ಪುಟ:ಕನ್ನಡದ ಬಾವುಟ.djvu/೧೬೪

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

________________

೧೩೧ ಬೆಟ್ಟವೊ, ಕೆರೆಯೋ, ಬೀದಿಯೊ, ಬನವೋ, ಮನೆಯೋ, ಮಹಲೋ, ಎಲ್ಲೆಲ್ಲು, ದಟ್ಟಿಗೆ ಕೂಡುವ, ಭಕ್ತಿಯನಾಡುವ, ಹರ್ಷವ ತೋಡುವ ಸವಿಸೊಲ್ಲು, ನಾಲ್ಮಡಿ ಕೃಷ್ಣನ ಸವಿಸೊಲ್ಲು. ಎಳೆಯರು ನಾಡಿನ ಬೆಳೆಸಿರಿಮೊಳೆಗಳು, ಆಡಿ, ಪಾಡಿ, ಕುಣಿಕುಣಿದಾಡಿ, ಓದುವ ಹೆಣ್ಣಳು ಗಂಡುಗಳುಲಿವರು, ಸಸಿಯನು ನೆಡುವರು, ಕೊಂಡಾಡಿ, ನಾಲ್ಮಡಿ ಕೃಷ್ಣನ ಕೊಂಡಾಡಿ. ಅರಿವನು ಹರಡುವ, ಸಿರಿಯನು ಬೆಳಸುವ, ಪರಿಪರಿ ಕೃಷಿಯನು ರೂಡಿಸುವ, ತನ್ನೊಂದೊಲುಮೆಗೆ ಮರುಗಿಸಿ ಹಲಬಗೆ ನಾಡಿಗರೊಂದೆನೆ ಕೂಡಿಸುವ, ಆಡುವ, ಹಾಡುವ, ಬರೆಯುವ, ಕೊರೆಯುವ, ಕಟ್ಟುವ ಕಳೆಗಳ ಹೂಡಿಸುವ, ಹೊಸ ಹೊಸ ತೆರದಲಿ ಮನವನು ಮುಟ್ಟುವ ಕವಿಗಳಿಗುತ್ಸವ ಮಾಡಿಸುವ, ಪ್ರೇಮದ ಸ್ವಾಮಿಗೆ, ಕೃಷ್ಣಗೆ, ಹಿರಿಯರು ಬಿನ್ನ ಹಗೈವರು ತಲೆಬಾಗಿ, ನೆಚ್ಚಿನ ಮೆಚ್ಚಿನ ಬಿನ್ನಹ ಕರಗಿಸೆ, ಹೃದಯವನೆರೆವನು ಮುಡಿಪಾಗಿ, ನಾಲ್ಮಡಿ ಕೃಷ್ಣನ ಮುಡಿಪಾಗಿ, ಕನ್ನಡ ದೇವಿಯ ಬಯಕೆಯ ಕಳಶದ ಸುಧೆ ಸುರಿದೆತ್ತಲು ಚೆನ್ನಾ ಯು; ಪ್ರೇಮದ ಸ್ವಾಮಿಯ ಕೃಷ್ಣನ ಭಕ್ತಿಯ ರಸ ಹರಿದೆತ್ತಲು ಹೊನ್ನಾ ಯು. ಮಂಗಳಮಯವಾಯಿತು ನಾಡು ; ಸಿಂಗರದಾ ಕನ್ನಡನಾಡು. ಪಡುಗಡಲಿನ ತೆರೆ ಮುದ್ದಾಡುವ ಕರೆ, ಹೊಳೆ ಹಾಲಿಳಿಯುವ ಘಟ್ಟದೆರೆ, ಪಂಪನ ರನ್ನನ ಪುಟವಿಡಿಸಿದ ಕಡೆ, ಹಂಪೆಯ ತಾಂಡವವಾಡಿದೆಡೆ, ಹೊಯ್ಸಳರೆತ್ತಲು ಕಡೆಯಿಸಿ ನಿಲಿಸಿದ ಗುಡಿಗಳ ಸೊಬಗಿನ ಕಣ್ಣ ಸೆಳೆ, ಜಲಜಲನು ಕುವ ಕಾಲುವೆ ಬಯಲಲಿ ಪಚ್ಚೆಯ ಪಯಿರಿನ ತುಂಬು ಬೆಳೆ ಮಂಗಳಮಯ ತಾನೆತ್ತಲು ನಾಡು, ಸಿಂಗರದಾ ಸಿರಿಗನ್ನಡನಾಡು. ಅತ್ತಲು, ತಾನೆತ್ತೆತ್ತಲು, ಒಮ್ಮನ, ಒಕ್ಕೊರಲಾಗುತ ಜನ ಕೂಡಿ, ನಿರ್ಮಲ ಚಿತ್ರನ, ಪುಣ್ಯ ಚರಿತ್ರನ, ಕೃಷ್ಣನ ಹರಸುತ ಜನ ಹಾಡಿ, ಜಯ ಜಯ ಎಂಬರು, ಬೆಳೆ ಬಾಳೆಂಬರು, ನಿನ್ನ ದು ಕನ್ನಡದೆದೆಯೊಲವೆಂಬರುಮಂಗಳ ಮಸಗಿತು ಮೈಸೂರರಮನೆ ; ಧನ್ಯತೆ ಪಡೆಯಿತು ಮೈಸೂರು, ಕನ್ನಡನಾಡಿನ ಮನ್ನಣೆ ಪಡೆಯಿತು ನಾಲ್ಮಡಿ ಕೃಷ್ಣನ ಮೈಸೂರು, ಎಂತೆನ್ನ ಬಗೆ ಹಾರುವುದು ನೆಗೆದು ಸಂದು ಮೈಸೂರ ಮೊತ್ತಮೊದಲೊಸಗೆ ಬೆಳೆದಂದು !