ಪುಟ:ಕಂಬನಿ-ಗೌರಮ್ಮ.pdf/೧೬೮

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

೧೨೮

ಬಡಿಯುವ ಶಬ್ದ ಕೇಳಿಸಿತು. ಹೋಗಿ ಬಾಗಿಲು ತೆರೆದೆ. ಸುಬ್ಬು! 'ಈಗ್ಗೆ ಬರೋಕಂತೆ ತಾಳ್ಮೆ, ಬಹಳ ಜೋರಂತೆ. ಕಾಲಿಗೆ ಬಿದ್ದು ಕಂಡು ಬಾ ಅಂದ್ರು' ಎಂದ. 'ಯಾರಿಗೋ ಕಾಯಿಲೆ ?' ಎಂದು ಕೇಳಿದೆ. ಅವನಿಗೆ ಗೊತ್ತಿರಲಿಲ್ಲ. ಅಂತೂ ಕಾಯಿಲೆ ರಾಜಮ್ಮನಿಗಲ್ಲ ಎಂದು ತಿಳಿಯಿತು. ಇನ್ನಾರಿಗೆ ? ಯಾರಿಗೇ ಆದರೂ-ರಾಜಮ್ಮನಿಗೇ ಆದರೂ ಹೋಗಿ ನೋಡುವುದು ನನ್ನ ಕರ್ತವ್ಯ. ಅವಳು ಸೂಳೆ ಎಂಬ ಮಾತ್ರಕ್ಕೆ ಅಷ್ಟೊಂದು ಅಲಕ್ಷ್ಯಮಾಡಲು ನನಗೆಲ್ಲಿಯ ಅಧಿಕಾರ? ಸ್ವಲ್ಪ ಹೊತ್ತಿನ ಮೊದಲೇ ನನ್ನ ಕರ್ತವ್ಯವನ್ನು ಅವಳು ಸೂಳೆ ಎಂಬ ನನನ ದಿಂದ ಬದಿಗೊತ್ತಿ ಸಮಾಧಾನ ಮಾಡಿಕೊಂಡಿದ್ದೆ. ನೆನಸಿಕೊಂಡು ನನಗೆ ನಾಚಿಕೆಯಾಯ್ತು--' ಬರುತ್ತೇನೆ ತಡೆ ' ಎಂದು ಹೇಳಿ ಒಳಗೆ ಹೋಗಿ ಬೇಗ ಬೇಗ ಬಟ್ಟೆ ಹಾಕಿಕೊಂಡೆ. ಪಾರ್ವತಿಗೆ ನಿದ್ರೆ ಬಂದುಹೋಗಿತ್ತು. ಔಷಧಿಯ ಪೆಟ್ಟಿಗೆಯನ್ನು ತೆಗೆದುಕೊಂಡು ಹಾಗೆಯೇ ಬಾಗಿಲನ್ನೆಳೆದು ಕೆತಾಂಡ ಹೊರಟೆ.

ರಾಜಮ್ಮನ ಮನೆ ನಮ್ಮನೆಗೆ ಸುಮಾರು ಮುಕ್ಕಾಲುಮೈಲು ದೂರದಲ್ಲಿ ಒಂದು ತೋಟದೊಳಗೆ ಒಂಟಿಯಾಗಿತ್ತು. ಅದರ ಹತ್ತಿರ ಹತ್ತು ಹನ್ನೆರಡು ಮಾರು ದೂರದಲ್ಲಿ ಒಂದೆರಡು ಒಡ ಕೂಜನರ ಗುಡಿಸಲುಗಳಲ್ಲದೆ ಬೇರೆ ಮನೆಗಳಿರಲಿಲ್ಲ. ನಾವು ಹೋಗುವಾಗ ರಾಜ ಮ್ಮನ ಮನೆಬಾಗಿಲು ತೆರೆದೇ ಇತ್ತು, ಸುಬ್ಬು ಅಮ್ಮಾವ್ರೇ' ಎಂದು ಕೂಗಿದ. ರಾಜನ್ನು ಹೊರಗೆ ಬಂದಳು. ಅದೇ ಮೊಟ್ಟಮೊದಲು ನಾನು ರಾಜಮ್ಮನನ್ನು ನೋಡಿದ್ದು. ಅವಳ ವಿಷಯವಾಗಿ ಜನರಾಡುತ್ತಿದ್ದ ಮಾತುಗಳನ್ನು ಕೇಳಿರಾಜಮ್ಮರಾಕ್ಷಸಿ ಎಂಬ ಭಾವನೆಯಾಗಿತ್ತು ನನಗೆ. ಆದರೆ ಅದೇಕೋ-ವ್ಯಸನದಿಂದ ಬಾಡಿದ್ದ ಅವಳ ಮುಖವನ್ನೂ ಅತ್ತು ಅತ್ತು ಕೆಂಪಾಗಿ ಊದಿಕೊಂಡಿದ್ದ ಅವಳ ಕಣ್ಣುಗಳನ್ನೂ ನೋಡಿ ನನಗೆ ಅತ್ಯಂತ ಕರುಣೆಯುಂಟಾಯಿತು. 'ಯಾರಿಗಾ ಕಾಯಿಲೆ ?' ಎಂದು ಕೇಳಿದೆ. ರಾಜಮ್ಮ ಪ್ರತ್ಯುತ್ತರ ಕೊಡದೆ ನನ್ನನ್ನು ಒಳಗೆ ಕರೆದು ಕೊಂಡು ಹೋದಳು. ಅಲ್ಲೊಂದು ಕೋಣೆಯಲ್ಲಿ ಮಂಚದ ಮೇಲೊಬ್ಬನು