ಪುಟ:ಕಂಬನಿ-ಗೌರಮ್ಮ.pdf/೧೨೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ಅಪರಾಧಿ ಯಾರು?

ಣ್ಣ,

ನಾನು ಬರೆದ ಹಿಂದಿನ ಕಾಗದವು ನಿನಗೆ ತಲಪಿರಬಹುದು. ಅದಕ್ಕೆ ನೀನು ಪ್ರತ್ಯುತ್ತರವನ್ನು ಬರೆಯುವ ಮೊದಲೇ ಈ ಕಾಗದವನ್ನು ನೋಡಿ ನಿನಗೆ ಆಶ್ಚರ್ಯವಾಗಲೂ ಬಹುದು. ಆಶ್ಚರ್ಯದ ವಿಷಯವೇ ಇರುವುದರಿಂದ ನಿನಗಿದನ್ನು ಬರೆಯುತ್ತಿರುವೆನು.

ನಮ್ಮ ಮನೆಯ ಪಕ್ಕದ ಮನೆಯಲ್ಲಿದ್ದ ನಾಗೇಶರಾಯರದು ನಿನಗೆ ಗೊತ್ತಿದೆ. ಗೊತ್ತಿದೆ ಎಂದರೆ ನನಗವರ ಗಣಗಳೆಲ್ಲಾ ಗೊತ್ತಿರಲಾರದು. ಈ ಮನೆಗೆ ನಾವು ಮೊದಲು ಒಂದು ಸುರುವಿನಲ್ಲಿ ಅವರನ್ನು ನೋಡಿ 'ಕ್ರೂರಿಯ ಕಣ್ಣುಗಳಂತಿವೆ ರಾಯರ ಕಣ್ಣುಗಳು' ಎಂದು ಹೇಳಿಕೊಂಡು ನಗುತ್ತಿದ್ದುದು ನಿನಗೆ ಮರೆತುಹೋಗಿರಲಾರದು. ಚಿಕ್ಕತನದ ತಂಟೆಯಲ್ಲಿ ತಮಾಷೆಗಾಗಿ ನಾವಾಡಿದ ಮಾತುಗಳು ಈಗ ನಿಜವಾಗಿ ಪರಿಣಮಿಸಿವೆ. ನಾವು ಊಹಿಸಿದುದಕ್ಕಿಂತಲೂ ಹೆಚ್ಚಿನ ನೀಚರವರು. ನಾನೇಕೆ ಅದರ ಗುಣವರ್ಣನೆ ಮಾಡುತ್ತಿರುವೆನೆಂದು ನೀನು ಹುಬ್ಬುಗಂಟಿಕ್ಕಬಹುದು. ಸ್ವಲ್ಪ ಸಮಾಧಾನ ತಾಳಿಕೊ; ನಾನೀ ಕಾಗದ ಬರೆಯುತ್ತಿರುವುದೇ ಅವರ ನೀಚತನಕ್ಕೆ ಬಲಿಯಾಗಿ ಜಾತಿಯಿಂದ ಬಹಿಷ್ಕರಿಸಲ್ಪಟ್ಟಿರುವ ಪಾರ್ವತಿಗಾಗಿ. ಪಾರ್ವತಿ ಯಾರೆಂದು ಗೊತ್ತೇ? ನಮಗೆ ಕನ್ನಡವನ್ನು ಕಲಿಸುತ್ತಿದ್ದರಲ್ಲ- ಆ ಪಂಡಿತರ ಮಗಳು. ಪಂಡಿತರು