ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೫೯

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೩೨

ಜನಪದ ಕಥೆಗಳು

ಕಟ್ಟಡವಿಯ ಆ ಸತ್ಪುರುಷನನ್ನು ಕಂಡು, ತಾವಿತ್ತ ಬಟ್ಟಲು ಏನೂ ಕೊಡಲಿಲ್ಲವೆಂದು ಹೇಳಿನು. "ದಾರಿಯಲ್ಲಿ ಆ ಬಟ್ಟಲನ್ನು ಗಂಟಿನಿಂದ ಕಡೆಗೆ ತೆಗೆದಿದ್ದೆಯಾ" ಎಂದು ಮುತ್ತಯ್ಯ ಕೇಳಿದರೆ—"ಒಮ್ಮೆ ಹಸಿವೆಯಾದಾಗ ಅದನ್ನು ಪೂಜಿಸಲು ಹೊರಗೆ ತೆಗೆದಿದ್ದೆ. ಆಗ ಅದು ಕೆಲಸಕೊಟ್ಟಿತು. ಇನ್ನೊಮ್ಮೆ ಒಂದು ಹಳ್ಳಿಯಲ್ಲಿ ವಸತಿ ಮಾಡಿದಾಗ ಆ ಮನೆಯವನಿಗೆ ತೋರಿಸಲು ತೆಗೆದಿದ್ದೆ ಎಂದು ಮರುನುಡಿದನು.

"ನಿನ್ನ ಬಟ್ಟಲು ಕಳುವಾದದ್ದು ಅದೇ ಮನೆಯಲ್ಲಿ. ಈ ಸಾರೆ ಮಂತ್ರಿಸಿದ ಎರಡು ಬಡಿಗೆ ಕೊಡುವೆನು. ಈ ಸಲವೂ ಆ ಮನೆಯಲ್ಲಿ ವಸತಿಮಾಡು. ಈ ಬಡಿಗೆಗಳು ನಿನ್ನ ಬಟ್ಟಲು ಇಸಗೊಡುವವು" ಎಂದು ನುಡಿದು ಆ ಸತ್ಪುರುಷನು ಎರಡು ಬಡಿಗೆಗಳನ್ನು ಅವನ ಕೈಗಿತ್ತನು.

ಹಿಂದಿನ ಸಾರೆ ಕೇಳಲು ಮರೆತ ಎರಡು ಮಾತುಗಳನ್ನೂ ಈ ಸಾರೆ ವೃದ್ಧಮುನಿಗೆ ಕೇಳಿಕೊಂಡನು—"ನನಗೆ ದಾರಿಯಲ್ಲಿ ಅಡ್ಡಗಟ್ಟಿದ ಹಾವಿನ ಕಣ್ಣು ಹೋಗಿದ್ದರಿಂದ ದಾರಿಕಾರರು ತುಳಿಯುತ್ತ ಎಡಹುತ್ತ ಹೋಗುತ್ತಾರೆ. ಕಣ್ಣು ಯಾವಾಗ ಬರುವವು ಕೇಳಿಕೊಂಡು ಬರಹೇಳಿದೆ ಆ ಹಾವು."

"ಆ ಹಾವು ಕಟ್ಟಿದ ಹುತ್ತಿನಲ್ಲಿ ಅಪಾರ ದ್ರವ್ಯವಿದೆ. ಅದನ್ನೆಲ್ಲ ದಾನಮಾಡಿದರೆ ಎರಡೂ ಕಣ್ಣು ಬರುವವು" ಎಂದನು ಮುನಿ.

ಇನ್ನೊಂದು ಪ್ರಶ್ನೆ—"ಆ ಸಾಹುಕಾರನು ಅಗಿಸುವ ಬಾವಿಯಲ್ಲಿ ನೀರು ಯಾವಾಗ ಬೀಳವವು?"

"ಆ ಸಾಹುಕಾರ ಇದ್ದೊಬ್ಬ ಮಗಳನ್ನು ಕನ್ಯಾದಾನಮಾಡಿ ಮದುವೆ ಮಾಡಿ ಕೊಟ್ಟರೆ ಬಾವಿಗೆ ಸಾಕಷ್ಟು ನೀರು ಬೀಳುವದು" ಮುನಿಯ ಉತ್ತರ.

ಮಂತ್ರಿಸಿದ ಎರಡು ಬಡಿಗೆಗಳನ್ನು ತೆಗೆದುಕೊಂಡು ಆ ಬಾಲಕನು ತನ್ನೂರ ಹಾದಿ ಹಿಡಿದನು. ಹೊತ್ತು ಮುಳುಗುವ ಸಮಯಕ್ಕೆ ಹಿಂದಿನ ಸಾರೆ ವಸತಿಮಾಡಿದ ಆ ಹಳ್ಳಿಗೆ ಬಂದು, ಅದೇ ಮನೆಯಲ್ಲಿ ತಂಗಿದನು. ಮನೆಯವರಿಗೆ ಈ ಸಾರೆಯ ಪ್ರವಾಸಕಥೆಯನ್ನೆಲ್ಲ ಹೇಳಿದನು. ಅದರಿಂದ ಮನೆಯವರಿಗೆ ಹೊಸ ಅಸೆ ಹುಟ್ಟಿತು.

ಅತಿಥಿಯನ್ನು ಅದಾವುದೋ ನೆವದಿಂದ ಹೊರಗೆ ಕಳಿಸಿ, ಅವನ ಗಂಟಿಗೆ ಕೈ ಹಚ್ಚುವದೇ ತಡ, ಮಂತ್ರದ ಆ ಬಡಿಗೆಗಳು ಸರತಿಯಂತೆ ಕುಸುಬಿ ಬಡೆದಂತೆ ಬಡಿಯತೊಡಗಿದವು. ಏಟು ತಾಳಲಾರದೆ ಮನೆಯವನು ಹಿಂದಿನ ತಪ್ಪು ಒಪ್ಪಿಕೊಂಡು ಕದ್ದಿಟ್ಟುಕೊ೦ಡ ಆ ಬಟ್ಟಲನ್ನು ಬಾಲಕನಿಗೆ ಕೊಟ್ಟನು.