ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೭೦

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ರಮ್ಯಕಥೆಗಳು

೪೧

ಬಂತು. ಮಗಳ ಬಳಿಯಲ್ಲಿ ಏತಕ್ಕೂ ಹಣವಿರಲಿಲ್ಲ. ಅದು ಗೊತ್ತಿದ್ದರೂ ತನ್ನಲ್ಲಿರುವ ಹಣ ತೆಗೆದು ಕೊಡಲಿಲ್ಲ.

ಕಾಲುನೋವಿನಿಂದ ಮಿಡುಕುವ ತಂದೆಯನ್ನು ಉಪಚರಿಸಬೇಕೆಂದು ಮಗಳು ಹತ್ತಿರಕ್ಕೆ ಬಂದರೂ ತಂದೆ ತನ್ನನ್ನು ಮುಟ್ಟಗೊಡಲಿಲ್ಲ. ಆದರೆ ಆತನಿಗೆ ನಿದ್ರೆ ಹತ್ತಿದಾಗ ಮಗಳು ಆತನ ಕಾಲಬಟ್ಟೆ ಬಿಚ್ಚುವಷ್ಟರಲ್ಲಿ ನಾಣ್ಯಗಳೆಲ್ಲ ಚೆಲ್ಲಾಡಿದವು. ತಂದೆಗೆ ಎಚ್ಚರವೂ ಆಯಿತು. "ಇಷ್ಟು ಹಣ ಹತ್ತಿರ ಇರಿಸಿಕೊಂಡೂ, ನಮ್ಮ ಗೋಳಾಟದಲ್ಲಿ ನೆರವಾಗಲಿಲ್ಲವಲ್ಲ ನೀನು" ಎಂದು ತಂದೆಗೆ ಮಗಳು ಸ್ಪಷ್ಟವಾಗಿಯೆ ನುಡಿದಳು.

"ನಾನು ಈ ಹಣಕ್ಕಾಗಿಯೇ ಮನೆಯನ್ನೂ ರಾಜ್ಯವನ್ನೂ ಬಿಟ್ಟು ಬಂದಿದ್ದೇನೆ. ನನ್ನ ಜೀವಹೋಗುವ ಪ್ರಸಂಗ ಬಂದರೂ ನಾನು ಯಾರಿಗೂ ಹಣ ಕೊಡುವುದಿಲ್ಲ"

ಎಂದು ತಂದೆ ಹೇಳಿಬಿಟ್ಟು ಮುಂದಿನ ಹಾದಿ ಹಿಡಿದನು.

ಒಂದು ಕಟ್ಟಡವಿ. ಹೊತ್ತ ಮುಳುಗಿದೆ. ಮುಂದೆ ಒಂದು ಗುಹೆ ಕಾಣಿಸಿತು. ಹತ್ತಿರ ಹೋದರೆ ಅದರ ಬಾಗಿಲಲ್ಲಿ ಸತ್ತ ಪ್ರಾಣಿಗಳ ಅಸ್ಥಿಪಂಜರಗಳು ಹರಡಿಕೊಂಡಿದ್ದವು. ಅದನ್ನು ಕಂಡು ರಾಜನಿಗೆ ಭಯವೆನಿಸಿತು. ಆದರೂ ಗುಹೆಯ ಜಾಗಿಲಲ್ಲಿ ಕುಳಿತುಕೊಂಡನು. ಅಷ್ಟರಲ್ಲಿ ಮನುಷ್ಯಪ್ರಾಣಿಯ ವಾಸನೆಹಿಡಿದು ಒಂದು ಹುಲಿ ಅಲ್ಲಿಗೆ ಬಂದುದೇ ಅವನ ಮೇಲೆ ಹಾರಿ ಕೊಂದು ತಿಂದು, ಉಳಿದುದನ್ನು ಗುಹೆಯಲ್ಲಿ ಒಗೆದು ಮತ್ತೆ ಹೋಯಿತು ಅರಣ್ಯಕ್ಕೆ.

ರಾಜನ ಅಸ್ಥಿಪಂಜರವನ್ನು ನರಿಗಳು ಗುಹೆಯೊಳಗಿಂದ ಹೊರಗೆ ಎಳತಂದು ಹೊಟ್ಟೆತುಂಬ ತಿಂದವು. ಹದ್ದು ಕಾಗೆಗಳು ನೆರೆದು ಅವನ ದೇಹವನ್ನು ಹರಿದು ಕೊಂಡು ತಿನ್ನುವಾಗ ಬೆಳ್ಳಿಯ ರೂಪಾಯಿಗಳೆಲ್ಲ ಚೆಲ್ಲಾಪಿಲ್ಲಿಯಾಗಿ ಬಿದ್ದವು.

ಆ ಅರಣ್ಯದಲ್ಲಿ ಏಳು ಜನ ಕಳ್ಳ ಸೋದರರಿದ್ದರು. ಅವರು ಕಳವು ಮಾಡಿ ತಂದ ಹಣವನ್ನು ನಿತ್ಯದಂತೆ ಗುಹೆಯ ಮುಂದೆ ಕುಳಿತು ಹಂಚಿಕೊಳ್ಳುವಾಗ ಸತ್ತು ಬಿದ್ದ ಹೆಣದ ಸುತ್ತಲು ಚೆಲ್ಲಾಡಿದ ಹಣವನ್ನೆಲ್ಲ ಒಟ್ಟುಗೂಡಿಸಿ ಎಣಿಸಿ ನೋಡಿದರೆ ಸಾವಿರ ರೂಪಾಯಿ ಇದ್ದವು.

ಮನೆಯಿಂದ ಬುತ್ತಿ ತರುವದಕ್ಕಾಗಿ ಕಳ್ಳರು ತಮ್ಮ ಚಿಕ್ಕ ತಮ್ಮನನ್ನು ಊರೊಳಗೆ ಕಳಿಸಿದ್ದರು. ಬುತ್ತಿಕಟ್ಟಿಕೊಂಡು ತಿರುಗಿ ಬರುವಾಗ ಅವನಲ್ಲಿ ದುರ್ಬುದ್ಧಿ ಹುಟ್ಟಿಕೊಂಡಿತು. ಆರು ಜನ ಅಣ್ಣಂದಿರನ್ನೆಲ್ಲ ಕೊಂದುಹಾಕಿದರೆ ಅಷ್ಟೆಲ್ಲ ದ್ರವ್ಯ ತನ್ನದಾಗುವದೆದು ಇಲಿಪಾಷಾಣ, ಶಂಖಪಾಷಾಣ ಎಂಬ ವಿಷಗಳನ್ನು ಅರಣ್ಯದಲ್ಲಿ