ಪುಟ:ಕವಿಯ ಸೋಲು.pdf/೨೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಕವಿಯು ಸೋಲು

ಹೇಳುವ ಮಾತನು ಪೋಲೀಸ್ ಜನರು
ದೂರುವ ಮಾತನು ಗುಂಪಿನ ಜನರು
ನ್ಯಾಯಾಧೀಶನು ಕೇಳುತಲಾಗ
ಕೊಟ್ಟನು ತಿಂಗಳು ಶಿಕ್ಷೆಯನಾಗ.
ತತ್ವಜ್ಞಾನಿಯು ಕಣ್ಣನು ತೆರೆದು
ಜ್ಞಾನದ ಬೆಳಕಿನ ತೆರೆಯನು ತೆರೆದು
ಹೊರಡಲು, ಧರ್ಮದ ಮೂರುತಿ ಎಂದನು
“ ತಿಂಗಳು ಶಿಕ್ಷೆಯ ಕೊಟ್ಟಹೆನೀಗ
ಹೇಳುವ ಮಾತನು ಕೇಳುವೆನೀಗ
ಆಡುವುದಿದ್ದರೆ ನೀನಾಡುವುದು,


ತತ್ವಜ್ಞಾನಿಯು ನಸುನಗುತೆಂದನು
"ಧರ್ಮದ ಮೂರುತಿ ! ನಾನೇನೆಂಬೆನು
ಸತ್ಯವ ನುಡಿದರೆ ಜೈಲಿಗೆ ಹಾಕಿ
ಮಧ್ಯವ ನುಡಿದರೆ ಬಿರುದನ್ನು ಹಾಕಿ ;
ಲೋಕವೆ ಕೆಟ್ಟಿತು ಒಲು ದುಷ್ಯಾಲ
ಧರ್ಮಕೆ ಬಂದುದು ಬಲು ಬರಗಾಲ,
ಸತ್ಯದ ಮಾತಿಗೆ ಶಿಕ್ಷೆಯದುಂಟೆ ?
ಸತ್ಯವ ತಡೆಯುವ ಗೋಡೆಗಳುಂಟೆ ?
ಸತ್ಯವ ಬಿಗಿಯುವ ಸರಳುಗಳುಂಟೆ ?
ಸತ್ಯವ ಸೋಲಿಪ ಧೀರರದುಂಟೆ ?
ಲೋಕವೆ ದೊಡ್ಡದು ಬಂದೀಖಾನೆ
ಸೈತಾನ್ ಮಾಡಿದ ಬಂದೀಖಾನೆ,
ತತ್ವವ ತಿಳಿದರೆ ಗೋಡೆಗಳುರುಳಿ
ಪಂಚೇಂದ್ರಿಯ ಬಂಧನ ತಾನುರುಳಿ

೧೨