ಪುಟ:ಕಂಬನಿ-ಗೌರಮ್ಮ.pdf/೨೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಕಂಬನಿ

'ಇದು ಹೆಣ್ಣುಮಕ್ಕಳ ಕೃತಿ-ಎಂಬ ಪೊಳ್ಳು ಸಹಾನುಭೂತಿಯ ಹೊರೆಯನ್ನು ನಾವೆಷ್ಟು ದಿನ ಹೊತ್ತಿರಬೇಕು? ಇದರಿಂದ ಗಂಡಸರು ನಮ್ಮ ಸಾಹಿತ್ಯವನ್ನು ತೃಪ್ತಿದಾಯಕವಾಗಿ ಒಪ್ಪಿದಂತಾಯಿತೇ? ಅವರು ನಮ್ಮ ಸಾಹಿತ್ಯವನ್ನು ಗಂಡಸರು ಬರೆಯುವ ಸಾಹಿತ್ಯವನ್ನು ನೋಡುವ ದೃಷ್ಟಿಯಲ್ಲೊಮ್ಮೆ ನೋಡಲಿ-ಇಲ್ಲ ನೋಡಲಾರೆರವರು. ಎಂತಲೆ ನಿರ್ಭಾಗ್ಯ 'ರಂಗವಲ್ಲಿ'ಯ ಅದೃಷ್ಟಕ್ಕೆ ಒಂದು ಸರಿಯಾದ ವಿಮರ್ಶೆ ಬರೆಯುವ ಪುಣ್ಯಾತ್ಮರೂ ಇಲ್ಲ!' ಎನ್ನುತ್ತಿದ್ದರು.

ಗೌರಮ್ಮನವರ ಎಳೆಯತನದಲ್ಲಿಯೇ ಅವರ ತಾಯಿ ತೀರಿದ್ದರು. ಒಮ್ಮೊಮ್ಮೆ ಅವರಿಗೆ ಉಂಟಾಗುವ ತಾಯದ ನೆನಪು ಅವರನ್ನು ಬಹಳ ಶೋಕಕ್ಕೀಡುಮಾಡುತ್ತಿತ್ತು. ನಮ್ಮ ತಾಯಿಯನ್ನು ಕಂಡರೆ ಗೌರಮ್ಮನವರಿಗೆ ಬಹಳ ಇಷ್ಟ. ನಮ್ಮ ತಾಯಿಗೂ ಗೌರಮ್ಮನವರೆಂದರೆ ಅಷ್ಟು ಪ್ರೀತಿ. 'ನಮ್ಮ ಮನೆಗೆ ಅವನನ್ನು ಕಳಿಸಿಕೊಡಿ; ಈಗ ಇಲ್ಲಿ ಕಾವೇರಿ ಜಾತ್ರೆ. ಅವರಿಗೆ ಕಾವೇರಿ ಸ್ನಾನ ಮಾಡಿಸಿ ಕೂಡಲೆ ಕಳಿಸುವ ಭಾರ ಹೊತ್ತುಕೊಳ್ಳುತ್ತೇನೆ!' ಎಂದು ಬರೆದರು. ನಮ್ಮ ತಾಯಿ ಹೋಗಲು ಆತುರಪಟ್ಟರೂ ಬಹಳ ದೂರ ಎಂದು ನಾವು ಕಳಿಸಲಿಲ್ಲ. 'ಅವ್ವ ಮಗಳ ಮನೆಗೆ ಹೋಗಲು ಹಟ ಹಿಡಿದಿದ್ದಳು' ಎಂದು ಬರೆದು ಕಳಿಸದಿದ್ದುದಕ್ಕೆ ಏನೇನೋ ಕಾರಣ ಒಡ್ಡಿ ಕ್ಷಮೆ ಬೇಡಿಕೊಂಡಿದ್ದೆ. ಕೂಡಲೆ ಉತ್ತರ ಬಂತು:

'ಅಮ್ಮ ಮಗಳ ಮನೆಗೆ ಹೋಗಲು ಹಟ ಹಿಡಿದಳು-ಎಂದು ಬರೆದಿದ್ದೀರಿ. ನಿಮಗೆ ನಿಜವನ್ನು ಹೇಳುವುದಾದರೆ ನಾನು ಇಷ್ಟೊಂದು ಬೇಗ ಪ್ರತ್ಯುತ್ತರ ಬರೆಯಲು ಆದೆಂದು ವಾಕ್ಯ ಮುಖ್ಯ ಕಾರಣವೆಂದು ಹೇಳಬೇಕು. 'ಅವ್ವ ಮಗಳ ಮನೆಗೆ ಹೊಗಳು ಹಟ ಹಿಡಿದಳು' ಎಂಬುದನ್ನು ಓದಿ ನನಗೆ ಎಷ್ಟೊಂದು ಸಂತೋಷವಾಯಿತೆಂಬುದು ನಿಮಗೆ ಹೇಗೆ ತಿಳಿಯಬೇಕು? ನೀವು ಹುಡುಗಿಯಲ್ಲ-ಸಾಲದುದಕ್ಕೆ ನಿನ್ನ ಅಪ್ಪ ಯಾವಾಗಲೂ ನಿಮ್ಮ ಹತ್ತಿರದಲ್ಲೇ ಇರುತ್ತಾರೆ. ಅದರಿಂದಲೇ ಅದರ ಬೆಲೆ ನಿಮಗೆ