ವಿಷಯಕ್ಕೆ ಹೋಗು

ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೪೩

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
೧೬
ಜನಪದ ಕಥೆಗಳು

ರಾಜಧಾನಿಗೆ ಬಂದಳು. ಅಷ್ಟರಲ್ಲಿ ಭಾರಂಗ ಭಾವಿ ತಯಾರಾಗಿದೆ. ರಾಜನ ಮಗಳನ್ನು ಒಳಗೆ ಕರೆದು ಸೀರೆಯುಟ್ಟು ನುಡಿಯುತ್ತಾಳೆ - "ತಂಗೀ, ಇದೆಲ್ಲ ನಮ್ಮದೇ. ಹಿಂದಿನಿಂದ ನಿನ್ನ ಗಂಡ ಹೊರಟಿದ್ದಾನೆ. ನೀ ಏನೂ ಕಾಳಜಿ ಮಾಡಬೇಡ."

ಮುಂದೆ ಬಯಕೆ ಕಾಡಹತ್ತಿ ಒಂಬತ್ತು ತಿ೦ಗಳು ಒಂಬತ್ತು ದಿನಕ್ಕೆ ಗಂಡು ಮಗುವಿಗೆ ಜನ್ಮವಿತ್ತಳು.

ರಾಜ ಬರುತ್ತಾನೆ. ಹೆಂಡತಿಯನ್ನು ಯಾವಾಗ ಹೊಡೆಯಲಿ ಎಂದು ವಿಚಾರಿಸುತ್ತಾನೆ. ತಾನು ಬರುವಷ್ಟರಲ್ಲಿ ಭಾರಂಗ ಭಾವಿ ತಯಾರಾಗಿದೆ. ಅರಮನೆಗೆ ಬರುತ್ತಾನೆ. "ನೀರು ಕುಡಿಯಿರಿ" ಎ೦ದು ಹೆಂಡತಿ ಸ್ಥಾಗತಿಸುತ್ತಾಳೆ. ಬಗಲಲ್ಲಿ ಕೂಸು ಇದೆ. ಕೊರಳೊಳಗಿನ ಹೂವಿನ ಸರ ಬಾಡಿಲ್ಲ.

"ಮಗಾ ಎಲ್ಲಿಯದು?" ಎಂದು ಹೆಂಡತಿಗೆ ಕೇಳಿದರೆ ಆಕೆ ಉಂಗುರ, ಶಾಲು ಮತ್ತು ಚೀಟಿ ತೋರಿಸುತ್ತಾಳೆ. ರಾಜನ ಸಿಟ್ಟೆಲ್ಲ ಇಳಿಯುತ್ತದೆ. ತಾನು ಕೇಳಿದಂತೆ ಮೊಟ್ಟೆಯಿದೆ; ತೋಟವಿದೆ. ಮೇಲೆ ಮಗನೂ ಹುಟ್ಟಿದ್ದಾನೆ. ಇಷ್ಟಾದ ಬಳಿಕ ಹೊಸ ರಾಜಕುಮಾರಿಯೂ ಬಂದಿದ್ದಾಳೆ.

ಈ ಎಲ್ಲ ಐಶ್ಚರ್ಯವನ್ನು ನೋಡಿ ರಾಜನಿಗೆ ಸುಖವೆನಿಸಿತು. ಹೆಂಡತಿಯನ್ನು ಹೊಡೆಯುವ ವಿಚಾರವನ್ನು ಬಿಟ್ಟುಕೊಟ್ಟನು.

 •