ಪುಟ:ಕಂಬನಿ-ಗೌರಮ್ಮ.pdf/೬೦

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೨೦

ಮಿತಿಯಿಲ್ಲ ! ತನ್ನವರೆಂಬವರಿಲ್ಲದ ಇಂದು ಅದೆಲ್ಲಿಗೆ ಹೋಗಿರಬಹುದು ಎಂದವಳಿಗೆ. ಇದಿರು ಮನೆಯಲ್ಲಿ ವಿಚಾರಿಸಿದಳು. ಇಂದು ತನ್ನನ್ನು ಸಾಕಿದವರ ಮನೆಗೆ ಹೋಗಿರುವಳೆಂದು ತಿಳಿಯಿತು. ಇದನ್ನು ಕೇಳಿ ಅವಳಿಗೆ ಇನ್ನಷ್ಟು ಆಶ್ಚರ್ಯ. ತಾನೆಂದೆಂದಿಗೂ ಅವರ ಮನೆಗೆ ಹೋಗುವುದಿಲ್ಲವೆನ್ನುತ್ತಿದ್ದ ಇಂದು, ಈಗೇಕೆ ತಾನಾಗಿ ಅಲ್ಲಿ ಹೋದಳು ಎಂಬುದನ್ನು ತಿಳಿಯುವುದು ವಾಣಿಜು ಸರಳ ಶಕ್ತಿಗೆ ಮೀರಿದ ಮಾತಾಗಿತ್ತು. ಕೊನೆಗೂ ಅವಳಿಗೆ ಇಂದುವಿನ ಆಶ್ಚರ್ಯಕರವಾದ ವರ್ತನೆಯ ಕಾರಣವು ತಿಳಿಯಲಿಲ್ಲ. ತಿಳಿದಿದ್ದ ರತ್ನನೂ ಹೇಳುವ ಪ್ರಯತ್ನಕ್ಕೆ ಕೈ ಹಚ್ಚ ದುದರಿಂದ ಕೊನೆಯತನಕವೂ ವಾಣಿಗದು ಸಮಸ್ಯೆಯಾಗಿಯೇ ಉಳಿಯಿತು.

ಜುಲೈ ೧೯೩೮