ವಿಷಯಕ್ಕೆ ಹೋಗು

ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೯೯

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
೭೨
ಜನಪದ ಕಥೆಗಳು

ಲಾವಣಿಕಾರನು ಹೇಳಿದನು—"ನಾಳೆಂಹೀ ಸೊಲ್ಲಾಪುರದಲ್ಲಿ ಜಾತ್ರೆ. ಜಾತ್ರೆಂಯಿಲ್ಲಿ ನಾನು ಹಾಡಬೇಕಾಗಿದೆ. ಹಾಡಿದರೆ ಹತ್ತೆಂಟುರೂಪಾಯಿ ಸಂಭಾವನೆ ಸಿಗುವದು. ಅದಕ್ಕಾಗಿ ನನ್ನ ಹಾಡಿನ ರೂಢಿ ಮಾಡಿಕೊಳ್ಳುತ್ತಿದ್ದೇನೆ."

ನಿನ್ನ ಅಪಸ್ಟರ ಗಾಯನವನ್ನು ಕೇಳಿ ಸಂಭಾವನೆ ಕೊಡುವವರು ಬೇರೆ ಇರುವರೇ ? ಇಂಥಾ ಲಾವಣಿ ಹಾಡಿ ಹತ್ತೆಂಟು ರೂಪಾಯಿ ಗಳಿಸುವುದಕ್ಕಿಂತ ಒಂದು ಯುಕ್ತಿಯನ್ನು ಹೇಳಿಕೊಡುತ್ತೇನೆ. ಮಾಡಬಾರದೇ ?" ಎ೦ದು ಕೇಳಿತು ಆ ದೆವ್ವ

"ಏನದು ನೀನು ಹೇಳುವ ಯುಕ್ತಿ?" "ಮೊದಲು ಹಾಡುವುದನ್ನು ನಿಲ್ಲಿಸಿ, ತುಂತೂನಿಯನ್ನು ತೆಗೆದಿಡು. ಆ ಬಳಿಕ ಹೇಳುವೆನು" ಎನ್ನಲು ಲಾವಣಿಕಾರನು ತುಂತೂನಿಯ ತಂತಿಯನ್ನು ಸಡಿಲುಮಾಡಿ, ಬದಿಗೆ ಸರಿಸಿಯಿಟ್ಟು ದೆವ್ವ ಹೇಳುವುದನ್ನು ಕೇಳುವುದಕ್ಕೆ ತವಕದಿಂದ ಕುಳಿತನು.

ದೆವ್ವ ಹೇಳಿತು—"ನಾನು ಸೊಲ್ಲಾಪುರಕ್ಕೆ ಹೋಗಿ, ಅಲ್ಲಿಯ ಒಬ್ಬ ದೊಡ್ಡ ಶ್ರೀಮಂತನ ಹೆಂಡತಿಗೆ ಬಡಕೊಳ್ಳುತ್ತೇನೆ. ಯಾರ ಮಂತ್ರತಂತ್ರಗಳಿಗೂ ನಾನು ಬಿಟ್ಟುಹೋಗುವುದಿಲ್ಲ. ನೀನು ದೆವ್ವ ಬಿಡಿಸುತ್ತೇನೆಂದು ಹೇಳುತ್ತ ಅಲ್ಲಿಗೆ ಬಾ. ನೂರು ರೂಪಾಯಿ ಪ್ರಶಿಫಲ ಕೇಳು. ನೀನು ಮಂತ್ರ ಹಾಕಿದಂತೆ ಮಾಡು. ಚಿಫ್‌ ಎಂದು ಊದು. ಸಾಕು, ನಾನು ಬಿಟ್ಟು ಹೋಗುತ್ತೇನೆ. ಆಯಿತೇ ?"

ಲಾವಣಿಕಾರನು ಹಿಗ್ಗಿ ಸೊಲ್ಲಾಪುರಕ್ಕೆ ಹೊರಟನು. ಅಷ್ಟರಲ್ಲಿ ಶ್ರೀಮಂತನ ಹೆಂಡತಿಗೆ ದೆವ್ವ ಬಡಕೊಂಡ ಸುದ್ದಿ ಹಬ್ಬಿಬಿಟ್ಟಿತ್ತು. ಲೆಕ್ಕವಿಲ್ಲದಷ್ಟು ಮಾಂತ್ರಿಕರೂ ಅಸಂಖ್ಯ ತಾಂತ್ರಿಕರೂ ಹೋಗಿ ತಮ್ಮ ವಿದ್ಯೆಯನ್ನು ಪ್ರಯೋಗಿಸಿದರೂ ಪ್ರಯೋಜನವಾಗಿರಲಿಲ್ಲ. ಲಾವಣಿಕಾರನೂ ಆ ಶ್ರೀಮಂತನ ಮನೆಗೆ ಹೋಗಿ, ತಾನೂ ದೆವ್ವ ಬಿಡಿಸಬಲ್ಲೆನೆಂದು ಹೇಳಿದನು. ತನ್ನ ಪ್ರಯತ್ನದಿಂದ ದೆವ್ವ ಬಿಟ್ಟು ಹೋದರೆ ನೂರು ರೂಪಾಯಿ ಕೊಡಬೇಕಾಗುವದೆಂದೂ ತಿಳಿಸಿದನು. ಗುಮಾಸ್ತರು ಆತನನ್ನು ಕರೆದೊಂಯ್ಚು, ದೆವ್ವಿನ ಮುಂದೆ ಕುಳ್ಳಿರಿಸಿದರು. ದೆವ್ವ ಆತನನ್ನು ಗುರುತಿಸಿತು. ಲಾವಣಿಕಾರನು ಒಂದಿಷ್ಟು ಬೂದಿ ತರಿಸಿ ಅದಕ್ಕೆ ಮಂತ್ರಹಾಕಿ ಚೆಫ್‌ ಎಂದು ದೆವ್ವಿನ ಮುಖದ ಮೇಲೆ ಊದುತ್ತಲೇ ದೆವ್ವ ಹೋಗುವೆನೆಂದು ಎದ್ದೇನಿ೦ತಿತು. ಯಾವುದೋ ದಾರಿಗುಂಟ ಹತ್ತಿಪ್ಪತ್ತು ಹೆಜ್ಜೆ ಓಡಿಹೋಗಿ ಬಿದ್ದು ಬಿಟ್ಟಿತು.

ದೆವ್ವಿನ ಬಾಧೆಯನ್ನು ದೂರಗೊಳಿಸಿದ್ದಕ್ಕಾಗಿ ಆ ಲಾವಣಿಕಾರನಿಗೆ ಉಡುಗೊರೆಯನ್ನಿತ್ತು ಗೊತ್ತುಮಾಡಿದ ನೂರು ರೂಪಾಯಿ ಸಂಭಾವನೆ ಕೊಟ್ಟು