ಪುಟ:ಕನ್ನಡದ ಬಾವುಟ.djvu/೮೮

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

________________

೫೯ ನಿನ್ನ ಬಿಟ್ಟು ಅನ್ಯರ ಭಜಿಸಿದರೆನಗೆ ಆಣೆ ರಂಗ ಎನ್ನ ನೀ ಕೈಬಿಟ್ಟು ಪೋದರೆ ನಿನಗೆ ಆಣೆ ತನು ಮನ ಧನದಲ್ಲಿ ವಂಚಕನಾದರೆ ಎನಗೆ ಆಣೆ ರಂಗ ಮನಸು ನಿನ್ನಲ್ಲಿ ನಿಲಿಸದಿದ್ದರೆ ನಿನಗೆ ಆಣೆ ಕಾಕುಮನುಜರ ಸಂಗವ ಮಾಡಿದರೆನಗೆ ಆಣೆ ರಂಗ ಲೌಕಿಕವ ಬಿಡಿಸದಿದ್ದರೆ ನಿನಗೆ ಆಣೆ ಶಿಷ್ಟರ ಸಂಗವ ಮಾಡದಿದ್ದರೆ ಎನಗೆ ಆಣೆ ರಂಗ ದುಷ್ಟರ ಸಂಗವ ಬಿಡಿಸದಿದ್ದರೆ ನಿನಗೆ ಆಣೆ ಹರಿ ನಿನ್ನಾ ಶ್ರಯ ಮಾಡದಿದ್ದರೆ ಎನಗೆ ಆಣೆ ರಂಗ ಪುರಂದರವಿಠಲ ನೀನೊಲಿಯದಿದ್ದರೆ ನಿನಗೆ ಆಣೆ (x) ಈಸಬೇಕು ಇದ್ದು ಜೈಸಬೇಕು | ಹೇಸಿಕೆ ಸಂಸಾರದಲ್ಲಿ ಆಶಾಲೇಶಮಾಡದಂತೆ || ಪ || ತಾವರೆಯ ಜಲದಂತೆ ಪ್ರೇಮವಿಟ್ಟು ಭವದೊಳು ಸ್ವಾಮಿ ರಾಮನೆನುತ ಪಾಡಿ ಕಾಮಿತ ಕೈಕೊಂಬರೆಲ್ಲ ಗೇರುಹಣ್ಣಿನಲ್ಲಿ ಬೀಜ ಸೇರಿದಂತೆ ಸಂಸಾರದಿ ಮಾರಿ ಆಸೆ ಮಾಡದಂತೆ ಧೀರ ಕೃಷ್ಣನ ನೆನೆವರೆಲ್ಲ ಮಾಂಸದಾಸೆಗೆ ಮತೃ ಸಿಲುಕಿ ಹಿಂಸೆಪಟ್ಟ ಪರಿಯಂ: ಮೋಸಹೋಗದಂತೆ ಜಗದೀಶ ಪುರಂದರವಿಠಲನೆನುತ ಕನಕದಾಸರು ಸು. ೧೫೫೦ 11 ಪ || ತಲ್ಲಣಿಸದಿರು ಕಂಡ್ಯ ತಾಳು ಮನವೆ ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ ಬೆಟ್ಟದಾ ತುದಿಯಲ್ಲಿ ಹುಟ್ಟಿರುವ ವೃಕ್ಷಕ್ಕೆ ಕಟ್ಟೆ ಯನು ಕಟ್ಟ ನೀರೆರೆದವರು ಯಾರೊ ಪುಟ್ಟಿಸಿದ ಸ್ವಾಮಿ ತಾ ಹೊಣೆಗಾರನಾದಮೇಲೆ ಘಟ್ಟಿಯಾಗಿ ಸಲಹುವನು ಇದಕೆ ಸಂಶಯ ಬೇಡ