ಪುಟ:ಕಂಬನಿ-ಗೌರಮ್ಮ.pdf/೧೦೭

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಧಾರೆಧಾರೆಯಾಗಿ ಅವಳ ಎದೆಯಿಂದ ರಕ್ತ ಸೋರುತ್ತಿತ್ತು. ನೆಲದಿಂದ ಎತ್ತುವ ಮೊದಲೇ ಪ್ರಾಣವು ಹಾರಿಹೋಗಿತ್ತು.

ಕ್ಷಣಹೊತ್ತಿನ ಮೊದಲು ತಾಯ್ತನದ ಹೆಮ್ಮೆಯಿಂದ, ಯೌವನದ ಸೊಬಗಿನಿಂದ ಬೆಳಗುತ್ತಿದ್ದ ಅವಳು ಈ ಜನ್ಮದ ಸುಖದುಃಖಗಳನ್ನು ಬಿಟ್ಟು ಹೊರಟು ಹೋಗಿದ್ದಳು. ಎಲ್ಲರೂ ಏನೂ ತೋರದೆ ಬೊಂಬೆಗಳಂತೆ ನಿಂತಿದ್ದೆವ. ಮಗು ಮಾತ್ರ ಚೀರಿ ಚೀರಿ ಅಳುತ್ತಿತ್ತು. ಮಗುವಿನ ತಂದೆಗೆ ಪ್ರಜ್ಞೆಯೇ ಇರಲಿಲ್ಲ.

ಸ್ವಲ್ಪ ಹೊತ್ತಿನ ಮೇಲೆ ತಿಳಿಯಿತು; ಅವಳ ಅಕಾಲಮೃತ್ಯುವಿಗೆ ಹಿತ್ತಲ ಕಿತ್ತಳೆಯ ತೋಟದಲ್ಲಿ ಕಾಗೆಗಳನ್ನು ಅಟ್ಟುವುದಕ್ಕಾಗಿ ಹೊಡೆದ ಗುಂಡು ಅಕಸ್ಮಾತ್ತಾಗಿ ಅವಳಿಗೆ ತಗಲಿದುದೇ ಕಾರಣವೆಂದು.

ನೋಡಿದೆಯಾ ಸೀತಾ, ಮೊಮ್ಮಗನ ಜನನದಿಂದ ಶಾಂತಿ, ಸುಖ, ಸಂತೋಷದಿಂದ ಮೆರೆಯುತ್ತಿದ್ದ ಆ ಸಂಸಾರಕ್ಕೆ ಬಂದ ದುಃಖ ! ಅದು ಬಂದೊದಗಿದ ರೀತಿ !!

ಮನುಷ್ಯರು ಮರುಕ್ಷಣದ ಗತಿಯನ್ನರಿಯದೆ ಹೊಡೆದಾಡುವ ಜೀವನದ ರಹಸ್ಯ ಇದೇ ಏನು? ತಿಳಿದವರಾರು!

ಯಾವಾಗಲೂ ನಿನ್ನ,
ರಾಮು

ಮೇ ೧೯೩೫

೬೭