ಪುಟ:ಕಂಬನಿ-ಗೌರಮ್ಮ.pdf/೭೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ಒಂದು ಪುಟ್ಟ ಚಿತ್ರ

೮-೪-೨೪

ಘು,

ಇಲ್ಲಿಂದ ಹೊರಟು ಹೋದ ಮೇಲೆ ಕಾಗದಗಳನ್ನೇ ಬರೆಯುತ್ತಿಲ್ಲವೇಕೆ? ನೀನು ಹೋದಂದಿನಿಂದಲೂ ನಿನ್ನ ಕಾಗದಗಳನ್ನಿದಿರು ನೋಡುತ್ತಿರುವುದೇ ನನಗೆ ಕೆಲಸವಾಗಿದೆ. ನೀನು ಇಲ್ಲಿದ್ದಾಗ ನನ್ನೊಡನೆ ಹೇಳಿದ ಮಾತುಗಳನ್ನೆಲ್ಲಾ ಮರೆತಂತಿದೆ. ರಘು, ಯಾವ ದಿನ ನಿನ್ನೊಡನೆ ಅಡ್ಡ ಹಾದಿಯಲ್ಲಿ ಕಾಲಿಟ್ಟಿನೋ ಆ ದಿನದಿಂದ ನನ್ನ ಮನಸ್ಸಿಗೆ ಶಾಂತಿಯಿಲ್ಲ. ಭಗವಂತನಿದಿರಿನಲ್ಲಿ ನಾನು ನಿನ್ನವಳೆ ಆದರೂ ಜನರಿಗೆ ತಿಳಿದರೆ ಅವರು ನನ್ನನ್ನು ತಿರಸ್ಕರಿಸದಿರಲಾರರು. ಜನರ ಕಣ್ಣಿದಿರಿನಲ್ಲೇ ನನ್ನನ್ನು ನಿನ್ನವಳನ್ನಾಗಿ ಮಾಡಿಕೊಳ್ಳುವೆಯೆಂದು ಹಿಂದೆ ನೀನು ಹೇಳಿದ್ದೆ. ನೀನು ಹೋಗಿ ಎರಡು ತಿಂಗಳುಗಳಾದರೂ ನಿನ್ನ ಸಮಾಚಾರವೇ ಇಲ್ಲ. ಅದೇಕೆ? ನಾನಿನ್ನು ನಿನಗೆ ಬೇಡವೇ? ನಾನು ಏನೂ ತಿಳಿಯದವಳಾಗಿದ್ದೇನೆ. ನೀನೇ ನನ್ನನ್ನು ಕೊಚ್ಚಿಗೆ ನೂಕಿದೆ; ನೀನು ಅಲ್ಲಿಂದ ನನ್ನನ್ನು ಎತ್ತದಿದ್ದರೆ ಇನ್ನಾರು ತಾನೆ ಎತ್ತುವರು? ದಮ್ಮಯ್ಯ, ನನ್ನ ಕೈ ಬಿಡಬೇಡ, ರಘು.

ನಿನ್ನೆ ಕೆಲವು ವರ್ಷಗಳ ಹಿಂದೆ ಒಬ್ಬನೊಡನೆ ಹೊರಟುಹೋಗಿದ್ದ ನಮ್ಮ ಮನೆಯ ಕೆಲಸದವಳ ಮಗಳು ಬಂದಳು. ಇಲ್ಲಿಂದ ಹೋಗುವಾಗ