ಪುಟ:ಕಂಬನಿ-ಗೌರಮ್ಮ.pdf/೧೭೪

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ
೧೩೪

ನನ್ನಂತವರಿಗೆ ಕಷ್ಟ ಬಂದಾಗ ಸಹಾಯ ಮಾಡುವುದು ಸಹ ಮನುಷ್ಯ ಧರ್ಮಕ್ಕೆ ವಿರೋಧವೆಂದು ಭಾವಿಸುವವರೇ ಹೆಚ್ಚು. ಇಷ್ಟು ದಿನ-ಈಗ ನಾಲ್ಕು ವರ್ಷ ನಾನು ಯಾರಿಂದಲೂ ಸಹಾಯವನ್ನಾಗಲಿ ಸಹಾನುಭೂತಿ ಯನ್ನಾಗಲಿ ಅಪೇಕ್ಷಿಸಿದವಳಲ್ಲ. ಮೊನ್ನೆ ಮಗುವಿಗೆ ಒಂದೇ ಸಾರಿ ಜ್ವರ ಜೋರಾಯಿತು.

"ಸುಬ್ಬು ವಿನಾ ನನ್ನ ಮನೆಯ ಕಡೆಗೆ ಮತ್ತಾರೂ ಸುಳಿಯು ವುದಿಲ್ಲ. ಅವನನ್ನೇ ಕಳುಹಿಸಿದೆ ಡಾಕ್ಟರನ್ನು ಕರೆದುಕೊಂಡು ಬರುವು ದಕ್ಕೆ, ತಾವು ಮನೆಯಲ್ಲಿರಲಿಲ್ಲ.....ರ ಮನೆಗೆ ಕಳುಹಿಸಿದೆ. ಅವರು ನಿರ್ದಾಕ್ಷಿಣ್ಯವಾಗಿ ಬರುವುದಿಲ್ಲ ಎಂದು ಹೇಳಿ ಕಳುಹಿಸಿಬಿಟ್ಟರು. ಪುನಃ ನಿಮಗೆ ಹೇಳಿಕಳುಹಿಸಿದೆ. ನೀವು ಬೆಳಗ್ಗೆ ಬರುವೆನೆಂದುಬಿಟ್ಟಿರಿ. ಈ ಮಧ್ಯೆ ಮನುವಿಗೆ ನಿಮಿಷ ನಿಮಿಷಕ್ಕೆ ಜೋರಾಗುತ್ತಿತ್ತು, ಕಾಲಿಗೆ ಬಿದ್ದಾದರೂ ಕರೆದುಕೊಂಡು ಬಾ ಎಂದು ತಿರುಗಿ ಸುಬ್ಬುವನ್ನು ಕಳು ಹಿಸಿದೆ. ನಿಮಗೇನೋ ದಯೆ ಬಂತು, ನೀವು ಬಂದಿರಿ. ಆದರೆ ಮನು ವನ್ನು ಇಟ್ಟುಕೊಳ್ಳುವ ಭಾಗ್ಯ ನನಗಿರಲಿಲ್ಲ. ಅವನು ಹೊರಟುಹೋದ.

"ನಾನು ಯಾರು-ವನು ಯಾರು ? ನನಗೆ ಸಂಬಂಧ ವೇನು? ಎಂದು ಮುಂತಾಗಿ ನೀವು ಯೋಚಿಸಬಹುದು. ನನ್ನ ವಿಷಯ ವಾಗಿ ಜನರಾಡಿಕೊಳ್ಳುವ ಮಾತುಗಳನ್ನೂ ನೀವು ಕೇಳಿರಬಹುದು. ಹೌದು, ನನ್ನ ತಾಯಿ ಸೂಳೆಯಾಗಿದ್ದಳು. ನಾನೂ ಅದೇ ವೃತ್ತಿಗಾಗಿ ತಯಾರುಮಾಡಲ್ಪಟ್ಟಿದೆ. ನನ್ನ ತಾಯಿಯು ನನ್ನಿಂದ ತುಂಬ ಹಣ ಸಂಪಾದಿಸಲು ಬಯಸುತ್ತಿದ್ದಳು. ಅವಳ ಬಯಕೆಯ ನಿರರ್ಥಕವಾಗು ವಂತಿರಲಿಲ್ಲ. ಏಕೆಂದರೆ ಅನೇಕ ಗಣ್ಯಮಾನ್ಯ ಧನಿಗಳು ನನ್ನನ್ನು ಮೆಚ್ಚಿ ಮನಸೋತಿದ್ದರು. ಆದರೆ ಮನುವಿನಿಂದಾಗಿ ನನ್ನ ತಾಯಿಯ ಆಶೆ ನಿರಾಶೆಯಾಗಬೇಕಾಯಿತು. ಮನು-ಮೋಹನ ಎಂತ ಅವನ ಹೆಸರು- ಭಾಗ್ಯವಂತರ ಒಬ್ಬನೇ ಮಗ. ಚಿಕ್ಕಂದಿನಲ್ಲೇ ತಂದೆತಾಯಿಯರನ್ನು ಕಳೆದುಕೊಂಡಿದ್ದುದರಿಂದ ಹೇಳುವವರು ಕೇಳುವವರು ಯಾರೂ ಇರ ಲಿಲ್ಲ ಅವನಿಗೆ, ಒಂದು ದಿನ ನನ್ನ ತಾಯಿಯ ಹಳೆಯ ಸ್ನೇಹಿತನೊಬ್ಬನು