾಗಿದೆ
ವಿನೋದ ಕಥೆಗಳು
೧೯೯
“ಬನಶಂಕರಿ ಜಾತ್ರೆ ಅದಕ್ಕೂ ಗಡಚು. ಆ ನುಗ್ಗಾಟದಲ್ಲಿ ಒಳ್ಳೊಳ್ಳೆಯವರು ಜಬ್ಬಾಗಿ ಹೋಗುತ್ತಿದ್ದರು.
“ಅಷ್ಟೊಂದು ಜನ ಸುಮ್ಮನೆ ಒಂದೆಡೆಗೇ ನಿಂತಿರಲಿಲ್ಲ. ಅತ್ತಿಂದ ಇತ್ತ, ಇತ್ತಿಂದ ಅತ್ತ ಬರುತ್ತಲೇ ಇತ್ತು ; ಹೋಗುತ್ತಲೇ ಇತ್ತು” ಎಂದು ಹೇಳುವ ಸಮಯದಲ್ಲಿ ಅತ್ತಿಂದ ಇತ್ತ, ಇತ್ತಿಂದ ಅತ್ತ ಅಂಗಿಯ ತೋಳುಗಳಿಂದ ಒಳಿತಾಗಿ ಮೂಗು ಒರೆಸಿಕೊಂಡನು ಸಂಕಣ್ಣ.
“ಥೂ ಥೂ ಥೂ | ಒಂದು ಹೆಜ್ಜೆ ಮುಂದೆ ಸಾಗೇನೆಂದರೆ ತಿಕ್ಕಾಟ ಮುಕ್ಕಾಟ ! ತಿಕ್ಕಾಟ ಮುಕ್ಕಾಟ !” ಎನ್ನುತ್ತ ಕೈ ಬೆರಳುಗಳ ಕತ್ತರಿಮಾಡಿ ತಿಕ್ಕಿ ತಿಕ್ಕಿ ಹುರುಕಿನ ತುರಿಕೆಯನ್ನು ತಮ್ಮಣಿಗೊಳಿಸಿಕೊಂಡನು ಹುಣಸಿಕ್ಕ.
ಈ ರೀತಿ ಅಡ್ಡಸೋಗು ಮುಗಿಸಿ ಅವರಿಬ್ಬರೂ ಒಳಗೆ ಬಂದು ಹಿಮ್ಮೇಳದವರನ್ನು ಕೂಡಿಕೊಂಡರು. ಮುಂದಿನ ಅರ್ಧರಾತ್ರಿಯನ್ನು ಅವನು ಮಾತುಕೊಟ್ಟಂತೆ ಕಳೆಯುವುದಕ್ಕೆ ಸಾಧ್ಯವಾಯಿತು. ಮೇಳದವರಿಗೆ ಜಾತ್ರೆಯ ಗದ್ದಲದ ಅರ್ಥವಾಗದೆ ಇರಲಿಲ್ಲ.
•