ಪುಟ:ಕಂಬನಿ-ಗೌರಮ್ಮ.pdf/೧೨೪

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೮೪

ಬಂದರೆ ಅವಳನ್ನು ಶಾಸ್ತ್ರೋಕ್ತವಾಗಿ ನಮ್ಮ ಜಾತಿಗೆ ಸೇರಿಸಿ ಅವಳ ಮುಂದಿನ ಜೀವನಕ್ಕೆ ದಾರಿ ಮಾಡಬಹುದು.

ಅಣ್ಣ, ಅವಳ ತಂದೆ ಪಂಡಿತರು ತಮ್ಮ ಜಾತಿಯನ್ನು ಹೊಗಳಿಕೊಳ್ಳುತ್ತಿದ್ದುದು ನಿನಗೆ ಜ್ಞಾಪಕವಿರಬಹುದು. ಅನಾಥ ಅಬಲೆಯರು ಅತ್ಯಾಚಾರಿಯ ಅತ್ಯಾಚಾರಕ್ಕೆ ಪ್ರಾಯಶ್ಚಿತ್ತವನ್ನು ಮಾಡಿಕೊಳ್ಳುವುದೇ ಅವರ ಚಾತಿಯ ನೀತಿಯಾದರೆ ನಮಗಾ ಜಾತಿಯಲ್ಲಿ ಜನ್ಮಕೊಡದಿದ್ದುದಕ್ಕಾಗಿ ದೇವರನ್ನು ಎಷ್ಟು ವಂದಿಸಿದರೂ ಸ್ವಲ್ಪವೇ. ಇದನ್ನು ನೋಡುವದಕ್ಕೆ ಪಂಡಿತರು ಇದ್ದಿದ್ದರೆ ತಮ್ಮ ಜಾತಿಯ ವಿಷಯಲ್ಲಿದ್ದ ಭಾವನೆಯನ್ನವರು ಬದಲು ಮಾಡಬೇಕಾಗಿ ಬರುತ್ತಿತ್ತು. ಇರಲಿ; ಈ ಕಾಗದವನ್ನು ನೋಡಿದೊಡನೆ ನೀನು ಬರುವಿಯಾಗಿ ಆಶಿಸುವ,

ನಿನ್ನ ಪ್ರೀತಿಯು ತಂಗಿ,
ಉನ್ನೀಸಾ

ಸೀತಮ್ಮನವರೇ,

ಬಹಳ ದಿನಗಳಿಂದಲೂ ನಿಮಗೆ ಕಾಗದ ಬರೆಯಬೇಕೆಂದು ಆಲೋಚಿಸಿಕೊಂಡಿದ್ದೇನೆ. ಬರೆಯುವುದಕ್ಕೆ ಮಾತ್ರ ಸ್ವಲ್ಪವೂ ಸಮಯವಾಗುವುದಿಲ್ಲ ನೋಡಿ; ಈಗಲಾದರೂ ಸಮಯ ಸಿಕ್ಕಿತೇ ಎಂದು ನೀವು ಕೇಳಬಹುದು. ನಿಜವನ್ನು ಹೇಳುವುದಾದರೆ ಈಗಲೂ ಇಲ್ಲ. ಕಮಲೆಗೆ ಜ್ವರ; ಅವಳಿಗೆ ಔಷಧಿ ಕುಡಿಸಿಲ್ಲ. ರಘುವನ್ನು ಇನ್ನೂ ಸ್ನಾನಮಾಡಿಸಿಲ್ಲ. ಅಡಿಗೆಯು ಆಗಿಲ್ಲ. ಆದರೂ ನಿಮಗೊಂದು ವಿಶೇಷದ ಸುದ್ದಿ ತಿಳಿಸಿಬಿಡಬೇಕೆಂದು ಕೆಲಸಗಳನ್ನೆಲ್ಲಾ ಬಿಟ್ಟು ಬರೆಯುವುದಕ್ಕೆ ಕೂತಿದ್ದೇನೆ.

ಆ ಪಾರ್ವತಿ ನೋಡಿ-ಬೊಂಬೆಯ ಹಾಗೆ ಅಲಂಕಾರಮಾಡಿಕೊಂಡು ಶಾಲೆಗೆ ಹೋಗುತ್ತಿದ್ದಳಲ್ಲ- ಪಂಡಿತರ ಮಗಳು-ಅವಳು ಜಾತಿಕೆಟ್ಟು ತುರುಕರ ಜಾತಿಗೆ ಸೇರಿದ್ದಾಳೆ ನೋಡಿ-! ಅವಳನ್ನು ಅವಳಪ್ಪ ಮುದ್ದು ಮುದ್ದು ಎಂತ ಶಾಲೆಗೆ ಕಳುಹಿಸುವಾಗಲೇ ನನಗೆ ಗೊತ್ತಿತ್ತು-ಅವಳು ಹೀಗಾಗುವಳೆಂದು! ಇದು ಬೇರೆ ತಮಾಷೆ ನೋಡಿ-ಪಕ್ಕದ