ಪುಟ:ಕನ್ನಡದ ಬಾವುಟ.djvu/೭೬

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

________________

೪೬ ನೋಡಾ ! ಲೋಕವೆಂಬ ಮಾಯೆಗೆ ಶರಣಚಾರಿತ್ರ ಮರುಳಾಗಿ ತೋರುವುದು ನೋಡಾ ! ಚೆನ್ನಮಲ್ಲಿಕಾರ್ಜುನನೊಲಿದ ಶರಣಂಗೆ ಮಾಯೆ ಇಲ್ಲ, ಮರಹಿಲ್ಲ, ಅಭಿಮಾನವೂ ಇಲ್ಲ. ಪಚ್ಚೆಯ ನೆಲಗಟ್ಟು, ಕನಕದ ತೋರಣ, ವಜದ ಕಂಭ, ಪವಳದ ಚಪ್ಪರವನಿಕ್ಕಿ ಮುತ್ತು ಮಾಣಿಕದ ಮೇಲುಕಟ್ಟೆ ಕಟ್ಟಿ ಮದುವೆಯ ಮಾಡಿದರು, ನಮ್ಮವರೆನ್ನ ಮದುವೆಯ ಮಾಡಿದರು. ಕಂಕಣ ಕೈದಾರ ಸ್ಥಿರ ಸೇಸೆಯನಿಕ್ಕಿ, ಚೆನ್ನ ಮಲ್ಲಿಕಾರ್ಜುನನೆಂಬ ಗಂಡಂಗೆನ್ನ ಮದುವೆಯ ಮಾಡಿದರು. ಜಲದ ಮಂಟಪದಮೇಲೆ ಉರಿಯ ಚಪ್ಪರವನಿಕ್ಕಿ, ಆಲಿಕಲ್ಲ ಹಸೆಯ ಹಾಸಿ, ಕಾಲಿಲ್ಲದ ಹೆಂಡತಿಗೆ, ತಲೆಯಿಲ್ಲದ ಗ೦ಡ ಬಂದು ಮದುವೆಯಾದನು. ಎಂದೆಂದೂ ಬಿಡದ ಬಾಳುವೆಗೆ ಕೊಟ್ಟರೆನ್ನ ಚೆನ್ನಮಲ್ಲಿಕಾರ್ಜುನನೆಂಬ ಗಂಡಂಗೆನ್ನ ಮದುವೆಯ ಮಾಡಿದರು. ಮಂಗಳವೇ ಮಜ್ಜನವೆನಗೆ, ವಿಭೂತಿಯೆ ಒಳುಗುಂದದರಿಸಿನವೆನಗೆ, ದಿಗಂಬರವೇ ದಿವ್ಯಾಂಬರವೆನಗೆ, ಶಿವಪಾದರೇಣುವೇ ಅನುಲೇಪನವೆನಗೆ, ರುದ್ರಾಕ್ಷಿಯೇ ಮೈ ದೊಡಿಗೆ ಎನಗೆ, ಶರಣರ ಪಾದಂಗಳೇ ತೊಂಡಿಲ ಬಾಸಿಗ ನೆನಗೆ, ಚೆನ್ನಮಲ್ಲಿಕಾರ್ಜುನನೇ ಗಂಡನೆನಗೆ, ಆನು ಚೆನ್ನಮಲ್ಲಿಕಾರ್ಜುನಂಗೆ ಮದುವಳಿಗೆ, ಎನಗೆ ಬೇರೆ ಶೃಂಗಾರವೇಕೆ ಹೇಳಿರಾ, ಬೆಟ್ಟದಮೇಲೊಂದು ಮನೆಯ ಮಾಡಿ ಮೃಗಂಗಳಿಗಂಜಿದಡೆಂತಯ್ಯ ! ಸಮುದ್ರದ ತಡೆಯಲ್ಲಿ ಮನೆಯ ಮಾಡಿ, ನೊರೆ ತೊರೆಗಳಿಗಂಜಿದಡೆಂತಯ್ಯ ! ಸಂತೆಯೊಳಗೊಂದು ಮನೆಯ ಮಾಡಿ ಶಬ್ದಕ್ಕೆ ನಾಚಿದಡೆಂತಯ್ಯ ! ಚೆನ್ನ ಮಲ್ಲಿಕಾರ್ಜುನದೇವ ಕೇಳಯ್ಯ ! ಲೋಕದೊಳಗೆ ಹುಟ್ಟಿರ್ದ ಬಳಿಕ ಸ್ತುತಿ ನಿಂದೆಗಳು ಬಂದಡೆ, ಮನದಲ್ಲಿ ಕೋಪವ ತಾಳದೆ ಸಮಾಧಾನಿಯಾಗಿರಬೇಕು. ಅಯ್ಯಾ ನೀ ಕೇಳಿದರೆ ಕೇಳು, ಕೇಳದಿರ್ದೊಡೆ ಮಾಣು, ನಾನಿನ್ನ ಹಾಡಿದಲ್ಲದೆ ಸೈರಿಸಲಾರೆನಯ್ಯ ! ಅಯ್ಯ ನೀ ಒಲಿದರೆ ಒಲಿ, ಒಲಿಯದಿರ್ದೊಡೆ ಮಾಣು, ನಾ ನಿನ್ನ ಪೂಜಿಸಿದಲ್ಲದೆ ಸೈರಿಸಲಾರೆನಯ್ಯ ! ಅಯ್ಯಾ, ನೀ ಮೆಚ್ಚಿ ದರೆ ಮೆಚ್ಚು ಮೆಚ್ಚದಿರ್ದೊಡೆ ಮಾಣು, ನಾನಿನ್ನ ನಪ್ಪಿದಲ್ಲದೆ ಸೈರಿಸಲಾರೆ ನಯ್ಯಾ ! ಅಯ್ಯ ನೀ ನೋಡಿದೊಡೆ ನೋಡು, ನೋಡದಿರ್ದೊಡೆ ಮಾಣು, ನಾನಿನ್ನ ನೋಡಿ ಹಿಗ್ಗಿ ಹಾರೈಸಿದಲ್ಲದೆ ಸೈರಿಸಲಾರೆನಯ್ಯ ! ಚೆನ್ನಮಲ್ಲಿಕಾರ್ಜು ನಯ್ಯ ನಾ ನಿನ್ನ ಪೂಜಿಸಿ ಹರುಷದೊಳೋಲಾಡುವೆನಯ್ಯ, ಸಾವಿಲ್ಲದ, ಕೇಡಿಲ್ಲದ, ರೂಹಿಲ್ಲದ ಚೆಲುವಂಗಾನೊಲಿದೆನವ್ವ, ಎಡೆ ಯಿಲ್ಲದ ಕಡೆಯಿಲ್ಲದ ತೆರಹಿಲ್ಲದ ಕುರುಹಿಲ್ಲದ ಚೆಲುವಂಗಾನೊಲಿದೆ ಎಲೆ ಅವ್ಯಾ, ನೀನು ಕೇಳಾ ತಾಯೆ, ಭಯವಿಲ್ಲದ ನಿರ್ಭಯ ಚೆಲುವಂಗೊಲಿದೆ. ಇದು ಕಾರಣ ಚೆನ್ನ ಮಲ್ಲಿಕಾರ್ಜುನ ಚೆಲುವ ಗಂಡನೆನಗೆ ಈ ಸಾವ ಕೆಡುವ ಗಂಡರನೆಯು ಒಲೆಯೊಳಗಿತ್ತು.