ವಿಷಯಕ್ಕೆ ಹೋಗು

ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೫೦

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ರಮ್ಯಕಥೆಗಳು
೨೩

ಮೂವರು ಹಾದಿಯಲ್ಲಿ ಹೊರಟಾಗ ಆಕೆ ಕೇಳುತ್ತಾಳೆ—"ಒಂದು ತಿಂಗಳು ನಮ್ಮಲ್ಲಿ ನೌಕರಿ ಮಾಡುವಿರೇನು?" "ತಗ್ಗಿಗೆ ಹೋಗಿ ತಲೆ ಹೊಡೆಯಬೇಕಾಗುತ್ತದೆ" ಎಂದು ಹೇಳುತ್ತಾಳೆ.

"ಯಾಕಾಗಲೊಲ್ಲದು" ಎಂದು ಹೇಳಲು ತಿಪಲು ಮಾಡಿ, ಕೋಮಟಿಗರ ಹುಡುಗನನ್ನು ಹೊಡೆದು ಹಾಕುತ್ತಾರೆ.

ಬೇಳೆ, ಅಕ್ಕಿ ತಂದು ಕಡಾಯಿ ಏರಿಸಿ ಹುಗ್ಗಿ ತಯಾರು ಮಾಡುತ್ತಾಳೆ. ಊರಿಗೇ ಊಟ ಕೊಡುತ್ತಾಳೆ.ಕಟ್ಟಿಗೆ ಮಾರುತ್ತ ಬಂದ ಹುಡುಗನನ್ನು ಕೇಳುತ್ತಾಳೆ, ನಿನ್ನ್ನ ಪರಿಸ್ಥಿತಿ ಹೀಗೇಕೆ ಎಂದು. ಅವನು ತನ್ನ ಕಥೆಯನ್ನೆಲ್ಲ ಹೇಳುತ್ತಾನೆ. ಆಗ ತಾನು ಅವನ ಹೆಂಡತಿಯೆಂದು ಸ್ಪಷ್ಟಮಾಡುತ್ತಾಳೆ.

ಊರುಮಂದಿಯೆಲ್ಲ ಊಟಕ್ಕೆ ಬಂದರು. ಆದರೆ ಅಕ್ಕಸಾಲಿಗನು ಬಂದಿರಲಿಲ್ಲ. ಇಬ್ಬರು ಗಮಾಸ್ತರು ಅವನ ಮನೆಗೆ ಹೋಗಿ ಅವನಿಗೆ ಕೋಮಟಿಗನ ಹೆಣ ತೋರಿಸಿದರು. ಆಗ ಅಕ್ಕಸಾಲಿಗನು ಬಂಗಾರದ ಲಾಲ ಕೊಡುತ್ತಾನೆ. ಆಗ ಕಳ್ಳನ ಮಗಳು ಅನ್ನುತ್ತಾಳೆ ಮಾವನಿಗೆ—"ನಾನು ನಿನ್ನ ಮಗನ ಹೆಂಡತಿ ಗಟ್ಟಿ. ನೀವು ಅತ್ತೆಮಾವ ಗಟ್ಟಿ. ನಾ ನಿಮ್ಮ ಸೊಸೆ ಗಟ್ಟಿ".

 •