ವಿಷಯಕ್ಕೆ ಹೋಗು

ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೭೬

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ರಮ್ಯಕಥೆಗಳು
೪೯

ಸ್ಥಳ ನೋವಿಲ್ಲದಿಲ್ಲ. ಸಾಯುತ್ತೇನೆ ನನ್ನ ದೊರೆಯೇ ಹೇಚ್ಛಿನ ನೋವು!" ಹಾದಿಬೀದಿ ಉಡುಗಿಸಿ, ಹಾಲಿನ ಚಳಿಕೊಡಿರಿ. ಹಾದಿಯಲ್ಲಿ ನಿಂತವರೆಲ್ಲ ಬದಿಗಾಗಿರಿ. ಸಂಗಮ್ಮನ ತಾಯಿ ಅಳುತ್ತ ಬರುತ್ತಿದ್ದಾಳೆ.

ತಿಪ್ಪೆಯನ್ನು ಉಡುಗಿಸಿರಿ, ತುಪ್ಪದ ಚಳಿಕೊಡಿರಿ. ತಿಪ್ಪೆಯೊಳಗಿನ ಮಂದಿಯೆಲ್ಲ ಬದಿಗಾಗಿರಿ. ಸಂಗಮ್ಮನ ತಂದೆ ಅಳುತ್ತ ಬರುತ್ತಿದ್ದಾನೆ.

ಸಂಜ್ಞೆಯಿಂದ ತಾಯಿತಂದೆಗಳನ್ನು ಹತ್ತಿರಕ್ಕೆ ಕರೆದು ಕಿವಿಯಲ್ಲಿ ಹೇಳಿದಳು -ತಾನು ಹೇಳಬೇಕಾದುದನ್ನು. ಆ ಜೀವಬಿಟ್ಟು ಮೃತ್ಯುವನ್ನು ಗೆದ್ದಳು. ಮುಗಿಲ ದಾರಿಯಲ್ಲಿ ನಿಂತು ಕಿತ್ತೂರದೊರೆಯನ್ನು ಈಡಾಡಿದಳು.

ತಲೆಯಲ್ಲಿ ಚಂಡುಹೂವಿನ ದಂಡೆಯಿಂದ ಶೋಭಿಸುತ್ತಿರುವ ಸಂಗಮ್ಮನನ್ನು ಬಾಳೆಯ ಬನದಲ್ಲಿ ಬಯತಿರಿಸಿದರು.

 •