ಪುಟ:ಕಂಬನಿ-ಗೌರಮ್ಮ.pdf/೫೭

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಪಾಪಭೀರು. ಸಮಾಜದ ಕಟ್ಟು-ಕಟ್ಟಲೆಗಳನ್ನೇ ದೇವರ ನಿಯಮಗಳು ಎಂದು ತಿಳಿದು ಬೆಳೆದವಳು. ಅವಳಿಗೆ ತನ್ನೊಲವು ರತ್ನನ ಕಡೆ ತಿರುಗಿದೆ ಎಂಬುದರ ಅರಿವು ಆದಾಗಲೇ ಬಹಳ ಭಯವಾಯಿತು. ವಾಣಿ ಹೊರಟುಹೋದ ಮೇಲಂತೂ ಅವಳ ಭಯವು ಒಂದಕ್ಕೆ ಹತ್ತಾಗಿ ಬೆಳೆಯುತೊಡಗಿತು. ತನ್ನ ಶಾಂತ ಜೀವನ ಪ್ರವಾಹವನ್ನು ಕಲಕಿ ಕದಡಿಸುವ ಯೋಚನೆಗಳಿಗೆ ಹೃದಯದಲ್ಲೆಗೆ ಕೊಟ್ಟೆ ಹೇಗೆ ? ಏಕೆ ? ಎಂಬ ಪ್ರಶ್ನೆಗಳು ಸದಾ ಅವಳನ್ನು ಬಾಧಿಸತೊಡಗಿದವು. ಆದರೆ ಈ ಯೋಚನೆಗಳ ಜೊತೆಯಲ್ಲೇ ರತ್ನನ ಮೂರ್ತಿಯ ಆವಳ ಹೃದಯದಲ್ಲಿ ಮಡಿಹೋಗಿತ್ತು. ವಾಣಿಯ ಸತಿಯನ್ನು ತಾನು ಪ್ರೀತಿಸುವುದು ಅನುಚಿತ ಎಂಬುದು ಅವಳಿಗೆ ತಿಳಿದಿದ್ದರೂ ಆ ವಿಷಯದಲ್ಲವಳು ಏನೂ ಮಾಡಲಾರದವಳಾಗಿದ್ದಳು. ಅವನನ್ನು ಪ್ರೀತಿಸದಿರುವುದು ಅವಳ ಶಕ್ತಿಗೆ ಮೀರಿದ ಮಾತಾಗಿತ್ತು. ತನ್ನ ಈ ಅನುಚಿತ ಪ್ರೇಮವು ರತ್ನನಿಗೆಲ್ಲಿ ತಿಳಿದು ಬಿಡುವುದೋ ಎಂಬ ಭಯದಿಂದಲೇ ಅವಳು ವಾಣಿ ಹೊರಟು ಹೋದ ತರುವಾಯ ಆ ಕಡೆ ಸಹ ಹೋಗಲಿಲ್ಲ. ಹಿತ್ತಲಲ್ಲಿದ್ದ ಹೂಗಿಡಗಳ ಆರೈಕೆ ಮಾಡುವುದು ಸಹಾ ನಿಂತು ಹೋಯ್ತು. ತಾನಲ್ಲಿದ್ದಾಗ ನೆರೆಮನೆಯ ಹಿತ್ತಲಲ್ಲಿ ರತ್ನನ ಭೇಟಿಯಾಗಬಹುದೆಂಬ ಭಯವೇ ಇದಕ್ಕೆ ಕಾರಣ.

ಈಗಂತೂ ಹೋಗದ ಹೊತ್ತನ್ನು ಕೊಲ್ಲುವುದಕ್ಕೆ ಇಂದುವಿಗುಳಿದ ಒಂದೇ ಒಂದು ಸಾಧನ ಭಾವನಾಪ್ರಪಂಚದಲ್ಲಿ ಹಗಲು ಕನಸುಗಳನ್ನು ಹೆಣೆಯುವುದು; ಎಷ್ಟಾದರೂ ಇವೆಲ್ಲಾ ಕನಸುಗಳೇ ಎಂದು ಕಣ್ಣೀರು ತಂದುಕೊಳ್ಳುವುದು.

ವಾಣಿ ಇದ್ದಾಗ ಪ್ರತಿದಿನ ಇಂದುವನ್ನು ನೋಡುತ್ತಿದ್ದ ರತ್ನನಿಗೆ ಈಗವರಿಬ್ಬರೂ ಜೊತೆಯಾಗಿ ಇಲ್ಲದಂತಾದುದರಿಂದ ತುಂಬಾ ಬೇಸರವಾಯ್ತು. ದಿನಾ ಇಂದು ಅವರ ಮನೆಗೆ ಹೋಗುತ್ತಿದ್ದಾಗ ಸ್ವಲ್ಪ ಸ್ವಲ್ಪವಾಗಿ ಅವನ ಹೃದಯವನ್ನು ಕ್ರಮಿಸಿದ್ದರ ಅರಿವು ಅವನಿಗಾದುದು ಅವಳು ಒಮ್ಮೆಗೇ ಆ ಕಡೆ ಹೋಗುವದನ್ನು ನಿಲ್ಲಿಸಿದಾಗ. ಆಗ ಅವನಿಗೂಬ್ಬ

೧೭

3