ಪುಟ:ಕಂಬನಿ-ಗೌರಮ್ಮ.pdf/೧೦೧

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ನಾಲ್ಕು ಘಟನೆಗಳು

ಸೀತಾ,

'ಬೇಗನೆ ಕಾಗದ ಬರಿ; ಕಾಯುತ್ತಿರುತ್ತೇನೆ, ಮರೆಯಬೇಡ' ಎಂದು ಬರೆದಿರುವೆ. ಕಾಗದ ಬರೆಯದಿದ್ದುದಕ್ಕೆ ಕ್ಷಮಿಸು. ನೀನು ಯೋಚಿಸಿರುವಂತೆ ಒರೆಯದಿರುವುದಕ್ಕೆ ಕಾರಣ ನಿನ್ನನ್ನು ಮರೆತದ್ದೂ ಅಲ್ಲ-ಹೊಸ ಸ್ನೇಹಿತರೂ ಅಲ್ಲ. ನಿನಗಿಂತಲೂ ಹೆಚ್ಚಿನ ಸ್ನೇಹಿತರು ಹೊಸಬರಾಗಲು ಸಾಧ್ಯವೇ ? ಕಾರಣ ಏನೆನ್ನಲಿ? ಹೇಳುವುದಕ್ಕೆ ಯತ್ನಿಸುವುದಿಲ್ಲ. ನೀನು ನನ್ನನ್ನು ನಂಬಬೇಕಾದರೆ ಕಾರಣಗಳ ಅಗತ್ಯವಿಲ್ಲ. ನೀನು ನನ್ನನ್ನು ಬಲ್ಲೆ; ಮತ್ತೇಕೆ ಹೆಚ್ಚಿನ ವಿಚಾರ ?

ನನ್ನ ಸೀತಾ, ನಿನಗೆ ಗಳಿಗೆಗೊಂದು ಕಾಗದ ಬರೆದರೂ ನನಗೆ ತೃಪ್ತಿಯಿಲ್ಲ. ನಿನಗೆ ಬರೆಯುವೆ ನನ್ನ ಕಾಗದಗಳಿಗಾಗಿ ಸರ್ಕಾರದವರೊಂದು ಅಂಚೆಯ ಮನೆಯನ್ನು ನನ್ನ ಮನೆಯ ಹತ್ತಿರ ಸ್ಥಾಪಿಸಿದರೂ ಅವರಿಗೆ ನಷ್ಟವಾಗಲಾರದು.

ನೀನು ಪರೀಕ್ಷೆಯಲ್ಲಿ ತೇರ್ಗಡೆಹೊಂದಿರುದನ್ನು ತಿಳಿದು ಸಂತೋಷವಾಯಿತು. ಹಿಂದಿನ ಕಾಗದದಲ್ಲಿ ಉತ್ತೀರ್ಣಗಳಾಗಬೇಡ ಎಂದು ಬರೆದಿದ್ದೆ. ಹಾಗೆ ಬರೆದುದರ ಕಾರಣ ನನ್ನ ಸ್ವಾರ್ಥವೆಂದು ನೀನು ಊಹಿಸಿರಬಹುದು. ಹೇಗೂ ನೀನು ಪಾಸಾದದ್ದು ನನಗೆ ತುಂಬಾ