ಪುಟ:ಕಂಬನಿ-ಗೌರಮ್ಮ.pdf/೧೭೩

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

ನಾನೇನೂ ಮಾಡುವಂತಿರಲಿಲ್ಲ. ಕೊನೆಗೆ ಯಾರನ್ನಾದರೂ ಜೊತೆಗೆ ಕಳು ಹಿಸುತ್ತೇನೆಂದು ಹೇಳಿ ಹೊರಟ. ಬಾಯಲ್ಲಿ ಹೇಳುವಷ್ಟು ಸುಲಭವಾಗಿರ ಲಿಲ್ಲ ರಾಜಮ್ಮನ ಮನೆಗೆ ಜನರನ್ನು ಕಳುಹಿಸುವದು. ಅಂತೂ ಕೊನೆಗೆ ನಮ್ಮನೆಯ ಕೆಲಸದವಳನ್ನು ಆ ರಾತ್ರಿಯ ಮಟ್ಟಿಗೆ ಅಲ್ಲಿಗೆ ಹೋಗಲು ಒಪ್ಪಿಸಿದೆ. ಶಾಂತಿ ತಾನೂ ಅವಳೊಡನೆ ಹೋಗುತ್ತೇನೆಂದಳು. ನನ್ನ ಆಕ್ಷೇಪಣೆ ಇಲ್ಲದಿದ್ದರೂ ಪಾರ್ವತಿ ಅವಳನ್ನು ಕಳುಹಿಸಲು ಒಪ್ಪಲಿಲ್ಲ.

ಎರಡು ದಿನಗಳಿಂದ ನಿದ್ರೆ ಸರಿಯಾಗಿಲ್ಲದುದರಿಂದ ಆ ದಿನ ನಿದ್ರೆ ಚೆನ್ನಾಗಿ ಬಂದುಹೋಗಿತ್ತು ನನಗೆ. ಪಾರ್ವತಿಯು ಎಚ್ಚರಗೊಳಿಸಿರ ಲಿಲ್ಲ. ಅದರಿಂದ ಆ ದಿನ ನಾನು ಏಳುವಾಗ ಎಂಟು ಹೊಡೆದುಹೋಗಿತ್ತು, ಆಸ್ಪತ್ರೆಗೆ ಹೋಗಲು ಹೊತ್ತಾಗುವದೆಂದು ಅವಸರವಾಗಿ ಹೊರಟಿದ್ದೆ. ಗೇಟನ್ನು ದಾಟುವಾಗ ರಾತ್ರಿ ರಾಜಮ್ಮನ ಮನೆಗೆ ಹೋಗಿದ್ದ ನಮ್ಮ ಕೆಲಸದವಳು ಇದಿರಾಗಿ ಬಂದಳು. ಅವಸರದಲ್ಲಿ ರಾಜಮ್ಮನ ಸುದ್ದಿಯೇ ಮರೆತುಹೋಗಿತ್ತು ನನಗೆ. ಅವಳನ್ನು ನೋಡಿ ರಾಜಮ್ಮ ಹೇಗಿದ್ದಾಳೆ ಎಂದು ವಿಚಾರಿಸಿದೆ. ತಾನು ಬರುವಾಗ ಇನ್ನೂ ಎದ್ದಿರಲಿಲ್ಲವೆಂದೂ ನಿದ್ರೆ ಮಾಡುತ್ತಾಳೆಂದೂ ಹೇಳಿ ಅವಳು ತನ್ನ ಕೆಲಸಕ್ಕೆ ಹೊರಟು ಹೋದಳ.

ಆ ದಿನ ನನಗೂ ಸ್ವಲ್ಪ ಹೆಚ್ಚು ಕೆಲಸವಿತ್ತು, ಅದೇ ಮನೆಗೆ ಊಟಕ್ಕೆ ಬರುವಾಗ ಮೂರುಗಂಟೆಯಾಗಿತ್ತು. ಊಟವಾದ ಮೇಲೆ ನಾನೂ ಪಾರ್ವತಿಯ ಮಾತಾಡುತ್ತ ಕುಳಿತಿರುವಾಗ ಮಧ್ಯಾಹ್ನದ ಟಪ್ಪಾಲಿನಲ್ಲಿ ಬಂದ ಒಂದು ಕಾಗದವನ್ನು ಪಾರ್ವತಿ ಕೊಟ್ಟಳು. ಕಾಗದ ವನ್ನು ಬಿಡಿಸಿದೆ. ಅಕ್ಷರಗಳು ನನಗೆ ಪರಿಚಿತವಾಗಿರಲಿಲ್ಲ. ಯಾರ ಕಾಗದ ವಿರಬಹುದೆಂದು ಕುತೂಹಲದಿಂದ ಕೊನೆಯನ್ನು ನೋಡಿದೆ. ರಾಜಮ್ಮ! ನನಗೆ ತುಂಬಾ ಆಶ್ಚರ್ಯವಾಯು, ರಾಜಮ್ಮ ನನಗೆ ಬರೆಯುವಂತಹ ವಿಷಯವೇನು? ಆತರದಿಂದ ಓದತೊಡಗಿದೆ:

“ಡಾಕ್ಟ್ರೇ,

ನನ್ನಂತವಳ ಮೇಲೆ ಜನರಿಗೆ ಕರುಣೆ ಇರುವುದು ಅಪರೂಪ.

೧೩೩