ಪುಟ:ಕಂಬನಿ-ಗೌರಮ್ಮ.pdf/೧೦೮

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ಪ್ರಾಯಶ್ಚಿತ್ತ

ಸರಾ ರಜೆಯಲ್ಲಿ ಮೂರ್ತಿ ಬೆಂಗಳೂರಿನಿಂದ ಹಳ್ಳಿಗೆ ಬಂದಿದ್ದ. ಐಶ್ವರ್ಯವಂತರಾದ ತಂದೆತಾಯಿಯರಿಗೆ ಅವನೊಬ್ಬನೇ ಮಗ; ತಾಯಿಯ ಪ್ರೇಮದ ಬೊಂಬೆ. ಇಪ್ಪತ್ತು ಮರು ವರ್ಷ ವಯಸ್ಸಿನವನಾದರೂ ತಾಯಿ ಅವನನ್ನು ಎರಡು ವರ್ಷದ ಮಗುವಿನಂತೆ ಮುದ್ದಿಸುತ್ತಿದ್ದಳು. ಅವನು ಏನು ಮಾಡಿದರೂ ತಾಯಿಗೆ ಅದು ತಪ್ಪಾಗಿ ತೋರುತ್ತಿರಲಿಲ್ಲ. ಮಡಿಮೈಲಿಗೆ ಎಂದರೆ ಆಕೆಗೆ ಜೀವಕ್ಕಿಂತಲೂ ಹೆಚ್ಚು. ಆದರೂ ಒಂದು ದಿನ ಮರ್ತಿ ಶೂಟ್ ಹಾಕಿಕೊಂಡು ಅಡಿಗೆಮನೆಯೊಳಗೆ ನುಗ್ಗಿದಾಗ 'ಪಾಪ, ಚಿಕ್ಕ ಹುಡುಗ, ಅವನಿಗೇನು ಗೊತ್ತು' ಎಂದು ಹೇಳಿ ಅವನನ್ನು ಕ್ಷಮಿಸಿದ್ದಳು. ಮೂರ್ತಿಗೂ ಹಾಗೆಯೇ-ಅಮ್ಮ ಎಂದರೆ ಪ್ರಾಣ. ಅವಳ ಮಾತುಗಳನ್ನು ಎಂದೂ ಮೀರುತ್ತಿರಲಿಲ್ಲ. ಕಾಲೇಜಿಗೆ ಎರಡು ದಿನ ರಜ ಸಿಕ್ಕಿದರೆ ಸಾಕು; ತಾಯಿಯನ್ನು ನೋಡುವುದಕ್ಕೆ ಹಳ್ಳಿಗೆ ಓಡಿ ಬರುತ್ತಿದ್ದ. ಅಣ್ಣ, ತಂಗಿ, ಸ್ನೇಹಿತ ಎಲ್ಲಾ ಅವನಿಗೆ ಅವನ ಅಮ್ಮ. ಆವಳ ಪ್ರೇಮಪೂರ್ಣವಾದ ಸವಿನುಡಿಗಳನ್ನು ಕೇಳುವುದಕ್ಕೆ ಮೂರ್ತಿಗೆ ಬಹಳ ಆಸೆ. ನೋಡಿದವರು ಅವರನ್ನು ತಾಯಿ-ಮಗ ಎನ್ನುವುದರ ಬದಲು ಸ್ನೇಹಿತರು ಎಂದು ಹೇಳುತ್ತಿದ್ದರು.

ಮೂರ್ತಿಯ ತಂದೆ ಬಹಳ ವಿಚಿತ್ರ ಪ್ರಕೃತಿಯ ಮನುಷ್ಯ. ಮೂರ್ತಿಯ ಮನಸ್ಸು ಎಷ್ಟು ಕೋಮಲವೋ ಅಷ್ಟೇ ಕಠಿಣ ಆತನ ಮನಸ್ಸು. ಹಣವನ್ನು ಶೇಖರಿಸುವುದಲ್ಲದೆ ಖರ್ಚು ಮಾಡುವುದೆಂದರೆ