ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೪೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ರಮ್ಯಕಥೆಗಳು

೧೫

ಆ ಬಳಿಕ ಹೆಂಡತಿಗೆ ಹೇಳುತ್ತಾನೆ. — "ನಾವು ಬೇಟೆಯಾಡಲು ಎಕ್ಕೀಹಳ್ಳಿಗೆ ಹೋಗುವೆವು. ನಾವು ಬರುವಷ್ಟರಲ್ಲಿ ಹನ್ನೆರಡು ಮೊಟ್ಟೆ ನಡೆಯುವ ಭಾರಂಗ ಭಾವಿಯನ್ನು ಅಗಿಸಬೇಕು. ಜವೆ, ಮೆಂತಿ ಬೆಳೆಯುವ ತೋಟ ತಯಾರಮಾಡಬೇಕು. ಈಗ ಮಲ್ಲಿಗೆ ಹೂವಿನ ಸರವನ್ನು ನಿನ್ನ ಕೊರಳಲ್ಲಿ ಹಾಕುತ್ತೇನೆ. ಅದು ಬಾಡಲಾರದಂತೆ ನೋಡಿಕೊಳ್ಳಬೇಕು. ಅಲ್ಲಿಗೆ ನಾ ಬರುವಷ್ಟರಲ್ಲಿ ಒಂದು ಮಗಾ ತಯಾರು ಮಾಡಬೇಕು."

ರಾಜನು ಬೇಟಿಯಾಡುವುದಕ್ಕೆ ಹೊರಟುಹೋದನು.

ಹೆಂಡತಿ ಕೈಯೊಳಗಿನ ದುಡ್ಡು ಖರ್ಚುಮಾಡಿ ಭಾರಂಗ ಭಾವಿ ಅಗಿಸಿದಳು. ಮೊಟ್ಟೆ ಹೊಡಿಸಿ ತೋಟ ತಯಾರಿಸಿದಳು.

ಗಂಡಸಿನ ವೇಷತೊಟ್ಟು ಹೊರಬಿದ್ದಳು. ಒಂದೂರು ದಾಟಿ ಸಾಗಿದಾಗ ಅಲ್ಲಿಯ ರಾಜನ ಮಗಳು ಮಾಡಿದ ಶಪಥವನ್ನು ಕೇಳಿದಳು. ಏನೆಂದರೆ ಹರಿಯುವ ನೀರ ಮೇಲಿಂದ ಕುದುರೆ ಹಾರಿಸಬೇಕು. ಕುದುರೆಗೆ ನೀರು ತಟ್ಟಬಾರದು. ಅ೦ಥವರನ್ನು ತಾನು ಲಗ್ನವಾಗುತ್ತೇನೆ. ಗಂಡು ವೇಷದಲ್ಲಿದ್ದ ಆ ಹೆಣ್ಣು ಮಗಳು ನದಿಯ ಮೇಲಿಂದ ಕುದುರೆಯನ್ನು ಹಾರಿಸಿದಳು, ಚಬಕಿಯಿ೦ದ ಹೊಡೆದು, ಅದನ್ನು ಕಂಡು ರಾಜನ ಮಗಳು ಲಗ್ನ ಮಾಡಿಕೊಳ್ಳಲು ಮುಂದೆ ಬಂದಳು.

ಪಂಥ ಗೆದ್ದಿದ್ದಕ್ಕಾಗಿ ಪಂಥದ ವೀಳೆ ಎತ್ತಲಾಯಿತು. ಆದರೆ ಸದ್ಯಕ್ಕೆ ತನ್ನದೊಂದು ವ್ರತವಿದೆಯೆಂದೂ ಈಗ ಲಗ್ನವಾಗಲಾರೆನೆಂದೂ ಪುರುಷ ವೇಷದಲ್ಲಿರುವ ಹೆಣ್ಣು ಮಗಳು ಹೇಳಿದಳು. ಆದ್ದರಿಂದ ತಲವಾರದೊಂದಿಗೆ ಲಗ್ನ ಮಾಡಿಕೊಳ್ಳುವುದು ನಿರ್ಧಾರವಾಯಿತು. ಹಾದಿಗೆ ಹಂದರ ಹಾಕಿ, ಬೀದಿಗೆ ಛಳಿ ಕೊಟ್ಟು ಲಗ್ನವನ್ನು ಸಡಗರದಿಂದ ಮಾಡಿದರು. ರಾಜನ ಮಗಳನ್ನು ಕರಕೊಂಡು ಮುಂದೆ ಹೊರಟಳು.

ಎಕ್ಕೆಹಳ್ಳಿಯನ್ನು ತಲುಪಿದಳು. ಅಲ್ಲಿ ಪಾತರನಾಚು ನಡೆದಿದೆಯೆಂದು ಕೇಳಿ, ನೆಟ್ಟಗೆ ಪಾತರದವರ ಮನೆಗೆ ಹೋದಳು. ದಾಸಿಯರಿಗೆ ಹೇಳಿ ಸೀರೆ ಸಜ್ಜುಮಾಡಿಕೊಂಡಳು. ಬೇಟೆಯಾಡಲು ಹೋದ ರಾಜನ ಎದುರಿಗೆ ನಾಚು ಮಾಡಿದಳು. ರಾಜನು ಹೆಂಡತಿಯನ್ನು ಗುರುತಿಸಲಿಲ್ಲ. ರಾಜನ ಮನಸ್ಸು ಮಾತ್ರ ಅವಳ ಮೇಲೆ ಕುಳಿತಿತು. ರಾಜನ ಸಂಗಡ ಅಂದಿನ ರಾತ್ರಿ ಕಳೆದಳು. ಬೆಳಗಾಗುತ್ತಲೆ ರಾಜನ ಕೈಯೊಳಗಿನ ಉಂಗುರ ಮತ್ತು ಶಾಲು ಇಸಗೊಂಡಳು. ಅಲ್ಲದೆ ಒ೦ದು ಚೇಟಿಯನ್ನೂ ಬರೆಯಿಸಿಕೊಂಡಳು. ಎರಡು ರಾತ್ರಿ ಕಳೆದು ಆಕೆ ಹೋಗಿಬಿಟ್ಟಳು.