ಪುಟ:ಕಂಬನಿ-ಗೌರಮ್ಮ.pdf/೧೬೯

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

ಮಲಗಿದ್ದ. ರಾಜಮ್ಮ ಆತನ ಕಡೆಗೆ ಕೈತೋರಿದಳು, ಹತ್ತಿರ ಕೊ೦ಡಿದೆ. ಸತ್ತ ಹೆಣದ ಮುಖದಂತಿತ್ತು ಅವನ ಮುಖ, ಕಣ್ಣುಗಳನ್ನು ಬಿಟ್ಟುಕೊಂಡೇ ಇದ್ದರೂ ಆ ಕಣ್ಣುಗಳಲ್ಲಿ ಜೀವನದ ಬೆಳಕಿದ್ದಂತೆ ತೋರಲಿಲ್ಲ. ಬಗ್ಗಿ ಆತನ ಕೈಹಿಡಿದು ನೋಡಿದೆ. ಬೆಂಕಿಯಂತೆ ಸುಡು ತಿತ್ತು, ಕೈ, ಜ್ವರದ ತಾಪದಿಂದ ಅವನಿಗೆ ಪ್ರಜ್ಞೆ ಇರಲಿಲ್ಲ. ನೋಡಿ ದೊಡನೆಯೇ ಆತ ಬದುಕುವಂತಿಲ್ಲವೆಂದು ನನಗೆ ತಿಳಿಯಿತು. ರಾಜಮ್ಮ ಅವನ ಕಾಲ ಹತ್ತಿರ ತಲೆಯನ್ನಿಟ್ಟುಕೊಂಡು ಶೂನ್ಯದೃಷ್ಟಿಯಿಂದ ನನ್ನ ಕಡೆ ನೋಡುತ್ತಿದ್ದಳು. ನಾನು ಎಷ್ಟೋ ಜನರು ಸಾಯುವದನ್ನು ನೋಡಿದ್ದೇನೆ. ಅದೆಷ್ಟೋ ಜನರು ಎದೆ ಎದೆ ಬಡಿದುಕೊಂಡು ಆಳುವ ಕರುಣಕ್ರಂದನವನ್ನೂ ಕೇಳಿದ್ದೇನೆ. ಆದರೆ ಇದಾವ ದೃಶ್ಯಗಳೂ ರಾಜ ಮನ ಮಕರೋದನದಷ್ಟು ವ್ಯಥೆಯನ್ನುಂಟುಮಾಡಿರಲಿಲ್ಲ.

ಸ್ವಲ್ಪ ಹೊತ್ತಿನ ಹಿಂದೆ ನಾನು ರಾಜಮ್ಮನನ್ನು ನೋಡಿ ಸಹ ಇರಲಿಲ್ಲ. ಅವಳ ವಿಷಯದಲ್ಲಿ ತಿರಸ್ಕಾರವಿತ್ತು; ಸತ್ಯ ಸಾಯಂ Gಂಬ ಭಾವನೆ ಇತ್ತು, ಒಂದು ಸಾರಿ ಅವಳ ಅಳುವ ಮುಖವನ್ನು ನೋಡಿದ ಮಾತ್ರದಿಂದ ನನಗವಳ ವಿಷಯದಲ್ಲಿದ್ದ ಎಲ್ಲ ಭಾವನೆಗಳೂ ಮಾಯವಾಗಿ ಅನುಕರಣೆಯೊಂದು ಮಾತ್ರ ಅದೇಕೆ ಉಳಿಯಿತೋ ಹೇಳಲಾರೆ. ಅವರ ಪ್ರಾಯವೇನೂ ಹೆಚ್ಚಾಗಿದ್ದಂತೆ ತೋರಲಿಲ್ಲ. ನನ್ನ ಮಗಳು ಶಾಂತಿಗಿಂತ ಒಂದೆರಡು ವರ್ಷಕ್ಕೆ ಹಿರಿಯಳೋ ಏನೋ, ಇಷ್ಟೊಂದು ಚಿಕ್ಕ ಪ್ರಾಯದಲ್ಲೇ ಇಂತಹ ಅವಸ್ಥೆ! ಹೆಸರಾದ ಸೂಳೆ ಎಂಬ ಕೀರ್ತಿ !!

ಮಲಗಿದ್ದ ಮನುಷ್ಯ ಹೊರಳಾಡಿದ. ನಾನು ಕುಡಿಸಿದ ಔಷಧಿಯ ಪ್ರಭಾವದಿಂದ ಅವನನ್ನು ಬದುಕಿಸುವುದು ಅಸಾಧ್ಯವಾದರೂ ಅವನಿಗೆ ಸ್ಮೃತಿ ಬರುವ ಸಂಭವವಿತ್ತು. ಕಾಲದಿಸೆಯಲ್ಲಿ ಕುಳಿತಿದ್ದ ರಾಜಮ್ಮ ಎದ್ದು ಬೆವರುತ್ತಿದ್ದ ಅವನ ಮುಖವನ್ನು ಒರಿಸತೊಡಗಿದಳು. ಆತನ ತುಟಿ ಅಲುಗಾಡಿತು. ಸ್ವಲ್ಪ ನೀರನ್ನು ಕುಡಿಸುವಂತೆ ಹೇಳಿದೆ. ಅವಳು ಒಂದೆರಡು ಚಮಚ ನೀರನ್ನು ಕುಡಿಸುತ್ತಲೆ ಅವನು ಬಹು ಮೆಲ್ಲಗೆ

೧೨೯

17