ವಿಷಯಕ್ಕೆ ಹೋಗು

ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೭೯

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
೫೨
ಜನಪದ ಕಥೆಗಳು

ಬಾಯಿ ಒಣಗಿತು. ದುಃಖ ಒತ್ತರಿಸಿ ಬಂದಿತು - “ಕಲ್ಲಣ್ಣ, ನನ್ನನ್ನು ಅಗಲಿದೆಯಾ? ಇನ್ನಾರೊಡನೆ ನಾನು ಕುಸ್ತಿ ಆಡಲಿ ?” ಎಂದು ಗೆಳೆಯನಿಗೆ ದುಃಖಾಂಜಲಿ ಅರ್ಪಿಸಿದನು.

“ಭೂಮಿ ತಿರುಗಿದರೂ ಇಂಥ ಸತಿ ಸಿಗುವುದಿಲ್ಲ” ಎಂದು ಹೆಂಡತಿಯ ನಿಷ್ಠೆ-ಗುಣಗಳನ್ನು ಒಂದೇ ಮಾತಿನಲ್ಲಿ ಸ್ಮರಿಸಿ, - “ಇನ್ನಾರಿಗಾಗಿ ನಾನು ಬದುಕಲಿ” ಎಂದು ಅದೇ ಕತ್ತಿಯಿಂದ ಶಿರವನ್ನು ಕತ್ತರಿಸಿಕೊಳ್ಳಲು ಅಣಿಯಾದಾಗ ಶಿವನು ಕಾಣಿಸಿಕೊಂಡು, ಅವನ ಕೈಹಿಡಿದು ಕಾಪಾಡಿದನಲ್ಲದೆ, ಆತನ ಸತಿಯನ್ನೂ ಸ್ನೇಹಿತನನ್ನೂ ಬದುಕಿಸಿಕೊಟ್ಟು ಹರಸಿದನು.

 •