ಹೋದವು. ಅದಕ್ಕಾಗಿ ಎಲೆಯಾಗ ಮಾನಾ ಮುಚ್ಚಗೊಂಡು ಕುಂತುಬಿಟ್ಟಳು. ದೇವರ ಭಜನಿ ಪ್ರಾರ್ಥನಾ ಸುರು ಇಟ್ಟಳು.
ಒಂದು ದಿನ ರಾಜ ಮತ್ತು ಪ್ರಧಾನಿ ಇಬ್ಬರೂ ಅಡವ್ಯಾಗಿಂದು ಹಾಯ್ದು ಹೊ೦ಟಿದ್ದರು. ಭಜನೀ ಕೇಳಿದರು. ಗಿಡದಾಗ ಯಾರು ಇದ್ದಾರ ಎಂದು ವಿಚಾರ ಮಾಡಲಿಕ್ಕಾಗಿ ತೊಪ್ಪಲ ಧರಿಸಿದ ಹೆಣ್ಣುಮಗಳು ಕಣ್ಣೀಗಿ ಬಿದ್ದಳು. ರಾಜಾ ಬೀಸಿ ಒಗೆದ ಶಾಲು ಉಟಗೊಂಡು ಅಭೇದಾ ಕೆಳಗೆ ಇಳಿದು ಬಂದಳು. ಅವಳ ರೂಪ ನೋಡಿ ರಾಜಾ ಮಳ್ಳಾಗಿ ಬಿಟ್ಟ. ರಾಜಾನ ಜೊತಿಗಿ ಅವಳದು ಲಗ್ನವಾಗಿ ಬಿಟ್ಟಿತು. ಮುಂದೆ ವರ್ಷ ತುಂಬಿ ಒಂದು ಹೆಣ್ಣು ಕೂಸಿಗೆ ಜನ್ಮ ಕೊಟ್ಟಳು. ಮುಂದೆ ನಾಲ್ಕು ವರ್ಷದಾಗ ಒಂದು ಗಂಡು ಕೂಸೂ ಹುಟ್ಟಿತು. ಎರಡೂ ಕೂಸುಗಳು ಪಾಟಿ ಪುಸ್ತಕ ಬೇಡಿ ಅಳಲಿಕ್ಕ ಹತ್ತಿದವು. ತಾನೂ ಸಣ್ಣಾಕಿ ಇದ್ದಾಗ ತಾಯಿ ತಂದೀಗಿ ಸಾಮಾನ ಬೇಡಿ ಅತ್ತ ನೆನಪಾಯಿತು. ಅದರಂಗ ಈಗ ತಾಯಿ ತಂದೀ ನೆನಪು ತಗಿದು ಅತ್ತಳು. ರಾಜಾ ಅಂತಾನ—"ಮನಸೀಗಿ ರಂಜಯಾಕ ಮಾಡಕೋತಿ. ನಿಮ್ಮ ಅವ್ವ ಅಪ್ಪ ಇದ್ದ ಠಿಕಾಣೀ ಹೇಳು. ಹೋಗಾಣು"- ಎಂದನು.
ದಂಡು ಸಮೇತ ಸೇನಾಪತಿ ಪಟ್ಟಣಕ್ಕೆ ಹೋದಳು. ನಡುವೆ ಹಾದ್ಯಾಗ ಒಂದು ಕಡೀ ವಸತಿ ಆಯ್ತು. ಢೇರೆ ಹೊಡೆದು ಅಡಿಗಿ ಅಂಬಲಿ ಎಲ್ಲಾ ಆಯ್ತು. ಅಭೇದಾ ಮತ್ತ ಭಜನೀ ಚಾಲೂಮಾಡಿದಳು. ಪ್ರಧಾನೀಗಿ ರಾಣಿ ಮ್ಯಾಗ ಮನಸ್ಸಾಗಿತ್ತು. ಭಜನಿ ಸಾಕು ಎಂದು ರಾಣೀಗಿ ಒತ್ತಾಯಮಾಡಿದ. ಅವನ ಮನಸ್ಸನಾಗಿಂದು ತಿಳಿದು ರಾಣಿ, ಮಕ್ಕಳ ಜೊತೆ ಕೂಡಿ ಬಾವ್ಯಾಗ ಸಿಡಿದಳು. ಬಾ ಅಂತ ಎಷ್ಟು ಬೇಡಿಕೊಂಡರೂ ರಾಣಿಯೇನೂ ಜಪ್ ಅನ್ಹಿಲ್ಲ. ಸಿಡಿಯ ಮ್ಯಾಗ ಹೋಗಿ ಕುಂತಳು. "ನಾವೆಲ್ಲಿ ಹೋಗಾರಿ" ಎಂದು ಪ್ರಧಾನಿ ಚಿಂತಿಮಾಡಿದ. ರಾಣಿ ಅವ್ವ-ಅಪ್ಪನ ಮನೀಗಿ ಹೋಗ್ಯಾಳ ಎಂದು ಹೇಳಲು ಎಲ್ಲಾ ಸೇವಕರೀಗಿ ತಾಕೀತು ಮಾಡಿದ. ಖರೇ ಹೇಳುವ ಭರದಾಗ ಮಾತ್ರ ಅವಳಿಗಿ ಅಲ್ಲೇ ಅಡಿವ್ಯಾಗ ಬಿಟ್ಟು ತಿರುಗಿ ಅರಮನಿಗಿ ಹೋದರು.
ಈಕಡಿ ಅಭೇದಾ ಮಾತ್ರ ಭಾವಿಯಾಗಿಂದು ಹೊ೦ಟು ಬಂದು, ಗವಾರಿ ದನಾ ಕಾಯುವನ ಕೇಳ್ತಾಳ—"ನೀನಾರು" ಎಂದು.
"ನನಗ ನೀ ಮಾಡಿಕೊಂತಿಯೇನು?"
"ನಾ ಮಾಡಿಕೊಂತೀನಿ. ಆದರ ನೀ ಉಟ್ಟ ಬಟ್ಟೇ ಕೊಡಬೇಕು. ನಾ ರಾತ್ರಿ ಬಂದು ಗುಡ್ಯಾಗ ಮಿಲಾಸಬೇಕು" ಎಂದು ವಚನಕೊಟ್ಟಳು.