ಪುಟ:ಕನ್ನಡದ ಬಾವುಟ.djvu/೭೭

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

________________

ವೇದಶಾಸ್ತ್ರ ಪುರಾಣಾಗಮಂಗಳೆಲ್ಲ ಕೊಟ್ಟಣವ ಕುಟ್ಟುತ್ತ ನುಚ್ಚು ತೌಡು ಕಾಣಿ ಭೋ ! ಇವ ಕುಟ್ಟಲೇಕೆ ? ಅತ್ತಲಿತ್ತ ಹರಿವ ಮನದ ಶಿರವ ನರಿದಡೆ, ಬಚ್ಚ ಬರಿಯ ಬಯಲು ಚೆನ್ನಮಲ್ಲಿಕಾರ್ಜುನ. ಗಿರಿಯಲ್ಲದೆ ಹುಲ್ಲುಮೊರಡಿಯಲ್ಲಾಡುವುದೇ ನವಿಲು ? ಕೊಳನಲ್ಲದೆ ಕಿರಿವಳ್ಳಕ್ಕೆಳಸುವುದೆ ಹಂಸೆ ? ಮಾಮರ ತಳಿತಲ್ಲದೆ ಸ್ವರವುದೆ ಕೋಗಿಲೆ ? ಪರಿಮಳವಿಲ್ಲದ ಪುಷ್ಪಕ್ಕೆಳಸುವುದೇ ಭ್ರಮರ ? ಎನ್ನ ದೇವ ಚೆನ್ನಮಲ್ಲಿಕಾರ್ಜುನ ನಲ್ಲದೆ, ಅನ್ಯಕ್ಕೆಳಸುವುದೇ ಎನ್ನ ಮನ ಕೇಳಿರೆ, ಕೆಳದಿಯರಿರಾ? ಎನ್ನಂಗದಲ್ಲಿ ಆಚಾರವ ತೋರಿದನಯ್ಯ ಬಸವಣ್ಣನು. ಆಚಾರವೇ ಲಿಂಗವೆಂದರುಹಿದನಯ್ಯ ಬಸವಣ್ಣನು, ಎನ್ನ ಪ್ರಾಣದಲ್ಲಿ ಅರಿವ ತೋರಿದನಯ್ಯ ಬಸವಣ್ಣನು. ಅರಿವೇ ಜಂಗಮವೆಂದು ಅರುಹಿದನಯ್ಯ ಬಸವಣ್ಣನು. ಚೆನ್ನಮಲ್ಲಿಕಾರ್ಜುನಯ್ಯ, ಎನ್ನ ಹೆತ್ತ ತಂದೆ ಸಂಗನ ಬಸವಣ್ಣ ಎನಗೀ ಕ್ರಮವನರುಹಿದನಯ್ಯ, ಕಾಮನ ಗೆಲಿದೆನು ಬಸವಾ ನಿಮ್ಮ ದಯದಿಂದ. ಸೋಮಧರನ ಹಿಡಿ ತಪ್ಪೆನು ಬಸವಾ ನಿಮ್ಮ ಕೃಪೆಯಿಂದ. ನಾಮದಲ್ಲಿ ಹೆಂಗುಸೆಂಬ ಹೆಸರಾದ. ರೇನು, ಭಾವಿಸಲು ಗಂಡುರೂಪು, ಬಸವಾ ನಿಮ್ಮ ದಯದಿಂದ, ಅತಿ ಕಾಮಿ ಚೆನ್ನಮಲ್ಲಿಕಾರ್ಜುನಯ್ಯ೦ಗೆ ತೊಡರನಿಕ್ಕಿ ಎರಡುವರಿಯದೆ ಕೂಡಿದೆನು. ಬಸವಾ ನಿಮ್ಮ ಕೃಪೆಯಿಂದ, ಕಿಡಿ ಕಿಡಿ ಕೆದರಿದಡೆ, ಎನಗೆ ಹಸಿವು ತೃಷೆ ಅಡಗಿತೆಂಬೆನು. ಮುಗಿಲು. ಹರಿದುಬಿದ್ದರೆ, ಎನಗೆ ಮಜ್ಜನಕ್ಕೆರೆದರೆಂಬೆನು. ಗಿರಿ ಮೇಲೆ ಬಿದ್ದರೆ ಎನಗೆ ಪುಷ್ಪವೆಂಬೆನು ಚೆನ್ನಮಲ್ಲಿಕಾರ್ಜುನಯ್ಯಾ, ಶಿರ ಹರಿದು ಬಿದ್ದರೆ ಪ್ರಾಣ ನಿಮಗರ್ಪಿತವೆಂಬೆನು. ಚಂದನವ ಕಡಿದು ಕೊರೆದು ತೇದೊಡೆ, ನೊಂದೆನೆಂದು ಕಂಪ ಬಿಟತೆ? ತಂದು ಸುವರ್ಣವ ಕಡಿದೊರೆದೊಡೆ, ಬೆಂದು ಕಳಂಕ ಹಿಡಿದಿತೆ? ಸಂದು. ಸಂದು ಕಡಿದ ಕಬ್ಬನು ಗಾಣದಲಿಕ್ಕಿ ಬೆಂದು ಸಾಕಾಗುಳ್ಳ ಸಕ್ಕರೆಯಾಗಿ ನೊಂದೆನೆಂದು ಸವಿಯ ಬಿಟ್ಟಿತೆ? ನಾ ಹಿಂದೆ ಮಾಡಿದ ಹೀನಂಗಳೆಲ್ಲವ ತಂದು ಮು೦ದಿಳುಹಲು ನಿಮಗೆ ಹಾನಿಯೆ ? ಎನ್ನ ತಂದೆ ಚೆನ್ನ ಮಲ್ಲಿಕಾರ್ಜುನ, ದೇವಯ್ಯ ಕೊಂದೊಡೆ ಶರಣೆಂಬುದ ಮಾಣೆ, ತನು ನಿಮ್ಮ ರೂಪಾದ ಬಳಿಕ ನಾನಾರಿಗೆ ಮಾಡುವೆ ? ಮನ ನಿಮ್ಮ ರೂಪಾದ ಬಳಿಕ ನಾನಾರ ನೆನೆವೆ ? ಪ್ರಾಣ ನಿಮ್ಮ ರೂಪಾದ ಬಳಿಕ, ನಾನಾರ ನಾರಾಧಿಸುವೆ ? ಅರಿವು ನಿಮ್ಮಲ್ಲಿ ಸ್ವಯವಾದ ಬಳಿಕ, ನಾನಾರನರಿವೆ ? ಚೆನ್ನಮಲ್ಲಿಕಾರ್ಜುನಾ, ನಿಮ್ಮಲ್ಲಿ ನೀವಾಗಿ ನಿಮ್ಮಿಂದ ಮರೆದೆನಯ್ಯಾ, ಹಾವಿನ ಹಲ್ಲ ಕಳೆದು ಹಾವನಾಡಿಸಬಲ್ಲರೆ ಹಾವಿನ ಸಂಗವೇ ಲೇಸು. ಕಂಡಯ್ಯ, ಕಾಯದ ಸಂಗವೇ ಲೇಸು ಕಂಡಯ್ಯ, ತಾಯಿ ರಕ್ಕಸಿಯಾದಂತೆ