ಪುಟ:ಕಂಬನಿ-ಗೌರಮ್ಮ.pdf/೯೪

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೫೪

ವಿಷಯಗಳು ತಿಳಿಯುವುದಾದರೆ ಲೋಕದಲ್ಲಿ ಎಷ್ಟೋ ಬದಲಾವಣೆಗಳು ಬಹು ಸುಲಭವಾಗಿ ಆಗಿ ಹೋಗುತ್ತಲಿದ್ದವು. ಈಗೆಣಿಸುವಾಗ ನಾನು ರಾಮವನ್ನು ನಿಂದಿಸಿದುದು ತಪ್ಪೆಂದು ತೋರಿದರೂ ಆಗ ನನಗೆ ಅದೇ ಸರಿಯೆಂದು ತೋರಿತ್ತು. ಆ ದಿನ ಲಿನ್ನಿಯ ಸುಖವನ್ನು ಕೋರಿ ನಾನಾಡಿದ ಕೆಲವು ಕ್ರೂರ ಶಬ್ದಗಳು ರಾಮುವನ್ನು ನಿಜವಾಗಿಯೂ ನೋಯಿಸುವಂತಹವುಗಳಾಗಿದ್ದವು. ಇಲ್ಲದಿದ್ದರೆ ರಾಮ-ಸರಳ ಮನಸ್ಸಿನ ರಾಮು-ಯಾರಿಗೂ ಹೇಳದೆ ಆ ರಾತ್ರಿ-ಅಮಾವಾಸ್ಯೆಯ ಕಗ್ಗತ್ತಲೆಯಲ್ಲಿ-ಚಿಕ್ಕಂದಿನಿಂದಲೂ ಸಾಕಿ ಸಲಹಿದ ತಾಯಿತಂದೆಯರಿಗಿಂತಲೂ ಹೆಚ್ಚಾದ ಅತ್ತೆ ಮಾವಂದಿರ ಆಶ್ರಯವನ್ನು ಬಿಟ್ಟು ಹೊರಟು ಹೋಗುವಷ್ಟು ಕಠಿನ ಮನಸ್ಸಿನವನಾಗಿರಲಿಲ್ಲ.

ಲಿನ್ನಿಗೆ ಒಳ್ಳೆಯದನ್ನು ಮಾಡಲು ಯತ್ನಿಸಿದ ನಾನು ಕೆಡುಕನ್ನೇ ಮಾಡಿದಂತಾಯಿತು. ರಾಮು ಹೊರಟು ಹೋದುದರ ಕಾರಣವು ಯಾರಿಗೂ ತಿಳಿದಿರಲಿಲ್ಲ. ಹೇಳಲು ನನಗೂ ಧೈರ್ಯವಾಗಲಿಲ್ಲ. ಲಿನ್ನಿಯ ನಗುಮುಖವು ಬಾಡಿರುವುದನ್ನು ನೋಡುವಾಗಲೆಲ್ಲಾ ನನ್ನ ಹೃದಯಕ್ಕಿರಿದಂತಾಗುತ್ತಿತ್ತು. ಸ್ನೇಹಿತೆಯೆಂದು ಪ್ರೀತಿಯಿಂದ ತನ್ನ ಮನೆಗೆ ನನ್ನನ್ನು ಕರೆತಂದುದರ ಪರಿಣಾಮವು ಅವಳಿಗೆ ತಿಳಿದಿದ್ದರೇನೆನ್ನುತ್ತಿದ್ದಳೋ! ನೆನಿಸಿ, ಲಿನ್ನಿಯ ಸ್ನೇಹವನ್ನು ಕಳೆದುಕೊಳ್ಳುವ ಸಂಭವವನ್ನು ಯೋಚಿಸಿ ಹೃದಯ ನಡುಗುತ್ತಿತ್ತು. ನನ್ನ ಪರಾಧವನ್ನು ಒಪ್ಪಿಕೊಳ್ಳುವ ಸಾಹಸ ಹಿಮ್ಮೆಟ್ಟುತ್ತಿತ್ತು.

ರಜ ಕಳೆಯುವದಕ್ಕೆ ಇನ್ನೂ ಎರಡು ದಿನಗಳಿರುವಾಗಲೆ ಶಾಲೆಗೆ ಹಿಂತಿರುಗಿದೆವು. ಬೇರೆ ಯಾವ ಹುಡುಗಿಯರೂ ಬಂದಿರಲಿಲ್ಲ; ನಾವಿಬ್ಬರೇ. ಲಿನ್ನಿಯೊಡನೆ ಕಳೆಯುವ ಪ್ರತಿಯೊಂದು ನಿಮಿಷವೂ ನನಗೆ ಅತ್ಯಮೌಲ್ಯವಾಗಿದ್ದರೂ ನನ್ನ ತಿಳಿಗೇಡಿತನದಿಂದ ಅವಳ ಜೀವನದ ಬೆಳಕನ್ನು ನಂದಿಸಿದ ನನಗೆ ಅವಳ ಮುಖವನ್ನು ನೋಡಲು ಹೆದರಿಕೆಯಾಗುಲಿತ್ತು. ರಜ ತೀರಿ ಹುಡುಗಿಯರೆಲ್ಲರೂ ಹಿಂತಿರುಗಿ ಬಂದಾಗ ಲಿನ್ನಿಯ ತುಂಟಾಟಿಕೆಯಿಲ್ಲದ ಹಾಸ್ಯರಹಿತ ಗಂಭೀರ ಮುಖ, ಇಳಿಬಿದ್ದ