ಪುಟ:ಕಂಬನಿ-ಗೌರಮ್ಮ.pdf/೧೦೪

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೬೪

ನಾನು ನೋಡುತ್ತಿದ್ದಂತೆ ಆಕೆ ಮಗುವನ್ನೆತ್ತಿ ಅವನ ಭುಜದ ಮೇಲೆ ಕೂರಿಸಿದಳು. ಮಗು ಕೇಕೆಹಾಕಿ ನಗತೊಡಗಿತು ಅವಳೂ ನಕ್ಕಳು. ತಿಮ್ಮ ನಗುತ್ತ ಮಗುವನ್ನು ಮುದ್ದಿಟ್ಟುಕೊಂಡನು ನೋಡಿ ಆಶ್ಚರ್ಯವಾಯಿತೆಂದರೆ-ಆಶ್ಚರ್ಯವೇನು ಸೀತಾ! ಪಾಶ್ಚಾತ್ಯ ದೇಶಗಳಲ್ಲಾಗಿದ್ದರೆ ವಿವಾಹ ವಿಚ್ಛೇದನದ ಕೋರ್ಟಿಗೆ ಹೊಸದೊಂದು ಫಿರ್ಯಾದು ದಾಖಲಾಗುತ್ತಿತ್ತು.

ನಿನ್ನ,
ರಾಮು

ಸೀತಾ, ನಾನು L. A.ಯಲ್ಲಿ ಹೆಣ್ಣುಮಕ್ಕಳಿಗೂ ತಂದೆಯ ಆಸ್ತಿಯಲ್ಲಿ ಪಾಲು ದೊರೆಯಬೇಕೆಂದು ಮಸೂದೆಯನ್ನು ತರಲಿರುವರು ಎಂಬುದಕ್ಕೆ ನೀನು ನಕ್ಕು 'ನಿನಗೆ ತಂಗಿಯರಿಲ್ಲ ರಾಮು, ಅದೇ ಅಷ್ಟೊಂದು ಧೈರ್ಯ' ಎಂದು ಚೇಷ್ಟೆ ಮಾಡಿದರು ನಿನಗೆ ನೆನಪಿದೆಯೆ ಸೀತಾ, ಆದರೂ ನಿನ್ನ ಮನಸ್ಸಿಗೆ ಗೊತ್ತಿರಬಹುದು ನನಗೆ ತಂಗಿಯರಿದ್ದರೂ ರಮಣಿಯರ ಆರ್ಥಿಕಸ್ವಾತಂತ್ರತೆಗೆ ನಾನು ಶತ್ರವಾಗಲಾರೆನೆಂದು. ಅಲ್ಲವೇ ? ನಿಜವನ್ನು ಹೇಳು-

ನಿನ್ನೆದಿನ ತೋಟಕ್ಕೆ ಹೋಗಿದ್ದೆ. ಬರುವಾಗ ಕತ್ತಲಾಗಿತ್ತು. ಈಗಿನ ಚಳಿಯಂತೂ ನಿನಗೆ ಪರಿಚಯವಿಲ್ಲದೆ ಇಲ್ಲ. ಕೋಟನ್ನು ಹಾಕಿಕೊಂಡು ಹೋಗುವುದನ್ನು ಮರೆತಿದ್ದೆ. ಚಳಿಯಿಂದ ನಡುಕಹಿಡಿದು 'ಮನೆಗೊಂದುಸಾರಿ ತಲುಪಿದರೆ ಸಾಕಪ್ಪಾ' ಎನಿಸಿತ್ತು. ಬೇಗಬೇಗನೆ ನಡೆಯುತ್ತಿದ್ದೆ. ತೋಟಕ್ಕೆ ಹೋಗುವ ದಾರಿಯಲ್ಲಿ ದೊಡ್ಡದೊಂದು ನಂದಿಯ ಮರವಿದೆಯಲ್ಲ, ಅಲ್ಲಿಯವರೆಗೆ ಬಂದಿದ್ದೆ. ಮರದ ಬುಡದಲ್ಲಿ ಯಾರೋ ಕುಳಿತಿದ್ದಂತೆ ಕಂಡಿತು. ಬೀರಿ ಹೇಳಿರಲಿಲ್ಲವೇ ? ನದಿಯ ಮರದಡಿಯಲ್ಲಿ ಭೂತವಿದೆಯೆಂದು. ಟಾರ್ಚ ಹಾಕಿ ನೋಡಿದೆ-ಭೂತದ ವಿಷಯ ನಂಬಿಕೆಯಿಂದಲ್ಲ. ಕೂತವರು ಯಾರೆಂದು ನೋಡುವ ಸಲವಾಗಿ. ಅವಳೊಬ್ಬ ಹೆಂಗಸು. ಮಡಿಲಲ್ಲೊಂದು ಮಗು ನಿದ್ರೆ ಮಾಡುತ್ತಿತ್ತು.