ಈ ಪುಟವನ್ನು ಪ್ರಕಟಿಸಲಾಗಿದೆ
೭೦
ಜನಪದ ಕಥೆಗಳು
ಲಕ್ಷ್ಮಿಯಿಂದ ವಚನ ತಕ್ಕೊಂಡು ಮನಿಪ್ರವೇಶಮಾಡಗೊಟ್ಟಳು. ಲಕ್ಷ್ಮೀ ದೇವರ ಮನ್ಯಾಗ ಹೊಕ್ಕು ಅಲ್ಲಿ ಮಾಯವಾದಳು. ಹಾಲುಕ್ಕುವಂತೆ ಮನೆ ಸಿರಿ ತುಂಬಿತು. ಸಂಪತ್ತು ತುಳುಕಾಡಿತು.
ಸೊಸೆಗೆ ತಾಯಿತಂದೆಗಳಿಗೆ ಮಗಳನ್ನು ನೋಡಬೇಕೆಂಬ ಇಚ್ಛೆಯಾಯಿತು. ಅಷ್ಟರಾಗೇ ಮಗಳು ತವರೂರಿಗೂ ಗಂಡನೂರಿಗೂ ನಡುವೆ ಸಾಲಾಗಿ ಗಿಡ ಹಚ್ಚಿಸಿದಳು. ಹಾದಿಯಲ್ಲೆಲ್ಲ ನೆರಳಾಯಿತು. ಬಾವಿ ಹೊಡಿಸಿದಳು. ಬೀದಿಯಲ್ಲೆಲ್ಲಾ ನೀರಾಂತ್ರು ತಾಯಿತಂದೆ ಬ೦ದು ನೋಡಿದರು. ಮನೆಯಲ್ಲಿ ಅನಾಜ ಬೇಕಾದಷ್ಟು ಅದ. ಸಂದುಕ ತುಂಬಾ ಪೈಸಾ ಅದ. ಇದನ್ನೆಲ್ಲ ನೋಡಿ ತಾಯಿತಂದಿ ಹಿರಿಹಿರಿ ಹಿಗ್ಗು ಪಟ್ಟರು.
•