ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೯೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

ಅತಿಮಾನುಷ! ಕಥೆಗಳು ೬೫

ಅರಿಸಿಣ, ಆರು ಹೇರು ಅಡಕೆ ಒಂದು ಖಂಡಗ ಬೆಲ್ಲ, ಆರು ಕೊಳಗ ಮೆಣಸು, ನೂರು ತೆಂಗಿನ ಕಾಯಿ ಕೊಟ್ಟರಲ್ಲದೆ ಇನ್ನೇನು ಕೊಟ್ಟಾರು ಬಡವರು? ಐದು ಹರಿವಾಣ, ಐದು ಸಮೆ, ಐದು ತಪ್ಪೇಲ್ಮಿ ಹದಿನಾಲ್ಕು ತಂಬಿಗೆ ಐದು ಬಿಂದಿಗೆ, ನಾಲ್ಕು ತಂಬಿಗೆ ಸುವಾಸಿಕ ಎಣ್ಣೆ ಹೆಚ್ಚಿಗೇನು ಕೊಡುವರು, ಮೊದಲೇ ಬಡವರು."

ಪಟ್ಟೇಸೀರೆ, ಬಣ್ಣದ ಸೀರೆ, ಸಕಲಾತಿ ಶಾಲು, ರತ್ನಗಂಬಳಿ, ಪಟ್ಟಮಂಚ ಅಲ್ಲದೆ ಹಿಂಡು ಆಕಳು ಹದಿನೆಂಟು, ಕಾಲಾಳು ನೂರು ಜನ, ಕರೆವ ಎಮ್ಮೆ ಎಂಟು, ಕರುಗಳೆಂಟು, ಅವುಗಳ ಹಾಲು ಕರೆದು ಕಾಸಿಕೊಡುವ ದಾಸಿಯರನ್ನೂ ಕೊಟ್ಟರು. ಇನ್ನೇನು ಕೊಡುವರು?"

"ಕೆ೦ಪು ಅರಿಸಿನ, ಕಸ್ತೂರಿ, ಕುಂಕುಮ, ಕುಪ್ಪಸ, ಗಿಣಿ ಮೊದಲಾದವುಗಳನ್ನಿತ್ತು ಮುತ್ತೈದೆಂಖರು ಸೇಸೆದಳೆದು ಉಡಿಯಕ್ಕಿ ಹಾಕಿ ಕಳಿಸಿದರು. ಹೆಚ್ಚು ಏನು ಕೊಟ್ಟಾರು ಬಡವರು?"

ಕಡುಬಡವನಾದ ಗಿರಿರಾಯನು ಮಗಳಿಗೆ ಕೊಟ್ಟ ವಸ್ತು ಒಡವೆಗಳ ಹೆಸರುಗಳನ್ನೆಲ್ಲ ಒಮ್ಮೆ ಹೇಳಿ ಮುಗಿಸಿದಳು ಪಾರ್ವತಿ. ಅದನ್ನು ಕೇಳಿ ಆತುರದಿಂದ ಶಿವನು ನುಡಿದನು. - "ಅಕ್ಕರೆಯ ಮಗಳೆಂದು ನಿನಗೆ ಇಷ್ಟೆಲ್ಲ ಕೊಟ್ಟರು. ನನಗೇನಾದರೂ ಒಂದಿಷ್ಟು ಕೊಡಲಿಲ್ಲವೇ?"

ಪಾರ್ವತಿಯೂ ತಡಮಾಡದೆ ಮರುನುಡಿದಳು - "ಇಷ್ಟೆಲ್ಲವನ್ನೂ ನನಗಿತ್ತು ತವರವರು ನನ್ನನ್ನೇ ನಿಮಗಿತ್ತರು."

ಅದನ್ನು ಕೇಳಿ ಶಿವನ ಮನಸ್ಸಿಗೆ ಅದೆಷ್ಟು ಹರ್ಷವಾಗಿರಬೇಕು ?

 •