ಪುಟ:ಕನ್ನಡದ ಬಾವುಟ.djvu/೮೯

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

________________

ಅಡವಿಯೊಳಗಾಡುವಾ ಮೃಗಪಕ್ಷಿಗಳಿಗೆಲ್ಲ ಅಡಿಗಡಿಗೆ ಆಹಾರವಿತ್ತವರು ಯಾರೊ ಪಡೆದ ಜನನಿಯ ತೆರದೆ ಸ್ವಾಮಿ ಹೊಣೆಗೀಡಾಗಿ ಬಿಡದೆ ರಕ್ಷಿಸನಿದಕೆ ಸಂದೇಹ ಬೇಡ ಕಲ್ಲೊಳಗೆ ಹುಟ್ಟಿ ಕೂಗುವ ಕಪ್ಪೆಗಳಿಗೆಲ್ಲ ಅಲ್ಲಲ್ಲಿಗಾಹಾರವಿತ್ತವರು ಯಾರೊ ಬಲ್ಲಿದನು ಕಾಗಿನೆಲೆಯಾದಿಕೇಶವರಾಯ ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ

  • (ii) ನೀ ಮಾಯೆಯೊಳಗೊ ನಿನ್ನೊಳು ಮಾಯೆಯೊ ನೀ ದೇಹದೊಳಗೊ ನಿನ್ನೊಳು ದೇಹವೊ || ಪ || ಬಯಲು ಆಲಯದೊಳಗೊ ಆಲಯವು ಬಯಲೊಳಗೊ ಬಯಲು ಆಲಯವೆರಡು ನಯನದೊಳಗೊ ನಯನ ಬುದ್ಧಿಯೊಳಗೊ ಬುದ್ಧಿ ನಯನದೊಳಗೊ ನಯನ ಬುದ್ಧಿಗಳೆರಡು ನಿನ್ನೊಳಗೊ ಹರಿಯೆ ಸವಿಯು ಸಕ್ಕರೆಯೊಳಗೊ ಸಕ್ಕರೆಯು ಸವಿಯೊಳಗೊ ಸವಿಯು ಸಕ್ಕರೆಯೆರಡು ಜಿಹೈಯೊಳಗೊ ಜಿಹೈ ಮನಸಿನೊಳಗೊ ಮನಸು ಜಿಹೈಯೊಳಗೊ ಜಿಹ್ನೆ ಮನಸುಗಳೆರಡು ನಿನ್ನೊಳಗೊ ಹರಿಯೆ ಕುಸುಮದೊಳು ಗಂಧವೊ ಗಂಧದೊಳು ಕುಸುಮವೊ ಕುಸುಮ ಗಂಧಗಳೆರಡು ಘಾಣದೊಳಗೊ ಅಸಮಭವ ಕಾಗಿನೆಲೆಯಾದಿಕೇಶವರಾಯ ಉಸುರಲೆನ್ನಳವಲ್ಲ ಎಲ್ಲ ನಿನ್ನೊಳಗೊ

(iii) ಕುಲ ಕುಲ ಕುಲವೆನ್ನು ತಿಹರು ಕುಲ ಯಾವುದು ಸತ್ಯ ಸುಖವುಳ್ಳ ಜನರಿಗೆ || ಪ || ಕೆಸರೊಳು ತಾವರೆ ಪುಟ್ಟಲು ಅದ ತಂದು ಬಿಸಜನಾಭನಿಗರ್ಪಿಸಲಿಲ್ಲವೆ ಹಸುವಿನ ಮಾಂಸದೊಳುತತಿ ಕ್ಷೀರವು - ವಸುಧೆಯೊಳಗೆ ಭೂಸುರರುಣ್ಣಲಿಲ್ಲವೆ