ಎಂದು ಬಾವಿಯೊಳಗಿನ ರಾಜನ ರುಂಡವು ಹೇಳಿದಂತಾಯಿತು.
ಮಂತ್ರಿ ಬಾವಿಗೆ ಬೀಳುವುದನ್ನು ಬಿಟ್ಟುಕೊಟ್ಟು ಕುದುರೆ ಹತ್ತಿ ಹನ್ನೆರಡುಗಾವುದ ದೂರ ಹೋದನು. ಅಲ್ಲಿಯ ಒಂದು ಮರಹತ್ತಿ ಕೆಳಗೆ ಬಿದ್ದು ಸಾಯಬೇಕೆಂದು ಯೋಚಿಸಿದನು. ಆದರೆ ಮರದಿಂದ ಹಾರಿದಾಗ ಸಾಯದೆ ಬರಿ ಕೈಕಾಲು ಮುರಿದರೇನುಗತಿ ಮುಂದೆ? ಅದರಿಂದ ಉರಲು ಹಾಕಿಕೊಂಡು ಸಾಯುವುದೇ ಒಳ್ಳೆಯದೆಂದು ಬಗೆದನು. ಸತ್ತುಬಿದ್ದರೆ ಪೆಟ್ಟುಹತ್ತಬಾರದೆಂಬ ಸುತ್ತಲಿನ ಅಡವಿಯಿಂದ ಬೆರಣಿಗಳನ್ನು ಆಯ್ಡು ತಂದು, ಮರದ ಕೆಳಗೆ ರಾಸಿಹಾಕಿ ಬಳಿಕ ಉರಲು ಹಾಕಿಕೂಂಡು ಸತ್ತನು.
ಒಂದು ಹುಲಿವೇನ್ನೇರಿ, ಅಲ್ಲಿಂದ ಅವನ ಹೆಣದ ಮೇಲೆ ಜಿಗಿದು ಕುಳಿತಿದ್ದರಿಂದ ಆ ಭಾರಕ್ಕೆ ಹಗ್ಗ ಹರಿದು ಹೆಣವು ಬೆರಣೆಯ ರಾಸಿಯ ಮೇಲೆ ಬಿತ್ತು. ಹುಲಿ ನೆಲಕ್ಕೆ ಹಾರಿ ಅವನ ಮಾಂಸ ತಿಂದು ಹೋಯಿತು. ಉಳಿದುದನ್ನು ನರಿಗಳು ಬಂದು ಹರಕೊಂಡು ತಿಂದವು.
ಬೇಟೆಗೆಂದು ಹೋದ ರಾಜನು ಇನ್ನೂ ಬರಲಿಲ್ಲವೆಂದು ರಾಣಿಗೆ ಬಹಳ ಚಿಂತೆಯಾಯಿತು. ಅವನನ್ನು ಹುಡುಕಲು ಹೋದ ಚಾರರು, ಒಂದು ಅಡವಿಯಲ್ಲಿ ಯಾರವೋ ಅಸ್ಥಿಪಂಜರಗಳು ಮಾತ್ರ ಬಿದ್ದಿವೆಯೆಂದೂ, ಹರಕುಬಟ್ಟೆ- ಬೆಳ್ಳಿಯ ನಾಣ್ಯಗಳು ಹರಡಿವೆಯೆಂದು ಸುದ್ದಿ ತಂದರು.
ನಾಲ್ಕು ದಿನಗಳಾದ ಬಳಿಕ ರಾಣಿ ಸೈನ್ಯದೊಡನೆ ಅರಣ್ಯಕ್ಕೆ ಹೋಗಿ ಶೋಧ ಮಾಡಿದಾಗ ರಾಜನ ಕಿರೀಟ, ಕರ್ಣಕುಂಡಲ ಸಿಕ್ಕಿದವು. ಅಸ್ಥಿಪಂಜರಗಳಿಗೆ ಅಗ್ನಿಸಂಸ್ಕಾರಮಾಡಿಸಿ, ರಾಜಧಾನಿಗೆ ಬಂದಳು. ಆ ಬಳಿಕೆ ಅಪರಕರ್ಮ ಮಾಡಿಸುವುದಕ್ಕೆ ಏರ್ಪಾಡು ನಡೆಸಿದಳು.
ರಾಣಿಯು ಮಗನನ್ನು ಹತ್ತಿರ ಕರೆದು ಅವನಿಗೆ ಹೇಳಬೇಕಾದುದನ್ನೆಲ್ಲ ಹೇಳಿ, ತಾನು ದುಃಖದಿಂದ ಅನ್ನ ನೀರು ಬಿಟ್ಟು ಕೊರಗಿ ಕೊರಗಿ ಸತ್ತುಹೋದಳು.