ಪುಟ:ಕಂಬನಿ-ಗೌರಮ್ಮ.pdf/೧೭೬

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ
೧೩೬

ಅದರ ಮೇಲೆ ನಾನಲ್ಲಿರುವುದೇ ಕಷ್ಟವಾಯಿತು. ಕೊನೆಗೆ ನಾನೂ |ಮನುವೂ ಊರು ಬಿಟ್ಟು ಇಲ್ಲಿಗೆ ಬಂದುಬಿಟ್ಟೆವು. ದಿನಗಳು ಕಳೆದಂತೆ ಮನುವಿನ ಒುದ್ದಿ ಸಂಪೂರ್ಣವಾಗಿ ಲೋಪವಾಗಿಹೋಯ. ಏನೇನು ಮಾಡಿದರೂ ಅವನಿಗೆ ವಾಸಿಯಾಗಲಿಲ್ಲ. ಕೇವಲ 1 ಕಾಣಿ' ಎಂದು ನನ್ನನ್ನು ಕೂಗುವುದಲ್ಲದೆ ಹೆಚ್ಚಿನ ಮಾತುಗಳನ್ನೇ ಆಡುತ್ತಿರಲಿಲ್ಲ. ಆದರವನಿಗೆ ನಾನು ಹತ್ತಿರವಿರುವುದು ತಿಳಿಯುತ್ತಿತ್ತು. ನಾನೆಲ್ಲಾದರೂ ಸ್ವಲ್ಪ ಅತ್ತಿತ್ತ ಹೋದರೆ 'ರಾಣೀ ' ಎನ್ನುತ್ತಿದ್ದ. ಮೂರು ವರ್ಷಗಳಿಂದ ನಾವಿಬ್ಬರೂ ಈ ಮನೆಯಲ್ಲಿದ್ದೆವು. ಈಗ ಆವನಿಲ್ಲ. ಮತ್ತೆ ನಾನು

""ಡಾಕ್ಟ್ರೇ, ನಾನು ನಿನಗಿದೆಲ್ಲಾ ಬರೆಯುತ್ತಿರುವೆನೇಕೆ ? ಇಷ್ಟು ವರ್ಷಗಳಲ್ಲಿ ನಮ್ಮಿಬ್ಬರ ವಿಷಯದಲ್ಲಿ ಮನುಷ್ಯಚಿತವಾದ ಕರುಣೆಯಿಂದ ವರ್ತಿಸಿದವರು ನೀವು ಮತ್ತು ಸುಬ್ಬು ಇಬ್ಬರೆ. ಅದರಿಂದ ನಿನಗೆ ಹೇಳಿ ಹೋಗುವ ಸಲುವಾಗಿ ಇದನ್ನು ಬರೆಯಬೇಕಾಯು, ನೀವೆ, ಮನುವಿನ ಕೊನೆಗಾಲದಲ್ಲಿ ಮೂಡಿದ ಸಹಾಯ ಎಂದೂ ಮರೆಯು ವಂತಿಲ್ಲ. ನನ್ನಂಥ ದರಿದ್ರ ಪ್ರಾಣಿ ನಿಮಗೆ ಯಾವ ಪ್ರತಿಫಲವನ್ನು ಕೊಡಬಲ್ಲರು ? ದೇವರೇ ನಿಮಗೆ ಒಳ್ಳೆಯದನ್ನು ಮಾಡಬೇಕು.

ರಾಜಮ್ಮ"

ಓದಿ ಪಾರ್ವತಿಯ ಕೈಗೆ ಕೊಟ್ಟೆ. ಅವಳೂ ಓದಿದಳು, ಕಣ್ಣು ಗಳೆರಡರಲ್ಲಿ ನೀರು ತುಂಬಿತ್ತು. ನಾನೆಂಥಾ ಪಾಸಿ' ಎಂದುಕೊಂಡಳು. ನನ್ನ ಮನಸ್ಸು ಏನೋ ಒಂದು ತರವಾಗಿತ್ತು, ಅದೂ ಪಾರ್ವತಿಯು ಮಾತನ್ನೇ ಹೇಳುವಂತೆ ' ನಾನೆಂಥಾ ಪಾಪಿ!' ಎಂದಿತು.

ಆದಿನ ಸಾಯಂಕಾಲ ತಿರುಗಾಡಲು ಹೊರಡುವಾಗ ಪಾರ್ವ ತಿಯು ತಾನೂ ಬರುತ್ತೇನೆಂದಳು. ಇಬ್ಬರೂ ರಾಜಮ್ಮನ ಮನೆಗೇ ಹೋದೆವು. ಆದರೆ ನಾವು ಹೋಗುವ ಮೊದಲೇ ಅವಳು ಹೊರಟು ಹೊಗಿದಳು~ ಎಲ್ಲಿಗೋ ಯಾರಿಗೆ ಗೊತ್ತು.!

ಮಾರ್ಚ ೧೯೩೬