ಪುಟ:ಕಂಬನಿ-ಗೌರಮ್ಮ.pdf/೧೭೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ
೧೩೨

ಆದಿನ ನಾನು ಆಸ್ಕೃತಿಗೆ ಹೋಗಲಿಲ್ಲ. ವಿಶ್ರಾಂತಿಯನ್ನು ತೆಗೆದು ಕೊಳ್ಳುವ ನೆವಸದಿಂದ ಹಾಸಿಗೆಯ ಮೇಲೆಯೇ ಹೊರಳಾಡುತ್ತಿದ್ದೆ. ನಿದ್ರೆ ಮಾತ್ರ ಎಷ್ಟೆಷ್ಟು ಪ್ರಯತ್ನಿಸಿದರೂ ಬರಲಿಲ್ಲ. ಕೊನೆಗೆ ಸಾಯಂಕಾಲ ಸ್ವಲ್ಪ ಹೊರಗೆ ಹೋಗಿ ತಿರುಗಾಡಿಕೊಂತಾದರೂ ಬರೋಣ ಎಂದು ಹೊರಪಿ, ನನಗೆ ತಿಳಿಯದಂತೆಯೇ ಕಾಲುಗಳು ನನ್ನನ್ನು ರಾಜಮ್ಮನ ಮನೆಯ ಕಡೆಗೆ ಎಳೆದುಕೊಂಡು ಹೋದುವ, ಬಾಗಿಲು ತೆರೆದಿತ್ತು, ಒಳಗೆ ಹೋದೆ. ಹಿಂದಿನ ದಿನ ರೋಗಿಯು ಮಲಗಿದ್ದ ಮಂಚದ ಹತ್ತಿರ ನೆಲದ ಮೇಲೆ ಕುಳಿತುಕೊಂಡು ನಮ್ಮ ದೃಷ್ಟಿಯಿಂದ ಬಾಲಕಡೆ ನೋಡು ತಿದ್ದಳು ರಾಜಮ್ಮ, ಅದೇ ಬಾಲಿಗಾಗಿ ನಾನು ಒಳಗೆ ಹೋಗಿದ್ದರೂ ನನ್ನನ್ನವಳು ನೋಡಿದಂತೆ ತೋರಲಿಲ್ಲ. ನನಗವಳ ಸ್ಥಿತಿಯನ್ನು ನೋಡಿ ಬಹಳ ಕಳವಳವಾಯು, ಹೆಣದ ದಹನವಾಗಿತ್ತು-ಈಗ ಅವಳೊಬ್ಬಳೇ ಆ ಮನೆಯಲ್ಲಿ. ಸೂಳೆಯ ಜೊತೆಗೆ ಹೋಗುವರು ಯಾರು ? ಪಾರ್ವತಿ ಯುನ್ಯಾ ದರೂ ಜೊತೆಯಲ್ಲಿ ಕರೆತರಬೇಕಾಗಿತ್ತು ಎನ್ನಿಸಿತು ನನಗೆ. ಹಿಂದಿನ ದಿನ ಯಾರಾದರೂ ನನ್ನೊಡನೆ ರಾಜಮ್ಮನ ಮನೆಗೆ ನನ್ನ ಹೆಂಡತಿಯನ್ನು ಕರೆದುಕೊಂಡು ಹೋಗೆಂದಿದ್ದರೆ ನಾನವರೊಡನೆ ಖಂಡಿತವಾಗಿಯೂ ಜಗಳಾಡಿಬಿಡುತ್ತಿದ್ದೆ.ರಾಜಮ್ಮನನ್ನು ನೋಡಿದ ಮೇಲೆ ಆ ತರದ ಭಾವನೆ ಗಳೇ ಮಾಯವಾಗಿ ಹೋಗಿದ್ದವು. ಹಿಂದೆ ನಾನವಳ ವಿಷಯವಾಗಿ ನೆನಸಿಕೊಂಡುದನ್ನೆಲ್ಲಾ ಯೋಚಿಸಿಕೊಂಡಾಗ ನನ್ನ ಮೇಲೆ ನನಗೇ ಧಿಕ್ಕಾರ ಉಂಟಾಗುತ್ತಿತ್ತು.

ಅವಳಿಗೆ ನಾನು ಹೋದುದು ತಿಳಿಯಲಿಲ್ಲ. 'ರಾಜಮ್ಮಾ' ಎಂದು ಕೂಗಿದೆ. ಬೇರೆ ಯಾವುದನ್ನೂ ನೋಡುತ್ತಿದ್ದವಳು ಫಕ್ಕನೆ ತಿರುಗು ವಂತೆ ನನ್ನ ಮಾತು ಕೇಳಿ ಅವಳು ತಿರುಗಿದಳು. ಮೊದಮೊದಲು ನಾನು ಯಾರೆಂತ ಅವಳಿಗೆ ಗುರುತು ಸಿಕ್ಕಿದಂತೆ ತೋರಲಿಲ್ಲ. ಅವಳನ್ನು ನಾನೆಷ್ಟೋ ಸಮಾಧಾನಪಡಿಸಲು ಯತ್ನಿಸಿದೆ. ಅವಳು ಅಳುತ್ತಿರಲಿಲ್ಲ. ವಾದರೂ ನನ್ನ ಮಾತುಗಳಿಂದ ಅವಳಿಗೆ ಸಮಾಧಾನವಾದಂತೆ ತೋರ ಲಿಲ್ಲ. ಕತ್ತಲಾಗುತ್ತ ಬಂದಿತ್ತು, ಅವಳೊಬ್ಬಳೇ ಆ ಮನೆಯಲ್ಲಿ. ಆದರೆ