ಪುಟ:ಕಂಬನಿ-ಗೌರಮ್ಮ.pdf/೧೦೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೬೨

ಆನಂದದ-ಹೆಮ್ಮೆಯ ವಿಷಯ. ನಾನೂ ಹಿಂದೀ ಭಾಷೆಯನ್ನು ಅಭ್ಯಾಸ ಮಾಡಲು ತೊಡಗಿರುವೆನು. ಅದಕ್ಕೆ ಕಾರಣಗಳು ನೀನೆಂದು ಹೇಳಬೇಕೆ ? ಚಾನ್ ರಸ್ಕಿನ್ ರವರ 'ಆಪ್ಕ್ವೀನ್ಸ ಗಾರ್ಡನ್ಸ' ನೆನಪಾಗುವುದು. ಹೆಂಗಸರ ಉತ್ತೇಜನವಿದ್ದರೆ ಗಂಡಸರು ಯಾವ ಕೆಲಸವನ್ನಾದರೂ ಮಾಡಬಲ್ಲರಂತೆ. ಹಿಂದೂ ದೇಶದ ಗಂಡಸರಿಗೆ 'ನನ್ನ ಸೀತೆ 'ಯಂತವರು ಇರುತ್ತಿದ್ದರೆ ಇಷ್ಟರಲ್ಲಿ ಇಡೀ ಭಾರತವು ಭಾಷೆಯಲ್ಲಿ ಒಂದಾಗಿಹೋಗುತ್ತಿತ್ತು.

ಸೀತಾ, ನನಗೆ ಮೊದಲೇ ನೀನು ಅನೇಕ ಹೆಸರುಗಳನಿಟ್ಟಿರುವೆ. ಈ ಸಾರಿಯಂತೂ 'ಹರಟೆಯ ಮಲ್ಲ' ಎಂಬ ಬಿರುದನ್ನು ಖಂಡಿತ ವಾಯ ಕೊಡದಿರಲಾರೆ ಎಂದು ನನಗೆ ಗೊತ್ತಿದೆ. ಬಿರುದುಗಳಿಗಾಗಿ ಹೊಡೆದಾಡುವ ಈ ಕಾಲದಲ್ಲಿ ನನ್ನ ಭಾಗ್ಯಕ್ಕೆ ಸರಿಯಲ್ಲ-ಅಲ್ಲವೆ ? ಕಷ್ಟ ಪಟ್ಟರೂ ಸಿಕ್ಕದ ಬಿರುದುಗಳನ್ನು ನೀನು ನನಗೆ ಕೊಡುತ್ತಿರುವಾಗ ನಾನು ಅದೃಷ್ಟವಂತನೆಂದರೆ ತಪ್ಪೇನು ?

ಆದರೆ ಬಿರುದನ್ನು ನೀನೇ ಒಂದು ದಯಪಾಲಿಸಬೇಕು. ಕಾಗದದ ಮೂಲಕ ಕಳುಹಿಸಬೇಡ-ಆಗದೇ ?

ನಿನ್ನ,
ರಾಮು

ಸೀತಾ,

ಏಕೆ ಕೋಪ ? ಒರೆಯುವುದೇ ಇಲ್ಲವೆಂದು ನಿಶ್ಚಯಿಸಿರುವ ಯೇನು ? ಆದರೂ ನನಗೆ ಗೊತ್ತಿದೆ ಸೀತಾ, ನಿನ್ನ ಮನಸ್ಸು ಎಷು ಮದುವೆಂದು; ಈ ಕಾಗದವನ್ನು ನೋಡಿದಕೂಡಲೆ ಕೋಪವೆಲ್ಲವನ್ನೂ ಮರೆತು ಬರೆಯತೊಡಗುವೆ ಎಂದೂ ನನಗೆ ಗೊತ್ತಿದೆ. ಹಿಂದೂ ರಮಣಿ ಯರ ಮನಸ್ಸೇ ಅಷ್ಟು ಕೋಮಲ-ಅದರಲ್ಲೂ ನನ್ನ ಸೀತೆಯ ಮನಸ್ಸು!

ಮೊನ್ನೆ ದಿನ ಕ್ಲಬ್ಬಿನಿಂದ ಬರುವಾಗ ಒಂದು ವಿಶೇಷವನ್ನು