ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೩೮

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ರಮ್ಯಕಥೆಗಳು

೧೧

ಅಭೇದಾ ದನ ಕಾಯುವನ ಬಟ್ಟೇ ತಗೊಂಡು, ಕ್ಯಾವಿ ಬಣ್ಣದ ನೀರಾಗ ಎದ್ದಿದಳು. ಗಂಡಸರದು ಜುಬ್ಬಾ ಹಾಕೊಂಡು ಸೇನಾಪತಿ ಪಟ್ಟಣಕ ಹೊ೦ಟಳು. ಭಜನಿ ಕೀರ್ತನ ಹಾಡಕೋತ. ಊರಾಗ ಹೊಂಟಾಗ ಜನ ಭಕ್ತೀಲೆ ಅಡ್ಡಬಿತ್ತು ಅಂದು ಸೇನಾಪತಿ ಪಟ್ಟಣದಾಗ ಅಭೇದಾ ಕೀರ್‍ತನ ಹೇಳಿದಳು.

ರಾಜಾ ಹೇಣತೀಗಿ ಹುಡುಕಲಿಕ್ಕ ಬಂದ. ಗವಾರಿ ದನ ಕಾಯುವವ ಪ್ರಧಾನಿ ಬಂದರು. ಗುಡ್ಡದೊಳಗಿನ ಜಂಗಮ ಬಂದ. ತಾಯಿ ತಂದೀನೂ ಬಂದರು. ಅವರೆಲ್ಲರ ಮುಂದೆ ಅಭೇದಾ ತನ್ನ ಕತೀನೇ ಕೀರ್ತನೆ ಮಾಡಿ ಹೇಳಿದಳು. ಅವರೆಲ್ಲ ಕೇಳಿದರು. ಕೀರ್ತನಾ ಮುಗಿಸಿ ಭಜನೀ ಮಾಡಕೋತ ಕುಂತಾಗ ತಾಯಿ ಮಗಳ ಖೂನಾ ಹಿಡಿದಳು. ರಾಜಾ ಅಭೇದಾಳ ಕತಿಕೇಳಿ ಖೂನಾ ಹಿಡಿದ. ಆಗ ಅಭೇದಾ ಸಾಧೂರ ಬಟ್ಟೀ ತಗಿದು ತನ್ನ ಪರಿಚಯ ಹೇಳಿದಳು. ಎಲ್ಲರೂ ಮುಂದ ಸುಖದಿಂದ ಇದ್ದರು.

 •