ಪುಟ:ಕವಿಯ ಸೋಲು.pdf/೨೧

ವಿಕಿಸೋರ್ಸ್ದಿಂದ
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು
ಈ ಪುಟವನ್ನು ಪ್ರಕಟಿಸಲಾಗಿದೆ
ಕವಿಯ ಸೋಲು

ಸೈತಾನ್ ಬಂದನು ಇಲ್ಲಿಯೇ ನೆಲಸಲು
ಬೂದಿಯನೆರಚುತ ಬಣ್ಣವ ಬಳಿಯುತ
ಮಟ್ಟಿಯ ತಳೆಯುತ ಸೈತಾನ್ ಊದಲು
ಮಂತ್ರವ ಹೇಳುತ ಬಳಗವ ಕೂಗಲು
ತೆಗೆದರು ಶಿವದಾರವ ಜನಿವಾರ
ಹೊರಟರು ಸೈತಾನಿನ ಪರಿವಾರ
ಕಲ್ಲನು ಮಣ್ಣನು ಹೂಡಿದಲ್ಲಿ
ಬರಿ ಜಗಳವ ತಂದಿಕ್ಕಿದಲ್ಲಿ
ಇಲ್ಲದ ಭೇದವ ಮಾಡಿದರಿಲ್ಲಿ
ನಿಮ್ಮಯ ಸತ್ವವ ಹೀರಿದರಿಲ್ಲಿ
ಬೆಂಡಸು ಹೆಣವನು ತೋರಿದರಿಲ್ಲಿ
ಪರಮಾತ್ಮನ ಮರೆಮಾಡಿದರಿಲ್ಲಿ
ಸೈತಾನ್ ಮಾಡಿದ ಮೋಸವ ತಿಳಿದು
ನಿಮ್ಮಯ ಮನದಾ ಮೋಹನ ಕಳೆದು"
ಎಂದಾ ಜ್ಞಾನಿಯು ಹೇಳುತ್ತಿರಲು
ಜನರೆಲ್ಲಾ ರೇಗುತ ಕೂಗಿಡಲು
ಹಿಡಿದರು ಅವನನ್ನು ಪೊಲೀಸ್ ಜನರು-
ನ್ಯಾಯಸ್ಥಾನಕೆ ಎಳೆದಾಡಿದರು.

ನ್ಯಾಯಾಧೀಶರ ಸಮ್ಮುಖದಲ್ಲಿ
ತತ್ವಜ್ಞಾನಿಯು ಕುಳಿತಿಹನಲ್ಲಿ
ಏನೇನೆಂದರು ಮಾತಾಡದೆಯ
ಆರೇನೆಂದರು ತಾ ಕೇಳದೆಯೇ
ಕುಳಿತಿರುವನು ಗಾಢ ಸಮಾಧಿಯಲ್ಲಿ
ಸಾತ್ವಿಕ ಕಳೆಯನ್ನು ನೆರೆ ಬೀರುತಲಿ.

೧೧