ಪುಟ:ಕಂಬನಿ-ಗೌರಮ್ಮ.pdf/೧೨೧

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಇನ್ನು 'ಕೂಗುತ್ತಾರೆ, ಕೆಲಸವಿದೆ, ಹೋಗಬೇಕು' ಎಂದು ಓಡಬೇಕಾದುದಿಲ್ಲವಲ್ಲ. ಎಷ್ಟು ಹೊತ್ತು ಬೇಕೆಂದರೆ ಅಷ್ಟು ಹೊತ್ತು ಮಾತಾಡುವ ಅಧಿಕಾರವೀಗ ನನಗೆ ಬಂತಲ್ಲ.'

ಪ್ರೇಮಾಶ್ರುಗಳನ್ನು ಸುರಿಸುತ್ತಾ ನಲಿನಿ ಕೋಮಲ ಸ್ವರದಲ್ಲಿ ಪ್ರತ್ಯುತ್ತರವಿತ್ತಳು-'ನನ್ನ ದೇವರೇ, ನಿನ್ನ ದಯೆ.'

ಆ ದಿನ ರಾತ್ರಿ, ನಲಿನಿಯ ಬೇಡಿಕೆಯುನುಸಾರ ಮೂರ್ತಿ ಬರೆದ ಕ್ಷಮಾಯಾಚನೆಯ ಪತ್ರವನ್ನೋದುತ್ತಾ ಅವನ ತಂದೆ 'ನನ್ನ ಪಾಪದ ಪ್ರಾಯಶ್ಚಿತ್ತವಿದು' ಎಂದು ನಿಟ್ಟುಸಿರು ಬಿಟ್ಟರು. ಮರುದಿನ ಹಾಸಿಗೆಯಿಂದೇಳುವಾಗ ದಿಂಬೆಲ್ಲಾ ಪಶ್ಚಾತ್ತಾಪದ ಕಣ್ಣೀರಿನಿಂದ ತೋಯ್ದು ಒದ್ದೆಯಾಗಿಹೋಗಿತ್ತು.

ಜನವರಿ ೧೯೩೫

೮೧

11