ಅದನ್ನೆಲ್ಲ ಕೇಳಿಕೊಂಡು ಇನ್ನೊಂದು ಮನೆಯ ಸೊಸೆಯು ತನ್ನ ಗಂಡನಿಗೆ ದುಂಬಾಲಬಿದ್ದು, ಅತ್ತೆಯ ಗೊಂಬೆಯನ್ನು ಮಾಡಿಸಿ ತರಿಸಿದಳು. ಆಡಿಗೆಮನೆಯಲ್ಲಿರಿಸಿದಳು. ಕ್ಷಣಕ್ಷಣಕ್ಕೂ ಸಲಹೆ ಕೇಳಿವಳು. ಕೊನೆಗೆ ಗೊಂಬೆಯನ್ನೆತ್ತಿಕೊಂಡು ನೆರೆಹಳ್ಳಿಯ ಸಂತೆಗೂ ಹೊರಟಳು. ಸಂತೆಯಲ್ಲಿ ಅಷ್ಟೊಂದು ಕೆಲಸವಿಲ್ಲದಿದ್ದರೂ ಹೊತ್ತು ಮುಳುಗಿಸಿದಳು. ಅಂದಿನ ರಾತ್ರಿ ಅದೇ ಊರಲ್ಲಿ ಕಳೆಯಬೇಕಲ್ಲವೇ?
ಹಾದಿಬಿಟ್ಟು ತುಸು ಒಳಗಿರುವ ಗಿಡವನ್ನೇರಿ ಕುಳಿತು ರಾತ್ರಿ ಕಳೆಯುವದಕ್ಕೆ ನಿಶ್ಚಯಿಸಿದಳು. ಸರಿರಾತ್ರಿಯ ಹೊತ್ತಿಗೆ ಆ ಗಿಡದ ಕೆಳಗೆ ಅದೇ ಕಳ್ಳರು ಬಂದು ತಮ್ಮ ಹಂಚುಪಾಲಿನ ಕೆಲಸದಲ್ಲಿ ತೊಡಗಿದರು. ಅದನ್ನು ಕಂಡು ಗಿಡವೇರಿ ಕುಳಿತವಳ ಕೈಕಾಲು ಥರಥರಿಸತೊಡಗಿದವು. ಕೈಯೊಗಿನ ಗೊಂಬೆಯನ್ನು ಬಿಟ್ಟು ಬಟ್ಟಳು. ಅದು ಕೆಳಗೆ ಅ ಕಳ್ಳರ ಮುಂದೆಯೇ ಬಿತ್ತು. ಏನೆಂದು ನೋಡುವಷರಲ್ಲಿ ಗೊಂಬೆ. ಕಳೆದವಾರವೂ ಇಂಥದೇಗೊಂಬೆ ತಮ್ಮನ್ನು ಹೆದರಿಸಿತೆಂದು ನೆನೆಸಿದರು. ಈ ಸಾರೆಯೂ ಗೊಂಬೆ ಬೆನ್ನಹತ್ತಬೇಕೇ ಕೈ ತೊಳೆದುಕೊಂಡು ಎನ್ನ್ನುತ್ತ, ಅದು ಎಲ್ಲಿಂದ ಬಿತ್ತೆಂದು ಶೋಧಮಾಡಲು ಗಿಡದ ಮೇಲೆ ದೃಷ್ಟಿಹಾಯಿಸುವಷ್ಟರಲ್ಲಿ ಅವರ ಕಣ್ನಿಗೆ ಒಬ್ಬ ಹೆಂಗಸು ಕಾಣಿಸಿದಳು. "ಮರ್ಯದೆಯಿಂದ ಕೆಳಗಿಳಿದು ಬಾ" ಎಂದು ಹೇಳಲು ಆಕೆ ನಡುಗುತ್ತ ಗಿಡದಿಂದ ಕೆಳಗಿಳದು ಬಂದಳು. ಕಳ್ಳರು ಆಕೆಯ ಬಳಿಯಲ್ಲಿರುವ ಸಂತೆಯ ಗಂಟುಗಳನ್ನೆಲ್ಲ ಕಸುಗೊಂಡು, ಗೆಬ್ಬೆಗೆರಡು ಏಟುಕೊಟ್ಟು "ಹೋಗಿನ್ನು" ಎಂದರು.
ಆಕೆ ತಾನು ಆಶೆಪಟ್ಟು ಮಾಡಿದ ತಗಲು ಪರಾಮರಿಕೆಗಾಗಿ ಪಶ್ಟ್ಟಾತ್ತಾಪಪಟ್ಟು ಗಲ್ಲಗಲ್ಲ ಬಡಿದುಕೊಳ್ಳುತ್ತ ತನ್ನೂರಿಗೆ ಹೋಗಿ ಯಾವ ಸುದ್ದಿಯನ್ನು ಹೊರಹಾಕದೆ ಮಿಡುಕುತ್ತ ಕುಳಿತಳು.