ಪುಟ:ಕಂಬನಿ-ಗೌರಮ್ಮ.pdf/೪೪

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಆ ಮನೆಯಲ್ಲಿ ವಾಣಿ ಮತ್ತು ಅವಳ ಗಂಡ ರತ್ನ ಇಬ್ಬರೇ. ರತ್ನ ಆ ಊರಿಗೆ ಹೊಸದಾಗಿ ವರ್ಗವಾಗಿ ಬಂದ ಡಾಕ್ಟರ್. ಊರಿಗೆ ಒಬ್ಬನೇ ಡಾಕ್ಟರ್ ಆದುದರಿಂದ ಊಟ ತಿಂಡಿಗಳಿಗೆ ಸಹ ಬಿಡುವಿಲ್ಲದಷ್ಟು ಕೆಲಸ ಅವನಿಗೆ ವಾಣಿಗಂತೂ ಮನೆಯೊಳಗೊಬ್ಬಳೇ ಇರುವುದಕ್ಕೆ ಬೇಸರ. ಅದರಿಂದ ಅವಳ ಮುಕ್ಕಾಲು ಸಮಯವೆಲ್ಲಾ ಇಂದುವಿನ ಮನೆಯಲ್ಲೇ ಕಳೆಯುತ್ತಿತ್ತು. ಇಂದುವೂ ಒಂದೆರಡು ಸಾರಿ ಅವಳ ಮನೆಗೆ ಹೋಗಿದ್ದಳು.

ಇಂದು ಮೊಟ್ಟಮೊದಲು ವಾಣಿಯ ಮನೆಗೆ ಹೋದಾಗ ಬಟ್ಟೆ-ಬರೆ, ಪಾತ್ರೆ-ಪದಾರ್ಥಗಳೆಲ್ಲಾ ಮನೆತ. ಅಸ್ತವ್ಯಸ್ತವಾಗಿ ಬಿದ್ದಿದ್ದುವು. ವಾಣಿ 'ಏನೋ ಹೊಸದಾಗಿ ಬಂದುದರಿಂದ ಮನೆಯನ್ನಿನ್ನೂ ವ್ಯವಸ್ಥಿತರೀತಿಗೆ ತರಲು ಸಮಯವಾಗಲಿಲ್ಲ' ಎಂದು ಹೇಳಿದರೂ ತನ್ನ ಮನೆಯನ್ನು ಸದಾ ಸುವ್ಯವಸ್ಥಿತರೀತಿಯಲ್ಲಿಟ್ಟುಕೊಂಡಿದ್ದ ಇಂದುಗೆ 'ಬಂದು ಹದಿನೈದು ದಿನಗಳಾದರೂ ಇನ್ನೂ ಸಮಯವಾಗಿಲ್ಲವೇ?' ಎಂದು ಆಶ್ಚರ್ಯ ಆ ದಿನ ಅವುಗಳನ್ನೆಲ್ಲಾ ಸರಿಮಾಡಿಡಲು ವಾಣಿಗೆ ನೆರವಾದಳು. ಮಧ್ಯಾಹ್ನ ಎರಡು ಗಂಟೆಗೆ ಕೆಲಸ ಸುರು ಮಾಡಿದ್ದರೂ ಎಲ್ಲವನ್ನೂ ಸರಿಯಾಗಿ ಮಾಡುವಾಗ ಕತ್ತಲಾಗುವ ಸಮಯವಾಗಿತ್ತು. ಅಂತ ಎಲ್ಲಾ ಮುಗಿಯುವಾಗ ಮನೆಯ ಸ್ವಚ್ಛವಾಗಿ, ಸುಂದರವಾಗಿ ತೋರಿತು.

ಈ ಕೆಲಸದಲ್ಲಿ ವಾಣಿಗೆ ಇಂದು ನೆರವಾದಳು ಎನ್ನುವುದಕ್ಕಿಂತ ಇಂದುಗೆ ವಾಣಿ ನೆರವಾದಳು ಎಂದರೆ ಸರಿಯಾಗಬಹುದು. ಮುಕ್ಕಾಲು ಕೆಲಸ ಮಾಡಿದವಳು ಇಂದು. ಯಾವ ಯಾವ ಪದಾರ್ಥವನ್ನು ಎಲ್ಲೆಲ್ಲಿ ಇಡಬೇಕು; ಹೇಗೆ ಇಟ್ಟರೆ ಹೆಚ್ಚು ಸುಂದರವಾಗಿ ತೋರಬಹುದು ಎಂದು ಆಲೋಚಿಸಿ ಸರಿಮಾಡಿ ಅಣಿಯಾಗಿಟ್ಟವಳು ಇಂದು. ಇಂದು ಹೊರಲಾರದ ದೊಡ್ಡ ದೊಡ್ಡ ವಸ್ತುಗಳನ್ನು ಎತ್ತಿಡಲು ಸಹಾಯ ಮಾಡುವುದು ಅಥವಾ ಅವಳು ಹೇಳಿದ ಸಾಮಾನುಗಳನ್ನು ತಂದುಕೊಡುವುದು-ಇವು ವಾಣಿ ಮಾಡಿದ ಕೆಲಸ. ಅಂತೂ ಅವರ ಕೆಲಸ