ವಿಷಯಕ್ಕೆ ಹೋಗು

ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೯೦

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ಅತಿಮಾನುಷ ಕಥೆಗಳು
೬೩

ಸರಿಯುವಳು. ಗೌರಿಯು ಅಲ್ಲಿಯೂ ಎಣ್ಣೆ ಹೊಸತೊಡಗಲು, ಗಂಗೆಯು ಅನಿವಾರ್ಯವಾಗಿ ನೆಲಕ್ಕಿಳಿದು ಹರಿದು ಹೋಗುತ್ತಾಳೆ.

ಗಂಗೆ ಹೋದ ಮರುದಿನವೇ ಗೌರಮ್ಮ ರಜಸ್ವಲೆ ಆಗುತ್ತಾಳೆ. ಮೈದೊಳೆಯಲು ನೀರಿಲ್ಲದಾಗುತ್ತದೆ. ಶಿವನು ಚೇಷ್ಟೆಯಿಂದ ಹಾಲಿನ ಕೊಡವನ್ನು ಕಳಿಸುತ್ತಾನೆ ಗೌರಮ್ಮನ ಕಡೆಗೆ, " ಹಾಲಿನಿಂದ ಮಿಂದರೆ ಮುಡಚಟ್ಟು ಹೋಗುವುದೇ? ತಂಗಿ ಗಂಗಮ್ಮನ್ನನ್ನು ಕಳಿಸಿರಿ" ಎನ್ನಲು, ಶಿವನು ಬೇಕೆಂದೇ ತುಪ್ಪದ ಕೊಡವನ್ನು ಕಳಿಸುವನು."ತುಪ್ಪಿನಲ್ಲಿ ಮಿಂದರೆ ಮೈಲಿಗೆ ಕಳೆಯುವುದೆ? ದಯಮಾಡಿ ತಂಗಿ ಗಂಗಮ್ಮನನ್ನು ಕಳಿಸಿರಿ" ಎಂದು ಗೌರಮ್ಮ ಅಂಗಲಾಚಲು ಶಿವನು 'ಆಗಲಿ' ಎಂದನು.

 •