ಪುಟ:ಕಂಬನಿ-ಗೌರಮ್ಮ.pdf/೫೪

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೧೪

ಒಂದು ಏಸ್ಪರಿನ್ ಮಾತ್ರೆ ಕೊಟ್ಟು ಬೇಗ ಬಾ-ಹೊತ್ತಾಗಿ ಹೋಗುತ್ತೆ' ಎಂದು ಸ್ವಲ್ಪ ಒರಟಾಗಿಯೇ ಹೇಳಿದ. ಬೇರೆ ಸಮಯದಲ್ಲಾಗಿದ್ದರೆ ಇಂದುವನ್ನು ನೋಡಿ ಔಷಧಿಕೊಡಲು ಅವನಿಗೆ ಯಾವ ಅಭ್ಯಂತರವೂ ಇರುತ್ತಿರಲಿಲ್ಲ. ದಿನ ಬೆಳಗಾದರೆ ನೋಡುವ ಇತರ ರೋಗಿಗಳ ಗುಂಪಿಗೆ ಅವಳು ಸೇರಿಹೋಗುತ್ತಿದ್ದಳು.

ಆದರೆ ಆಗ, ಇಂದುವನ್ನು ಮರೆಯಬೇಕೆಂದು ಯತ್ನಿಸುತ್ತಿರುವಾಗ, ಅವಳ ಮನೆಗೇ ಹೋಗಿ ಔಷಧಿ ಮಾಡಿಕೊಡಬೇಕೆಂದು ಬಲವಂತಪಡಿಸುವ ವಾಣಿಯ ಮಾತುಗಳು ಅವನಿಗೆ ಅಸಹ್ಯವಾಗಿದ್ದವು. ಇದು ಸರಳವಾಣಿಯ ಹುಡುಗಾಟಿಕೆಯ ಬುದ್ದಿಗೆ ತಿಳಿಯುವುದು ಹೇಗೆ? ಒಂದೇಸವನೆ ಹಠಮಾಡಿ ಕೊನೆಗೂ ರತ್ನನನ್ನು ಇಂದುವಿನ ಮನೆಗೆ ಎಳೆದೊಯ್ದಳು.

ಒಂದೇ ದಿನದಲ್ಲಿ, ಕೆಲವೇ ಗಂಟೆಗಳ ಅಂತರದಲ್ಲಿ, ಅದೂ ಅವಳ ಮನೆಯಲ್ಲೇ ರೋಗಿಯು ಅವಸ್ಥೆಯಲ್ಲಿ ಇಂದುವನ್ನು ಪುನಃ ನೋಡುವ ಪ್ರಸಂಗವು ಬರಬಹುದೆಂದು ರತ್ನ ಎಂದೂ ಯೋಚಿಸಿರಲಿಲ್ಲ. ಅದರಲ್ಲೂ ತಾನು ಇನ್ನೊಮ್ಮೆ ನೋಡುವಾಗ ಅವಳಳುವುದನ್ನು ನೋಡಬಹುದು; ಎಂಬುದು ಅವನು ಕನಸಿನಲ್ಲಿ ಸಹ ಊಹಿಸದ ಮಾತು. ಹೌದು; ಇಂದು ಅಳುತ್ತಿದ್ದಳು-ಬಿಕ್ಕಿ ಬಿಕ್ಕಿ ಚಿಕ್ಕಮಕ್ಕಳಂತೆ ಅಳುತ್ತಿದ್ದಳು. ತಲೆನೋವಿನ ಬಾಧೆಗಾಗಿ ತಾನಳುವುದಿಲ್ಲವೆಂದು ಗೊತ್ತಿದ್ದರೂ, ಅಳುವ ಕಾರಣವು ಏನೆಂದು ಅವಳಿಗೇ ತಿಳಿಯದಷ್ಟು ಸೂಕ್ಷ್ಮವಾಗಿತ್ತು.

ವಾಣಿ ಮೊದಲನೆಯ ಸಾರಿ ಬಂದುಹೋದ ತರುವಾಯ ಅವಳ ಅಳು ಸುರುವಾಗಿತ್ತು. ತಾನರೂ-ಸತ್ತರೂ ಬಂದು ನೋಡುವವರು ಯಾರೂ ಇಲ್ಲವೆಂಬ ಧೈರ್ಯದಿಂದಲೇ ಅಳು ನಿರಾತಂಕವಾಗಿ ಸಾಗಿತ್ತು. ಅವಳೆಣಿಸಿದಂತೆ ವಾಣಿ ಸಿನಿಮಾಕ್ಕೆ ಹೋಗದೆ ರತ್ನನನ್ನು ತಮ್ಮನೆಗೆ ಕರೆದುಕೊಂಡು ಬರುವಳೆಂದು ಅವಳಿಗೆ ಹೇಗೆ ಗೊತ್ತಾಗಬೇಕು ?

ಅವಳಳುವಿಗೆ ವಾಣಿ ರತ್ನ ಇಬ್ಬರಿಗೂ ತೋರಿದ ಒಂದೇ ಒಂದು