ಈ ಪುಟವನ್ನು ಪ್ರಕಟಿಸಲಾಗಿದೆ
೪
ಜನಪದ ಕಥೆಗಳು
ಹೆಂಡತಿ ನಡುವೆ ಬಾಯಿಹಾಕಿ ಏನೋ ಹೇಳತೊಡಗಲು - “ನೀನು ಸುಮ್ಮನಿರೇ” ಎಂದು ತನ್ನ ತನ್ನ ಹೆ೦ಡತಿಯನ್ನು ಬೆದರಿಸುತ್ತಾನೆ.
ಅ೦ದು ರಾತ್ರಿಯೇ ಮೈನಾವತಿಯ ಗಂಡನು ಸ್ತ್ರೀವೇಷದಲ್ಲಿರುವ ರಾಜ ಕುಮಾರನ ಕೋಣೆಗೆ ಹೋದನು. ಅಲ್ಲಿ ಬನಿಯನ್, ಅ೦ಡರವೇರ್ ಧರಿಸಿ ಮಲಗಿದ್ದ ರಾಜಕುಮಾರನು ಎಚ್ಚತ್ತವನೇ ಜಾಕುವಿನಿಂದ ಆತನ ಮೂಗನ್ನೇ ಬಿಡಿಸಿದನು. ಮೊದಲೇ ಒಕ್ಕಣ್ಣ, ಈಗ ಮೂಗುಬೇರೆ ಕಳಕೊಂಡು ಮತ್ತಿಷ್ಟು ಅವಲಕ್ಷಣವಾದನು.
ರಾಜಕುಮಾರನು ಸೈರ ಮುದುಕಿಯ ಮನೆಗೆ ತೆರಳಿದನು. ಆಗ ಪ್ರಧಾನಿಯ ಮಗನು ಕುದುರೆ ಹಿಡಕೊಂಡು ಮೈನಾವತಿಯ ಮನೆಗೆ ಹೋಗಿ - “ನನ್ನ ಸೊಸೆಯನ್ನು ಕಳಿಸಿರಿ” ಎಂದು ಕೇಳುತ್ತಾನೆ. “ನಿನ್ನ ಮಗನೇ ಕರಕೊಂಡು ಹೋಗಿದ್ದಾನೆ” ಎಂದು ಮೈನಾವತಿಯ ಮಾವನು ಮರುನುಡಿಯುತ್ತಾನೆ.
“ಸೊಸೆಯನ್ನು ತಂದಿಟ್ಟರೆ ಹೀಗೆ ಮಾಡಬೇಕೆ ? ನನ್ನ ಸೊಸೆಯಿಲ್ಲದಿದ್ದರೆ ನಿನ್ನ ಸೊಸೆಯನ್ನು ಕಳಿಸಿಕೊಡಿರಿ. ಯಾರಿಗೆ ಹೇಳುವಿರಿ” ಎಂದು ಮೈನಾವತಿಯನ್ನು ಬಲಾತ್ಕಾರದಿಂದ ಕರಕೊಂಡು ಹೋದನು.
ರಾಜಕುಮಾರನು ಮೈನಾವತಿಯ ಸಂಗಡ ಲಗ್ನ ಮಾಡಿಕೊಂಡನು.
•