ಪುಟ:ಕಂಬನಿ-ಗೌರಮ್ಮ.pdf/೪೮

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ರತ್ನನಿಗೇನೋ ಹಿಂದೆ ಅನೇಕ ಸಾರಿ ಈ ತರದ ಅನುಭವಗಳಾಗಿದ್ದರೂ ಇಂದುವಿಗೆ ಆಗಲೇ ಅದರ ಬುದ್ದಾದ ಅನುಭವ. ತಾನು ವಾಣಿಯ ಸಮಯವನ್ನು ಹಾಳುಹರಟೆಯಲ್ಲಪಯೋಗಿಸಲು ಸಹಾಯಕಳಾದೆನಲ್ಲಾ ಎಂದು ಬಹಳ ಬೇಸರವೂ ಆಯ್ತು. ಬಾಗಿಲ ಸಂದಿನಿಂದ ದಣಿದು ಬೆಂಡಾಗಿದ್ದ ರತ್ನನನ್ನು ನೋಡುತ್ತಿದ್ದಂತೆ ಮನಸ್ಸಿನಲ್ಲಿ ಈ ಭಾವನೆಗಳು ಮೂಡುತ್ತಿದ್ದುವು. ಮತ್ತೆ ಎಂದೂ ಇಲ್ಲದ ಏನೇನೋ ಯೋಚನೆಗಳು ಒಂದರ ಮೇಲೊಂದಾಗಿ ಒರೆಸಿದವು. ಅವುಗಳನ್ನೈ: ಹಿಂಲಿಸುನಂತೆ ನಿಡಿದಾದ ನಿಟ್ಟುಸಿರೊಂದು ಹೊರಬಿತ್ತು. ಕಣ್ಣೀರ ಕಾಲುವೆಯೊಡೆಯಲು ಇಷ್ಟೇ ಸಾಕಾಯಿತು. 'ಅಯ್ಯೋ ದೇವರೇ' ಎಂದು ಉಕ್ಕುತ್ತಿದ್ದ ಕಣ್ಣೀರನ್ನು ಸೆರಗಿನಿಂದ ಒರಸುತ್ತಾ ಒಳಗೆ ಬಂದಳು. ಆ ಹೊತ್ತಿಗೆ ವಾಣಿರತ್ನರೂ ತಮ್ಮನೆಯ ಜಗಲಿ ತಲಪಿದ್ದರು.

ಇಂದು ಒಳಗೆ ಬಂದಳು, ಒಂದೇ ಒಂದು ಗಳಿಗೆಯ ಹಿಂದೆ ಅವಳ ಜೀವನದಲ್ಲಿ ಶಾಂತಿಯಿತ್ತು-ಸಂತೋಷವಿತ್ತು-ಏನೋ ಒಂದು ತರದ ತೃಪ್ತಿಯ ಇತ್ತು. ಮತ್ತೆ ತನ್ನ ಮನೆ, ಆದರ ಸೌಂದರ್ಯ ಸ್ವಚ್ಛತೆಗಳಿಗಾಗಿ ಅಭಿಮಾನವಿತ್ತು. ಅದೆಕೋ-ಆ ಒಂದು ಗಳಿಗೆಯು ಹಿಂದಿದ್ದ ಅವಳ ಆ ಆನುವ ಅಭಿಮಾನ, ಶಾಂತಿ, ತೃಪ್ತಿ ಎಲ್ಲಾ ಇಂದು ಒಳಗೆ ಬರುವಾಗ ಮಾಯವಾಗಿದ್ದುವ, ಬದಲಾಗಿ ಇವುಗಳ ಸ್ಥಾನವನ್ನು ಹಿಂದೆಂದೂ ಇಂದುವನ್ನು ಬಾಧಿಸದ ಪ್ರಶ್ನೆಗಳು ಬಂದು ಆವರಿಸಿದ್ದುವು. 'ವಾಣಿಗೆ-ಯಾವದರ ಬೆಲೆಯನ್ನೂ ಅರಿಯದ ವಾಣಿಗೆ- ಎಲ್ಲವನ್ನೂ ಕೊಟ್ಟ ದೇವರು ತನ್ನ ಜೀವನವನ್ನೇಕೆ ಅಂಧಕಾರಮಯವನ್ನಾಗಿ ಮಾಡಿದ ? ' ಎಂಬುದು ಎಲ್ಲದುದಕ್ಕಿಂತಲೂ ಆವಳಿಗೆ ಬಲು ದೊಡ್ಡದಾದ ಪ್ರಶ್ನೆಯಾಗಿ ತೋರಿತು. ಎಷ್ಟು ಯೋಚಿಸಿದರೂ ಪ್ರತ್ಯುತ್ತರ ದೊರೆಯದ ಈ ಪ್ರಶ್ನೆಗಳಿಗೆ ಉತ್ತರವನ್ನು ಹುಡುಕುವದರಲ್ಲೇ ತಲ್ಲೀನಳಾದ ಇಂದು ಆ ದಿನ ಸಾಯಂಕಾಲ ಪುನಃ ವಾಣಿ ಬರುವತನಕವೂ ಕೂತಲ್ಲಿಂದ ಎದ್ದಿರಲಿಲ್ಲ. ಮಾಡಿಟ್ಟಿದ್ದ ಅಡಿಗೆಯೂ ಹಾಗೆಯೇ ಇತ್ತು.