ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೪೫

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೧೮

ಜನಪದ ಕಥೆಗಳು

ಅದನ್ನು ಕೇಳಿ ಆ ಹುಡುಗನು ಗಾಬರಿಗೊಂಡು ಹೇಳುತ್ತಾನೆ—"ಈತನೇನು ನನ್ನ ಮಾವ ಅಲ್ಲ. ನಾನು ಇವನಿಗೆ ಅಳಿಯನಲ್ಲ. ನನ್ನ ಹೆಂಡತಿ ಮನೆಯಲ್ಲಿದ್ದಾಳೆ."

"ನಿಜವಾಗಿಯೂ ಈತ ನನ್ನ ಅಳಿಯ. ಈಗ ಓಡಿಹೊರಟಿದ್ದಾನೆ" ಎಂದು ನುಡಿದನು ಆ ಕಳ್ಳ.

ನೆರೆದ ಮಂದಿ ಅಂದಿತು—"ನಿನ್ನ ಮಗಳನ್ನು ಕರೆತಾ. ಆಕೆ ಬಂದು ಈತನ ಕೈಹಿಡಿದಳೆಂದರೆ ಇವನೇ ಅವಲಗಂಡ ಎಂದು ಖಾತರಿಯಾಗುತ್ತದೆ."

ಕಳ್ಳನು ಮನೆಗೆ ಹೋಗಿ ಮಗಳಿಗೆ ಹೇಳುತ್ತಾನೆ—"ಅಲ್ಲೊಬ್ಬ ಬೆಳ್ಳಗೆ ತೆಳ್ಳಗೆ ಇದ್ದಾನೆ. ಬಗಲಲ್ಲಿ ಸೆಲ್ಲೆ ಹಿಡಿದಿದ್ದಾನೆ. ಹೊತ್ತ ಹೊರಡುವ ದಿಕ್ಕಿಗೆ ಮುಖ ಮಾಡಿದ್ದಾನೆ. ನೀನು ಹೋಗಿ ಅವನ ಕೈಹಿಡಿ. ನೆರೆದ ಮಂದಿಯೆಲ್ಲ ಅವನು ನಿನ್ನ ಗಂಡನೆಂದು ನಿಶ್ಚಯಿಸಿ ಅವನನ್ನು ನಮ್ಮೊಡನೆ ಕಳಿಸುತ್ತಾರೆ. ಅವನನ್ನು ಕೊಂದು ಅವನ ಹತ್ತಿರವಿರುವ ಬಂಗಾರದ ಲಾಲಗಳನ್ನು ತೆಗೆದುಕೊಳ್ಳೋಣ."

ಆ ಯುಕ್ತಿಯಂತೆ ಕಳ್ಳಾನ ಮಗಳು ಬಂದು ಆತನ ಕೈಹಿಡುಯುತ್ತಾಳೆ. "ನೀನು ಸಿಟ್ಟುಸಿಟ್ಟಿನಿಂದ ನನ್ನನ್ನು ಬಿಟ್ಟು ಬಂದರೆ, ನಾ ಹೇಗೆ ಇರಲಿ ನಿನ್ನ ಬಿಟ್ಟು" ಎಂದು ರಾಗ ತೆಗೆಯುತ್ತಾಳೆ. ಆದ್ದರಿಂದ ಆತನು ಕಳ್ಳನಮಗಳ ಬೆನ್ನು ಹತ್ತಲೇ ಬೇಕಾಯಿತು. ಕಳ್ಳನ ಮಗಳನ್ನೂ 'ಅಳಿಯ'ನನ್ನೂ ಕರಕೊಂಡು ಹೋಗುತ್ತಾನೆ, ಮಗಳನ್ನು ಒತ್ತಟ್ಟಿಗೆ ಕರೆದು ಯುಕ್ತಿ ಹೇಳುತ್ತಾನೆ—"ಪ್ರೀತಿಮಾಡಲಿಕ್ಕೆ ಹೋದಾಗ ಆತನನ್ನು ಕೊಡಲಿಯಿಂದ ಕಡಿ."

ಕಳ್ಳನ ಮಗಳು ಬೇರೊಂದು ಉಪಾಯಹೇಳುವಳು—"ಜೋರಾಬಾರಿ ಮಾಡಿ ಇವನ ಹೊಟ್ಟ್ಯಾಗ ವಿಷ ಹಾಕಬೇಕು. ಎರಡು ದುಡ್ಡಿನ ವಿಷ ತೆಗೆದುಕೊಂಡು ಬಾ. ನಾ ರೊಟ್ಟಿ ಮಾಡಿ ಇವನಿಗೆ ಉಣಸತೀನಿ."

ವಿಷ ತರುವುದಕ್ಕೆ ಕಳ್ಳನು ಹೋಗಲು, ಆತನ ಮಗಳು ಈತನಿಗೆ ಹೇಳುತ್ತಾಳೆ - "ಬುಟ್ಟ್ಯಾಗ ನಾಕು ರೊಟ್ಟಿ ಇಟ್ಟಿರತೀನು. ಮ್ಯಾಲಿನ ಎರಡು ವಿಷದ್ದು. ಅವನ್ನು ಬಿಟ್ಟು ತೆಳಗಿನ ಎರಡುರೊಟ್ಟಿ ತಿನ್ನು".

ಈಗ ಅವಳ ಮನಸ್ಸು ಇವನಲ್ಲಿ ನೆಟ್ಟಿತ್ತು.

ಮಗಳು ರೊಟ್ಟಿ ಮಾಡಿದಳು. ತಂದಿ-ಮಗಳು ರೊಟ್ಟಿ ಉಂಡರು; ನೀರು ಕೊಂಡರು. ಬುಟ್ಟಿಯಲ್ಲಿ ನಾಲ್ಕು ರೊಟ್ಟಿಯಿಟ್ಟು ಬುಟ್ಟಿಯನ್ನೇ ಆತನಿಗೆ ಕೊಟ್ಟರು. ಕಳ್ಳನ ಮಗಳು ಹೇಳಿದಂತೆ, ಮೇಲಿನ ಎರಡುರೊಟ್ಟಿ ಬಿಟ್ಟು ತೆಳಗಿನ ಎರಡುರೊಟ್ಟಿ