ಈ ಪುಟವನ್ನು ಪರಿಶೀಲಿಸಲಾಗಿದೆ
ಏಳೆನ್ನ ಮನದನ್ನೆ ! ನೋಡು, ಪೊಳ್ತರೆ ಬಂದು
ನಿಶಿಯ ಬೋಗುಣಿಯೊಳಕೆ ಹೊಂಬುಗುರಿಯೆಸೆದು
ತಾರೆಯರಳುಗಳನಲ್ಲಿಂದೆ ಚೆಲ್ಲಾಡಿಹನು ;
ನಿದ್ದೆ ಸಾಕಿನ್ನೀಗ ಮುದ್ದಣಗಿ ಬಾರ. ೧
ಮೂಡಲತ್ತಣ ಬೇಡನದೊ! ಸಾರಿ ಬಂದೀಗ,
ನೋಡು, ಸುಲ್ತಾನನರಮನೆಯ ಗೋಪುರಕೆ
ಹೂಡಿಹನು ತನ್ನ ಹಗ್ಗದ ಕುಣಿಕೆಯನು ಬೀರಿ ;
ನೋಡು ಬಾರೆಲೆ ಮುಗುದೆ, ನೀಡು ನಿನ್ನೊಲವ. ೨