ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೯೫

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

ಸಣ್ಣಪೋರ

ತೀರ ಸಣ್ಣವ ಇದ್ದಾಗ ಸಣ್ಣಪೋರನ ಲಗ್ನ ಆಗಿತ್ತು. ಲಗ್ನ ಆಗಿದ್ದು ಅವನಿಗೆ ಸಹ ಗೊತ್ತಿರಲಿಲ್ಲ. "ಎಲ್ಲಾರೂ ಅತ್ತೀಮಾವನ ಮನೀಗಿ ಹೋಗತಾರ ನಾನೂಬಿ ಹೋಗುತೆ" ಅಂದಾಗ "ನಿಂಗ ಖೂನ ಹಿಡಿಯುದಿಲ್ಲ ಮಗಾ" ಎಂದು ಅವ್ವ ಅಂದರೂ ಕೇಳಲಿಲ್ಲ; ಅಪ್ಪ ಅಂದರೂ ಕೇಳಲಿಲ್ಲ. ಅತ್ತೀಮಾವನ ಮನೀಗಿ ಹೋಗಿ ಮುಟ್ಟಿದ. ಮಾವ ಬಂಕಿನಾಗ ಕೂತಿದ್ದ : ಅತ್ತಿ ಪಡಸಾಲ್ಕಾಗ ಕುಂತಿದ್ದಳು. ಹೆಂಡತಿ ಅತ್ತೀ ಹಂತ್ಯಾಕ ನಿಂತಿದ್ದಳು. "ಅವ್ವಾ ಯಾರೋ ಬಂದಾರ ಬಾಗಿಲಾಗ? ಎ೦ತ ಹೆಂಡತಿ ಖೂನ ಹಿಡಿಯಲಾರದೆ ಹೇಳತಾಳ. "ನಿನ್ನ ಗಂಡ ಬಂದಾನ? ಎಂದು ಅವ್ವ ಹೇಳಿ ಮುಗಿಸತಾಳ. ಆದರೆ ಅತ್ತೀನೂ ಬಾ ಅನ್ಲಿಲ್ಲ; ಮಾವಾನೂ ಬಾ ಅನ್ಲಿಲ್ಲ. ಏಸುದಿನಾ ಆಯ್ತು ಮದುವೆಂಯಾಗಿ, ಇನ್ನೂ ಯಾಕ ಬಂದಿಲ್ಲಂತ ಇಬ್ಬರಿಗೂ ಸಿಟ್ಟು, ಪೋರ ಕಿಂಡೆ ಬಾಗಿಲಕಡೆ ಹೊ೦ಟ.

ಕಿಂಡೆ ಜಾಗಿಲ ಹಂತ್ಯಾಕ ನಿಂತ ಹೆಂಡತೀನೂ ಗಂಡನ ಬೆನ್ನು ಹತ್ತಿದಳು. "ಪೋರಿ ಎತ್ತಹೋಂಯ್ತು?’ ಅಂತ ತಂದೆ ಕೇಳಿದರ, ಆ ಹುಡುಗನ ಬೆನ್ನು ಹತ್ತಿ ಹೋದಳು — ಎಂದು ತಿಳಿಯಿತು. ತಂದೆತಾಯಿಂಬರು, ಗಂಡನ ಬೆನ್ನು ಹತ್ತಿ ಮಗಳು ಹೋದರ ಹೋಗಲಿ — ಎಂದರು.

"ನನ್ನ ಹೆಂಡತಿನ್ನ ಕರಕೊಂಡು ಬ೦ದೀನಿ ನೋಡವ್ವ'"

"ಅವರ ಮನ್ಯಾಗ ಉಣ್ಣುತಿನ್ನುದಕ ಬೇಕಾದಷ್ಟು ಒಟ್ಟ್ಯಾದ. ಅದನ್ನು ಬಿಟ್ಟು ನಮ್ಮಲ್ಲ್ಯಾಕ ಕರಕೊಂಡು ಬಂದ್ಯೋ ಮಗ" ಎಂದಳು ತಾಯಿ.

"ನೀವು ಉಂಡಿದ್ದು ನಾನು ಉಣ್ಣುವೆ; ನೀವು ಉಟ್ಟಿದ್ದು ನಾನು ಉಡುವೆ" ಎಂದು ಸೊಸೆ ಸಮಾಧಾನ ಹೇಳಿದಳು.

ನಾಲ್ಕಾರು ತಿಂಗಳು ಹೋಗಟ್ಲೆ ಸೊಸೆ ಮೈನೆರೆದಳು. ಊರಾಗ ಯಾರ ಮನ್ಯಾಗ ಶೋಭಾನ ಅಗುತ್ತಲೇ ಪಟೇಲನ ಮನೆಗ ಹೆಣ್ಣುಮಗಳಿಗೆ ಕಳಿಸಬೇಕು — ಹೀಂಗ ಅಲ್ಲಿ ಪದ್ಧತಿಯಿತ್ತು. ಅತ್ತಿ ಅನ್ನ ಉಂಬಲ್ಜೆ ಹೋದಳು; ನೀರು ಕುಡ್ಯಲ್ದೆ ಹೋದಳು. ಮಾರಿ ಸಣ್ಣದು ಮಾಡಿಕೊಂಡು ಕುಂತಳು. — "ಏನು ಬಂದಿದ್ದು ಬರಲಿ, ನಾ ಎದುರಿಸಲಿಕ್ಕೆ ತಯಾರಿದ್ದೀನಿ. ಬಂದದ್ದು ತಗೊಳ್ಳಾಕ